ಭಾರತದ ಪ್ರಥಮ 3ಡಿ ಬಯೋಪ್ರಿಂಟಿಂಗ್ ಉತ್ಕೃಷ್ಟತಾ ಕೇಂದ್ರಕ್ಕೆ ಸಚಿವ ಅಶ್ವತ್ಥನಾರಾಯಣ ಚಾಲನೆ
Team Udayavani, Dec 9, 2022, 4:50 PM IST
ಬೆಂಗಳೂರು: ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ಸೆಲ್‌ಲಿಂಕ್ ಕಂಪನಿಗಳ ಸಹಯೋಗದಲ್ಲಿ ಐಐಎಸ್ಸಿಯಲ್ಲಿ ಸ್ಥಾಪಿಸಿರುವ ಭಾರತದ ಪ್ರಪ್ರಥಮ 3ಡಿ ಬಯೋಪ್ರಿಂಟಿಂಗ್ ಉತ್ಕೃಷ್ಟತಾ ಕೇಂದ್ರವನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ಶುಕ್ರವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವೈದ್ಯಕೀಯ ಮತ್ತು ಆರೋಗ್ಯ ಸೇವೆಗಳ ಕ್ಷೇತ್ರದಲ್ಲಿ ಈಗ ಅಂಗಾಂಶಗಳು ಮತ್ತು ಜೀವಕೋಶಗಳನ್ನು ಆಧರಿಸಿದ ಚಿಕಿತ್ಸೆಗಳು ಮುಂಚೂಣಿಗೆ ಬರುತ್ತಿದ್ದು, ಇವು ಕ್ರಾಂತಿಕಾರಕ ಬದಲಾವಣೆಗಳನ್ನು ತರುತ್ತಿವೆ. ಮುಂಬರುವ ವರ್ಷಗಳಲ್ಲಿ ಆಯಾ ವ್ಯಕ್ತಿಗಳ ಶರೀರ ಸ್ವಭಾವವನ್ನು ಆಧರಿಸಿ, ರೋಗಗಳನ್ನು ಗುಣಪಡಿಸುವತಹ ನಿರ್ದಿಷ್ಟ ಬಗೆಯ ಚಿಕಿತ್ಸಾ ಕ್ರಮಗಳು ಜನಪ್ರಿಯವಾಗಲಿದೆ. ಇದರಲ್ಲಿ 3ಡಿ ಬಯೋಪ್ರಿಂಟಿಂಗ್ ಮಹತ್ತರ ಪಾತ್ರ ವಹಿಸಲಿದೆ ಎಂದರು.
ಈ ಉತ್ಕೃಷ್ಟತಾ ಕೇಂದ್ರವು ಆಧುನಿಕ ಚಿಕಿತ್ಸಾ ಕ್ರಮಗಳಿಗೆ ಸಂಬಂಧಿಸಿದ ಸಂಶೋಧನಾ ಉಪಕ್ರಮಗಳನ್ನು ಪರಿಚಯಿಸಲಿದೆ. ಜತೆಗೆ ಆರೋಗ್ಯಸೇವೆಗಳ ಕ್ಷೇತ್ರದಲ್ಲಿರುವ ವೃತ್ತಿಪರರು ಹಾಗೂ ಉಳಿದವರಿಗೆ ವೈಜ್ಞಾನಿಕ ತರಬೇತಿ ಇಲ್ಲಿ ಸಿಗಲಿದೆ. 3ಡಿ ಬಯೋಪ್ರಿಂಟಿಂಗ್ ತಂತ್ರಜ್ಞಾನದ ಬಳಕೆಯನ್ನು ಪ್ರಚುರಪಡಿಸಲು ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ಅಗತ್ಯವಿರುವ ಉಳಿದೆಡೆಗಳಲ್ಲಿ ಕಾರ್ಯಾಗಾರಗಳನ್ನು ಕೂಡ ಈ ಕೇಂದ್ರವು ಹಮ್ಮಿಕೊಳ್ಳಲಿದೆ ಎಂದು ಅವರು ತಿಳಿಸಿದರು.
ಜೈವಿಕ ತಂತ್ರಜ್ಞಾನ, ಸಂಶೋಧನೆ ಮತ್ತು ಅಭಿವೃದ್ಧಿಗಳ ರಾಜಧಾನಿಯಾಗಿ ಬೆಂಗಳೂರು ಪ್ರತಿಷ್ಠಾಪಿತವಾಗಿದೆ. ಈ ಉತ್ಕೃಷ್ಟತಾ ಕೇಂದ್ರದಲ್ಲಿ ಟಿಶ್ಯೂ ಎಂಜಿನಿಯರಿಂಗ್, ಔಷಧಗಳ ಆವಿಷ್ಕಾರ, ಮೆಟೀರಿಯಲ್ ಸೈನ್ಸ್‌ನ ಬೆಳವಣಿಗೆ ಸುಗಮವಾಗಿ ನಡೆಯಲಿದೆ. ಇದರಿಂದಾಗಿ ದೇಶದ ಆರೋಗ್ಯಸೇವೆಗಳ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಾಗಲಿವೆ. ಇದರಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯ ಬಯೋಸಿಸ್ಟಮ್ಸ್ ಸೈನ್ಸ್ ಅಂಡ್ ಎಂಜಿನಿಯರಿಂಗ್ ಕೇಂದ್ರವು ಸಕ್ರಿಯ ಪಾತ್ರ ವಹಿಸಲಿದೆ ಎಂದು ಸಚಿವರು ಹೇಳಿದರು.
ಕಾರ್ಯಕ್ರಮದಲ್ಲಿ ಐಐಎಸ್ಸಿ ನಿರ್ದೇಶಕ ಪ್ರೊ.ಗೋವಿಂದನ್ ರಂಗರಾಜನ್, ಎಚ್‌ಸಿಜಿ ಕ್ಯಾನ್ಸರ್ ಆಸ್ಪತ್ರೆಯ ಸಂಶೋಧನಾ ವಿಭಾಗದ ಮುಖ್ಯಸ್ಥ ಡಾ.ವಿಶಾಲ್ ರಾವ್, ಸೆಲ್‌ಲಿಂಕ್ ಕಂಪನಿಯ ಏಷ್ಯಾ-ಪೆಸಿಫಿಕ್ ಮುಖ್ಯಸ್ಥೆ ಟೊಮೋಕೊ ಬೈಲುಂಡ್, ಮಾರುಕಟ್ಟೆ ವಿಭಾಗದ ಮುಖ್ಯಸ್ಥ ರೂಪಕ್ ಪೊದ್ದಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.