ಶಿಕ್ಷಕರಿಗೆ ಸಚಿವ ಸುರೇಶ್ ಕುಮಾರ್ ಅಭಯ
Team Udayavani, Mar 19, 2020, 6:45 AM IST
ಬೆಂಗಳೂರು: ತಾಲೂಕುಗಳಲ್ಲಿ ಶೇ. 20ರಷ್ಟು ಖಾಲಿ ಹುದ್ದೆಯಿದ್ದಾಗ ವರ್ಗಾವಣೆ ಸಮಸ್ಯೆ ಎದು ರಾಗುವುದು ಪ್ರಮುಖ ವಿಷಯವಾಗಿದೆ. ಅದನ್ನೂ ಪರಿಹರಿಸಲು ಕ್ರಮ ತೆಗೆದು ಕೊಳ್ಳುತ್ತೇನೆ ಎಂದು ಪ್ರಾಥ ಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ವಿಧಾನ ಮಂಡಲದ ಉಭಯ ಸದನಗಳಲ್ಲಿ ಶಿಕ್ಷಕರ ವರ್ಗಾವಣೆ ಮಸೂದೆ ಅಂಗೀಕಾರದ ಅನಂತರ ತಮ್ಮ ಫೇಸ್‌ಬುಕ್ ಖಾತೆ ಮೂಲಕ ಶಿಕ್ಷಕರಿಗೆ ಭರವಸೆಯ ಸಂದೇಶ ನೀಡಿದ್ದಾರೆ. ಶಿಕ್ಷಕರ ಎಲ್ಲ ಸಮಸ್ಯೆಗಳಿಗೂ ಇದು ರಾಮಬಾಣವಲ್ಲ ಎಂಬುದು ನನಗೆ ಚೆನ್ನಾಗಿ ತಿಳಿದಿದೆ. ಆದರೆ ಶಿಕ್ಷಕರ ಸಮಸ್ಯೆಗಳ ಶೇ.80ರಷ್ಟಕ್ಕೆ ಪರಿಹಾರ ದೊರಕುತ್ತದೆ. ಎಲ್ಲಕ್ಕಿಂತ ಹೆಚ್ಚಾಗಿ ಈ ಕಾಯ್ದೆಯಲ್ಲಿ ಅನುಕಂಪವಿದೆ.
ಈಗ ಶೇ.20ರಷ್ಟು ಖಾಲಿ ಹುದ್ದೆಯದೊಂದು ಸಮಸ್ಯೆಯಿದೆ. ಬಹಳ ಶಿಕ್ಷಕರಿಗೆ ಇದೇ ಪ್ರಮುಖವಾಗಿರುವುದು. ಅದನ್ನೂ ಪರಿಹರಿಸಲು ಕ್ರಮ ಕೈಗೊಳ್ಳುತ್ತಿದ್ದೇನೆ ಎಂದು ಭರವಸೆ ನೀಡಿದ್ದಾರೆ. ಶಿಕ್ಷಕರಿಗೆ ಮಾತು ಕೊಟ್ಟಂತೆ ಶಿಕ್ಷಕಸ್ನೇಹಿ ವರ್ಗಾವಣೆ ಕಾಯ್ದೆ ವಿಧಾನ ಮಂಡಲದ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇದನ್ನು ಸಾಧ್ಯವಾಗಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಸುರೇಶ್ ಕುಮಾರ್ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.