ಮೇ 29ರ ಕಾಂಗ್ರೆಸ್ ಶಾಸಕಾಂಗ ಸಭೆ ಮೇಲೆ ಕುತೂಹಲ
Team Udayavani, May 26, 2019, 6:10 AM IST
ಬೆಂಗಳೂರು: ಲೋಕಸಭೆ ಚುನಾವಣೆ ಸೋಲಿನ ಬೆನ್ನಲ್ಲೇ ಮೇ 29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು ಕುತೂಹಲ ಮೂಡಿಸಿದೆ. ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಪರಾಮರ್ಶಿಸಲು ಶಾಸ ಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎಂದು ಸಿಎಲ್ಪಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಎಲ್ಲ ಶಾಸಕರಿಗೆ ಪತ್ರ ರವಾನೆ ಮಾಡಿದ್ದಾರೆ.
ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಇದೇ ಮೊದಲ ಬಾರಿಗೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಪ್ರಮುಖ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ. ನಗರದ ಅಶೋಕಾ ಹೊಟೇಲ್ನಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಉಪ ಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ್ ಉಪಸ್ಥಿತರಲಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಸಿಡಬ್ಲ್ಯುಸಿ ಸಭೆಯಲ್ಲಿ ಪಾಲ್ಗೊಳ್ಳಲು ದಿಲ್ಲಿಗೆ ತೆರಳಿದ್ದ ಸಿದ್ದರಾಮಯ್ಯ ಅಲ್ಲಿಂದಲೇ ಶಾಸಕಾಂಗ ಪಕ್ಷದ ಸಭೆ ನಿಗದಿಪಡಿಸಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಸಭೆ ಕರೆಯಲಾಗಿದೆೆ.
ದಿಲ್ಲಿ ಭೇಟಿ ವೇಳೆ ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಅವರೊಂದಿಗೆ ಸಿದ್ದರಾಮಯ್ಯ ಅವರು ಪ್ರತ್ಯೇಕವಾಗಿ ಮಾತನಾಡಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದರು.
ಪಕ್ಷೇತರ ಸದಸ್ಯ ಶಂಕರ್ ಭೇಟಿ
ಸಿಡಬ್ಲ್ಯುಸಿ ಸಭೆಯಲ್ಲಿ ಭಾಗವಹಿಸಲು ದಿಲ್ಲಿಗೆ ತೆರಳಿದ್ದ ಸಿದ್ದರಾಮಯ್ಯ ಅವರನ್ನು ಪಕ್ಷೇತರ ಶಾಸಕ ಆರ್. ಶಂಕರ್ ಭೇಟಿ ಮಾಡಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ. ಆಪರೇಷನ್ ಕಮಲ ಕಾರ್ಯಾಚರಣೆ ಸಂದರ್ಭದಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದ ಶಂಕರ್ ಈಗ ದಿಢೀರ್ ಸಿದ್ದರಾಮಯ್ಯ ಅವರ ಜತೆಯೇ ವಿಮಾನದಲ್ಲಿ ದಿಲ್ಲಿಗೆ ತೆರಳಿ ಕರ್ನಾಟಕ ಭವನದಲ್ಲಿ ಭೇಟಿ ಮಾಡಿ ಚರ್ಚಿಸಿದ್ದಾರೆ.
ಮೈತ್ರಿ ಸರಕಾರ ರಚನೆಯಾದ ಅನಂತರ ಲೋಕಸಭಾ ಚುನಾವಣೆಗೆ ಒಟ್ಟಾಗಿ ಹೋಗಿದ್ದರೂ ಅನಿರೀಕ್ಷಿತ ಫಲಿತಾಂಶ ಬಂದಿದೆ. ಕಾಂಗ್ರೆಸ್ ಒಂದು ಸೀಟು ಮಾತ್ರ ಗೆಲ್ಲಲು ಸಾಧ್ಯವಾಗಿದೆ. ಇಷ್ಟು ಕಡಿಮೆ ಸೀಟು ಬರುತ್ತದೆ ಎಂದುಕೊಂಡಿರ ಲಿಲ್ಲ. ಫಲಿತಾಂಶದ ಬಗ್ಗೆ ಎಐಸಿಸಿ ಅಧ್ಯಕ್ಷರಿಗೆ ಮಾಹಿತಿ ನೀಡುತ್ತೇನೆ. ಅವರು ಕೈಗೊಳ್ಳುವ ಮುಂದಿನ ಯಾವುದೇ ತೀರ್ಮಾನಕ್ಕೆ ನಾನು ಬದ್ಧ.
– ದಿನೇಶ್ ಗುಂಡೂರಾವ್ , ಕೆಪಿಸಿಸಿ ಅಧ್ಯಕ್ಷ
ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಮೈತ್ರಿಕೂಟಕ್ಕೆ ತೀವ್ರ ಹಿನ್ನಡೆಯುಂಟಾಗಿದ್ದರಿಂದ ಸಿಎಂ ಸ್ಥಾನ ತ್ಯಜಿಸಿ ಕಾಂಗ್ರೆಸ್‌ಗೆ ಬಿಟ್ಟುಕೊಡಲು ಮುಂದಾಗಿರುವ ಜೆಡಿಎಸ್, ಆರ್.ವಿ.ದೇಶಪಾಂಡೆ ಅವರನ್ನು ಸಿಎಂ ಮಾಡಬೇಕು ಎಂಬ ಷರತ್ತು ವಿಧಿಸಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಚುನಾವಣೆಯಲ್ಲಿ ಮೈತ್ರಿಕೂಟಕ್ಕೆ 2ಸ್ಥಾನಗಳು ಮಾತ್ರ ಬಂದಿದ್ದರಿಂದ ಒತ್ತಡ ಬಂದರೆ ಸಿಎಂ ಸ್ಥಾನ ಬಿಟ್ಟುಕೊಡಲು ಕುಮಾರಸ್ವಾಮಿ ಬಯಸಿದ್ದರು. ಆದರೆ ದೇಶಪಾಂಡೆ ಅವರನ್ನು ಸಿಎಂ ಮಾಡಬೇಕು ಎಂಬ ಷರತ್ತನ್ನು ಮಾಜಿ ಪ್ರಧಾನಿ ದೇವೇಗೌಡ ವಿಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದೇಶಪಾಂಡೆ ಅಸ್ತ್ರ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್; ತಪ್ಪಿದ ಅನಾಹುತ
Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ
Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.