ಗಣ್ಯಾತೀಗಣ್ಯರಿಂದ ಮಾಸ್ಟರ್ ಹಿರಣ್ಣಯ್ಯ ಅಂತಿಮ ದರ್ಶನ
ಸಂಜೆ ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ಸಂಸ್ಕಾರ
Team Udayavani, May 2, 2019, 2:25 PM IST
ಬೆಂಗಳೂರು: ಇಂದು ಗುರುವಾರ ಬೆಳಗ್ಗೆ ಇಹಲೋಕ ತ್ಯಜಿಸಿದ ರಂಗಭೂಮಿ ದಿಗ್ಗಜ ಮಾಸ್ಟರ್ ಹಿರಣ್ಣಯ್ಯ ಅವರ ಅಂತಿಮ ದರ್ಶನವನ್ನು ಗಣ್ಯಾತೀಗಣ್ಯರು ಸೇರಿದಂತೆ ಸಾವಿರಾರು ಮಂದಿ ಪಡೆಯುತ್ತಿದ್ದಾರೆ.
ಬನಶಂಕರಿಯ 2 ನೇ ಹಂತದಲ್ಲಿರುವ ಹಿರಣ್ಣಯ್ಯ ಅವರ ನಿವಾಸ ಶಾಂತಿಸಾಗರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ,ಸಚಿವ ಡಿ.ಕೆ.ಶಿವಕುಮಾರ್ , ಮಾಜಿ , ಡಿಸಿಎಂ ಆರ್.ಅಶೋಕ್ , ಮುಖ್ಯಮಂತ್ರಿ ಚಂದ್ರು , ನಟರಾದ ಶ್ರೀನಾಥ್ , ದೇವ್‌ರಾಜ್, ದರ್ಶನ್, ಪ್ರಜ್ವಲ್ ದೇವ್‌ರಾಜ್ ಸೇರಿದಂತೆ ರಂಗಭೂಮಿ, ಸಿನಿಮಾ ಮತ್ತು ಕಿರುತೆರೆಯ ನೂರಾರು ಕಲಾವಿದರು ಆಗಮಿಸಿ ಹಿರಿಯ ಚೇತನಕ್ಕೆ ಅಂತಿಮ ನಮನ ಸಲ್ಲಿಸಿದರು.
ಸಂಜೆ ಮೆರವಣಿಗೆ ಬಳಿಕ ಅಂತ್ಯಕ್ರಿಯೆ
ಇಂದು ಸಂಜೆ4.30 ರ ವೇಳೆಗೆ ಬನಶಂಕರಿಯ ಚಿತಾಗಾರದಲ್ಲಿ ಬ್ರಾಹ್ಮಣ ವಿಧಿ ವಿಧಾನದಂತೆ ಹಿರಣ್ಣಯ್ಯ ಅವರ ಅಂತ್ಯ ಸಂಸ್ಕಾರ ನಡೆಯಲಿದೆ. ಇದಕ್ಕೂ ಮುನ್ನ ನಿವಾಸದಿಂದ ವಿಶೇಷ ಅಲಂಕೃತ ವಾಹನದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರ ಅಂತಿಮ ಯಾತ್ರೆಯ ಮೆರವಣಿಗೆ ನಡೆಯಿದೆ. ಈಗಾಗಲೆ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ.
ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ 86 ರ ಹರೆಯದ ಮಾಸ್ಟರ್ ಹಿರಣ್ಣಯ್ಯ ಅವರು ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.
ಫೋಟೋ: ಫಕ್ರುದ್ದೀನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.