ಮೇಕೆದಾಟು ಯೋಜನೆಯನ್ನು ನಿಲ್ಲಿಸುವುದಿಲ್ಲ, ಇದು ನಮ್ಮ ರಾಜ್ಯದ ಹಕ್ಕು : ಬೊಮ್ಮಾಯಿ
Team Udayavani, Jul 12, 2021, 6:56 PM IST
ಬೆಂಗಳೂರು: ಕುಡಿಯುವ ನೀರಿನ ಉದ್ದೇಶದೊಂದಿಗೆ ರೂಪುಗೊಂಡಿರುವ ಮೇಕೆದಾಟು ಯೋಜನೆಯನ್ನ ನಿಲ್ಲಿಸುವುದಿಲ್ಲ. ಇದು ನಮ್ಮ ರಾಜ್ಯದ ಹಕ್ಕು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆ ವಿರೋಧಿಸಿ ಕೈಗೊಂಡ ನಿರ್ಣಯಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು ಮೇಕೆದಾಟು ಯೋಜನೆಗೆ ಸಂಬಂಧಪಟ್ಟಂತೆ ಈಗಾಗಲೇ ಸಿದ್ದವಾಗಿರುವ ಸಮಗ್ರ ಯೋಜನಾ ವರದಿಯನ್ನು ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಲಾಗಿದೆ. ಇದು ಹೆಚ್ಚುವರಿ ಕಾವೇರಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಬಳಕೆ ಮಾಡುವ ಯೋಜನೆ. ಈ ಯೋಜನೆಯನ್ನು ಜಾರಿಗೊಳಿಸುವ ಎಲ್ಲಾ ಹಕ್ಕುಗಳು ಕರ್ನಾಟಕಕ್ಕೆ ಇವೆ. ರಾಜ್ಯದ ಜನರ ಹಿತವನ್ನು ರಕ್ಷಿಸಲು ಯೋಜನೆಯನ್ನು ಶೇಕಡ 100ರಷ್ಟು ಜಾರಿಗೊಳಿಸಲಾಗುವುದು ರಾಜ್ಯ ಸರ್ಕಾರದ ಈ ಮನವಿಯನ್ನು ನಿಯಮಗಳ ಪ್ರಕಾರ ಕೇಂದ್ರ ಸರ್ಕಾರ ಪರಿಗಣಿಸಬೇಕು ಎಂದು ಅವರು ತಿಳಿಸಿದರು.
ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಪಟ್ಟಂತೆ ಈಗಾಗಲೇ ತೀರ್ಪು ಬಂದಿದೆ. ಅದರ ಪ್ರಕಾರ ತಮಿಳುನಾಡಿಗೆ ಯಾವ ಸಮಯಕ್ಕೆ ಎಷ್ಟು ನೀರು ಬಿಡಬೇಕು ಎಂಬುದರ ಕುರಿತು ಕಾವೇರಿ ಮಂಡಳಿ ಗಮನಿಸುತ್ತದೆ. ಸಂಕಷ್ಟ ಸಂದರ್ಭದಲ್ಲಿ ಹೆಚ್ಚುವರಿ ನೀರನ್ನು ಹಂಚಿಕೆ ಮಾಡಿಕೊಳ್ಳುವುದರಿಂದ ಎರಡು ರಾಜ್ಯಗಳಿಗೆ ಅನುಕೂಲವಾಗುತ್ತದೆ ಎಂಬುದನ್ನು ತಮಿಳುನಾಡು ಸರ್ಕಾರ ಅರಿತುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಇದನ್ನೂ ಓದಿ :BSY ಕುರ್ಚಿ ಅಲುಗಾಡುತ್ತಿದ್ದು, ಕುರ್ಚಿ ಉಳಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ : ಸಿದ್ದು
ಹೀಗಾಗಿ ಮೇಕೆದಾಟು ಕುಡಿಯುವ ನೀರರಿನ ಯೋಜನೆ. ಇದನ್ನು ನಿಲ್ಲಿಸಲು ಕರ್ನಾಟಕಕ್ಕೆ ಯಾವುದೇ ಸಕಾರಣಗಳು ಇಲ್ಲ. ಯೋಜನೆಯನ್ನು ನಾವು ಖಂಡಿತವಾಗಿಯೂ ಜಾರಿ ಮಾಡುತ್ತೇವೆ. ಇದಕ್ಕಾಗಿ ಬೇಕಾಗುವ ಎಲ್ಲಾ ಒಪ್ಪಿಗೆ ಗಳನ್ನು ಕೇಂದ್ರದಿಂದ ಪಡೆಯಲು ಶಕ್ತಿಮೀರಿ ಪ್ರಯತ್ನಿಸುತ್ತೇವೆ ಎಂದು ಅವರು ಹೇಳಿದರು.
ಮೇಕೆದಾಟು ಯೋಜನೆ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನ್ಯಾಯ ಒದಗಿಸುತ್ತದೆ ಎಂಬ ವಿಶ್ವಾಸ ನನಗಿದೆ. ಈ ಯೋಜನೆಯನ್ನು ಶೇ. ನೂರಕ್ಕೆ ನೂರರಷ್ಟು ಜಾರಿ ಮಾಡುತ್ತೇವೆ.
– ಬಸವರಾಜ ಬೊಮ್ಮಾಯಿ, ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.