ರಾಜ್ಯದಲ್ಲಿ ಕಾಂಗ್ರೆಸ್ ಗಂಟು ಮೂಟೆ ಕಟ್ಟುವ ಕಾಲ ಬಂದಿದೆ: ಸಚಿವ ಆರ್.ಅಶೋಕ್
Team Udayavani, Dec 8, 2022, 8:30 PM IST
ಬೆಂಗಳೂರು: ರಾಜ್ಯದಲ್ಲೂ ಕಾಂಗ್ರೆಸ್ ಗಂಟು ಮೂಟೆ ಕಟ್ಟುವ ಕಾಲ ಬಂದಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ಗುಜರಾತ್ ಫಲಿತಾಂಶದ ನಂತರ ದೇಶದಲ್ಲಿ ಡಬಲ್ ಎಂಜಿನ್ ಸರ್ಕಾರ ಇರಬೇಕೆಂಬ ವಿಚಾರಕ್ಕೆ ಮತದಾರರು ಮುದ್ರೆ ಒತ್ತಿದ್ದಾರೆ. ಕರ್ನಾಟಕದಲ್ಲೂ ಅದೇ ಫಲಿತಾಂಶ ಮರುಕಳಿಸಲಿದೆ ಎಂದು ಹೇಳಿದರು.
ಮುಂದಿನ ಐದು ವರ್ಷಗಳಲ್ಲಿ ಇಡೀ ದೇಶದಲ್ಲಿ ಕಾಂಗ್ರೆಸ್ ಹೆಸರು ಹೇಳುವವರು ಇರುವುದಿಲ್ಲ. ಭಾರತ್ ಜೋಡೋ ಯಾತ್ರೆಯಿಂದ ರಾಹುಲ್‌ಗಾಂಧಿ ಗಡ್ಡ ಬೆಳೆದಿದ್ದು ಬಿಟ್ಟರೆ ಬೇರೇನೂ ಆಗಲಿಲ್ಲ ಎಂದು ಲೇವಡಿ ಮಾಡಿದರು.
ಭಾರತ್ ಜೋಡೋ ಕಾಂಗ್ರೆಸ್ ಚೋಡೋ ಯಾತ್ರೆಯಾಗಿ ಪರಿವರ್ತನೆಯಾಗಿದೆ. ಸೋನಿಯಾಗಾಂಧಿ ಅವರಿಗೆ ಅವರದೇ ಆದ ಸಮಸ್ಯೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಯಸ್ಸಾಗಿದ್ದು ಹೆಸರಿಗೆ ಕೂರಿಸಿದ್ದಾರೆ. ರಾಹುಲ್‌ಗಾಂಧಿಯೂ ಬಲವಂತಕ್ಕೆ ಹೋರಾಟ ಮಾಡುತ್ತಿದ್ದಾರೆ ಎಂದು ಹೇಳಿದರು.
ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ಅವರ ನಾಯಕತ್ವಕ್ಕೆ ದೇಶದ ಜನರ ಬೆಂಬಲ ಇದೆ. ಗುಜರಾತ್ ಫಲಿತಾಂಶ ನಮ್ಮ ರಾಜ್ಯದ ಕಾರ್ಯಕರ್ತರಿಗೆ ಬೂಸ್ಟರ್ ನೀಡಲಿದೆ. ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಪ್ರೇರಣೆಯೂ ಆಗಲಿದೆ ಎಂದು ಬಣ್ಣಿಸಿದರು.
ಕಾಂಗ್ರೆಸ್‌ನ ಹಲವಾರು ನಾಯಕರು ನಮ್ಮ ಜತೆ ಸಂಪರ್ಕದಲ್ಲಿದ್ದಾರೆ. ಕಾಂಗ್ರೆಸ್‌ನಲ್ಲಿ ನಾಯಕತ್ವ ಇಲ್ಲ. ರಾಜ್ಯದಲ್ಲಿ ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ಜಗಳ. ನಮಗೆ ದಿಕ್ಕು ಕಾಣದಾಗಿದೆ ಎಂದು ಹೇಳಿಕೊಂಡಿದ್ದಾರೆ. ಆಮ್ ಆದ್ಮಿ ಪಾರ್ಟಿ ಕಾಂಗ್ರೆಸ್ ಅನ್ನು ಮುಳುಗಿಸುವ ಪಕ್ಷ. ಗುಜರಾತ್‌ನಲ್ಲಿ ಕಾಂಗ್ರೆಸ್ ಮತಗಳನ್ನು ಆಪ್ ಪಡೆದಿದೆ. ರಾಜ್ಯದಲ್ಲೂ ಇದು ಆಗಲಿದೆ ಎಂದು ತಿಳಿಸಿದರು.
ಬಿಜೆಪಿಯಲ್ಲಿ ವಂಶ ರಾಜಕಾರಣ ಇಲ್ಲ. ಒಂದು ಕುಟುಂಬದ ಆಳ್ವಿಕೆಯೂ ಇಲ್ಲ. ರಾಜ್ಯದಲ್ಲಿ ಕೆಲವೊಮ್ಮೆ ಅನಿವಾರ್ಯವಾಗಿ ಒಂದೆರಡು ಕಡೆ ಅವಕಾಶ ನೀಡಲಾಗಿದೆ. ಆದರೆ, ಸಾಮಾನ್ಯ ಕಾರ್ಯಕರ್ತರಿಗೆ ನಾಯಕತ್ವ ಕೊಡುವ ಪಕ್ಷ ಬಿಜೆಪಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.