Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Team Udayavani, Nov 27, 2024, 3:29 AM IST
ಬೆಂಗಳೂರು: ರಾಜ್ಯ ಸರಕಾರ ಪತ್ರಿಕಾ ವಿತರಕರಿಗೆ ಅಪಘಾತ ಪರಿಹಾರ ಹಾಗೂ ವೈದ್ಯಕೀಯ ನೆರವು ಯೋಜನೆ ಅಡಿಯಲ್ಲಿ ಇದುವರೆಗೂ ಇದ್ದಂತಹ ವಯೋಮಿತಿಯನ್ನು ಹೆಚ್ಚಿಸಿದೆ. 16ರಿಂದ 59 ವರ್ಷಗಳ ವರೆಗಿನ ಮಿತಿಯನ್ನು 70 ವರ್ಷಗಳಿಗೆ ಏರಿಸಲಾಗಿದೆ.
ಸರಕಾರದ ಈ ಕ್ರಮವನ್ನು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷ ಕೆ. ಶಂಭುಲಿಂಗ ಸ್ವಾಗತಿಸಿದ್ದಾರೆ. ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಸಂತೋಷ್ ಲಾಡ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್, ಕಾರ್ಮಿಕ ಇಲಾಖೆ ಆಯುಕ್ತ ಗೋಪಾಲಕೃಷ್ಣ ಹಾಗೂ ಸಹಾಯಕ ಆಯುಕ್ತರಾದ ಚಿದಾನಂದ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಸರಕಾರ ಪ್ರಕಟಿಸಿರುವ ಈ ಸವಲತ್ತನ್ನು ಹಿರಿಯ ಪತ್ರಿಕಾ ವಿತರಕರು ಬಳಸಿಕೊಳ್ಳುವ ಮೂಲಕ ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳಬೇಕೆಂದು ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.