ಅಫ್ಘಾನಿಸ್ಥಾನದಲ್ಲಿರುವ ಕನ್ನಡಿಗರನ್ನು ಕರೆತರಲು ಅಗತ್ಯ ವ್ಯವಸ್ಥೆ : ಗೃಹ ಸಚಿವ
Team Udayavani, Aug 20, 2021, 6:20 PM IST
ಮಂಗಳೂರು : ತಾಲಿಬಾನ್ ವಶದಲ್ಲಿರುವ ಅಫ್ಘಾನಿಸ್ಥಾನದಲ್ಲಿ ಅತಂತ್ರ ಸ್ಥಿತಿಯಲ್ಲಿರುವ ಕನ್ನಡಿಗರನ್ನು ತಾಯ್ನಾಡಿಗೆ ಕರೆತರುವ ನಿಟ್ಟಿನಲ್ಲಿ ಕೇಂದ್ರ ಸರಕಾರದಿಂದ ವ್ಯವಸ್ಥೆಯಾಗುತ್ತಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಐಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉಮೇಶ್ ಅವರನ್ನು ಇದಕ್ಕಾಗಿ ರಾಜ್ಯದಿಂದ ನೋಡಲ್ ಆಫೀಸರ್ ಆಗಿ ನೇಮಕ ಮಾಡಿದ್ದೇವೆ. ಅವರು ಈ ಹಿಂದೆ ವಿದೇಶದಲ್ಲಿ ಅತಂತ್ರರಾಗಿದ್ದ ಕನ್ನಡಿಗರನ್ನು ಕರೆ ತಂದಿದ್ದಾರೆ. ಸಂಕಷ್ಟದಲ್ಲಿರುವವರು ಅವರನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ ಎಂದರು.
ಗುಂಡು ಹಾರಾಟ ತಪ್ಪು
ಕೇಂದ್ರ ಸಚಿವ ಭಗವಂತ ಖೂಬಾ ಅವರ ಜನಾಶೀರ್ವಾದ ಯಾತ್ರೆಯನ್ನು ಗಾಳಿಯಲ್ಲಿ ಗುಂಡು ಹಾರಿಸಿ ಸ್ವಾಗತಿಸಿದ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಈಗಾಗಲೇ ಎಫ್‌ಐಆರ್ ದಾಖಲಾಗಿದೆ. ಅನೇಕ ಕಡೆಗಳಲ್ಲಿ ಈ ರೀತಿ ಆಗುತ್ತದೆ. ಇದು ಸರಿಯಾ ಎಂದರೆ, ಖಂಡಿತ ತಪ್ಪು. ಮಲೆನಾಡು ಮತ್ತು ಕೊಡಗಿನಲ್ಲಿ ಗಾಳಿಯಲ್ಲಿ ಗುಂಡು ಹಾರಿಸುವ ಸಂಸ್ಕೃತಿ ಇದೆ. ಖುಷಿ ಹಾಗೂ ದುಃಖದ ಸಂದರ್ಭದಲ್ಲಿ ಹೀಗೆ ಮಾಡುತ್ತಾರೆ. ಸಾರ್ವಜನಿಕವಾಗಿ ಈ ರೀತಿ ಮಾಡಿರುವುದು ತಪ್ಪು ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಇದನ್ನೂ ಓದಿ :12ನೇ ವಯಸ್ಸಿಗೇ ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆ
ಎನ್‌ಐಎ ಕಚೇರಿಗೆ ಮಾತುಕತೆ
ಕರಾವಳಿಯಲ್ಲಿ ಕೆಲವು ವರ್ಷಗಳಿಂದ ಭಯೋತ್ಪಾದಕ ಚಟುವಟಿಕೆ ನಡೆಯುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಚಟುವಟಿಕೆಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಮಂಗಳೂರಿನಲ್ಲಿ ಕೇಂದ್ರ ತನಿಖಾ ಸಂಸ್ಥೆ(ಎನ್‌ಐಎ) ಕಚೇರಿ ಸ್ಥಾಪಿಸುವ ಬಗ್ಗೆ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಯುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು
Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.