ಮಧ್ಯಮ, ದೀರ್ಘಾವಧಿ ಸಾಲ ಪಡೆದ ರೈತರು ಅಸಲು ಕಟ್ಟಿದರೆ ಬಡ್ಡಿ ಮನ್ನಾ
Team Udayavani, Feb 18, 2020, 9:34 PM IST
ಕೊಪ್ಪಳ: ಸಹಕಾರಿ ಇಲಾಖೆ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಪಿಎಲ್ಡಿ, ಡಿಸಿಸಿ, ಲ್ಯಾಂಪ್ಸ್ ಬ್ಯಾಂಕ್ಗಳಲ್ಲಿ ಮಧ್ಯಮ ಹಾಗೂ ದೀರ್ಘಾವಧಿ ಸಾಲ ಪಡೆದ ರೈತರು ಅಸಲು ಕಟ್ಟಿದರೆ ಬಡ್ಡಿ ಮನ್ನಾ ಮಾಡುವ ಕುರಿತು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ.
ಈ ಹಿಂದಿನ ಕಾಂಗ್ರೆಸ್ ಸರ್ಕಾರ ಸಹಕಾರಿ ಬ್ಯಾಂಕ್ಗಳಲ್ಲಿ ಅಲ್ಪಾವಧಿ ಸಾಲ ಪಡೆದ ರೈತರ ಸಾಲ ಮನ್ನಾ ಮಾಡಿತ್ತು. ಬಳಿಕ ಅಧಿಕಾರಕ್ಕೇರಿದ ಮೈತ್ರಿ ಸರ್ಕಾರವೂ ರೈತರು ವಾಣಿಜ್ಯ ಬ್ಯಾಂಕ್ಗಳಲ್ಲಿ ಮಾಡಿದ ಬೆಳೆ ಸಾಲವನ್ನು 2 ಲಕ್ಷದವರೆಗೂ ಮನ್ನಾ ಮಾಡಿದ್ದಲ್ಲದೇ, ಸಹಕಾರಿ ಬ್ಯಾಂಕ್ನಲ್ಲಿನ ಅಲ್ಪಾವಧಿ ಸಾಲ ಮನ್ನಾ ಮಾಡಿ ಬರದ ಪರಿಸ್ಥಿತಿಯಲ್ಲಿ ರೈತರ ನೆರವಿಗೆ ಧಾವಿಸಿತ್ತು. ಆದರೆ ಸಹಕಾರ ಇಲಾಖೆಯಡಿ ಕಾರ್ಯ ನಿರ್ವಹಿಸುವ ಜಿಲ್ಲಾ ಸಹಕಾರ ಬ್ಯಾಂಕ್ ಹಾಗೂ ಪಿಎಲ್ಡಿ, ಲ್ಯಾಂಪ್ಸ್ ಬ್ಯಾಂಕ್ಗಳಲ್ಲಿ ರೈತರು ಪಡೆದ ಮಧ್ಯಮ-ದೀರ್ಘಾವಧಿ ಸಾಲ ಮನ್ನಾ ಮಾಡಿರಲಿಲ್ಲ.
ರಾಜ್ಯದಲ್ಲಿ ಅಧಿಕಾರಕ್ಕೇರಿದ ಬಿಜೆಪಿ ಸರ್ಕಾರ, ಆರಂಭಿಕ ಹಂತದಲ್ಲಿ ರೈತರ ಸಾಲವನ್ನು ಸಕಾಲಕ್ಕೆ ಪೊಲೀಸ್ ಭದ್ರತೆಯಲ್ಲಿ ಸಾಲ ವಸೂಲಿ ಮಾಡಬೇಕು. ಇಲ್ಲವೇ ಅವರ ಆಸ್ತಿ ಮುಟ್ಟುಗೋಲು ಹಾಕುವಂತೆ ಆದೇಶ ಹೊರಡಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಬಳಿಕ, ತನ್ನ ಆದೇಶ ವಾಪಾಸ್ ಪಡೆಯಿತು. ಈಗ ಮತ್ತೆ ಆದೇಶ ಮಾಡಿ ಮಧ್ಯಮ-ದೀರ್ಘಾವಧಿ ಸಾಲ ಪಡೆದ ಸುಸ್ತಿದಾರರು ನಿಗದಿತ ಕಾಲಮಿತಿಯಲ್ಲಿ ಅಸಲು ಕಟ್ಟಿದರೆ ಬಡ್ಡಿ ಮನ್ನಾ ಮಾಡುವುದಾಗಿ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.