ID Card ಇಲ್ಲದೇ ರೂಂ ಕೊಡಲ್ಲ ಎಂದ ಮ್ಯಾನೇಜರ್ ಗೆ ಹಿಗ್ಗಾಮುಗ್ಗಾ ಥಳಿತ: ನಾಲ್ವರ ಬಂಧನ
ವಿಡಿಯೋ ಚಿತ್ರೀಕರಣ ಮಾಡಿ, ಇನ್ಸ್ಟಾಗ್ರಾಮ್ ನಲ್ಲಿ ಅಪ್ ಲೋಡ್
Team Udayavani, Sep 9, 2024, 11:51 AM IST
ಜಬಲ್ಪುರ್(ಮಧ್ಯಪ್ರದೇಶ): ಅಧಿಕೃತ ಗುರುತು ಪತ್ರ(Identity Card) ಇಲ್ಲದೆ ರೂಂ(Room) ನೀಡಲ್ಲ ಎಂದ ಹೋಟೆಲ್ ಮ್ಯಾನೇಜರ್(Manager) ಅನ್ನು ಐದಾರು ಜನರ ಗುಂಪು ರಸ್ತೆ ಮಧ್ಯೆ ಎಳೆದು ತಂದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರ್ ನಲ್ಲಿ ನಡೆದಿದ್ದು, ಈ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಾಹಿತಿ ಪ್ರಕಾರ, ಆರೋಪಿ ಸೋನು ತಿವಾರಿ ಹೋಟೆಲ್ ಗೆ ಭೇಟಿ ನೀಡಿ, ರೂಂ ಬುಕ್ ಮಾಡಲು ಹೇಳಿದ್ದ. ಆದರೆ ಮ್ಯಾನೇಜರ್ ಮನ್ ಜೀತ್ ಅಧಿಕೃತ ಐಡೆಂಟಿಟಿ ಕಾರ್ಡ್ ಇಲ್ಲದೆ ರೂಂ ಕೊಡಲು ನಿರಾಕರಿಸಿದ್ದ, ಆಗ ಇಬ್ಬರ ನಡುವೆ ವಾಗ್ವಾದ ನಡೆದಿತ್ತು. ಏತನ್ಮಧ್ಯೆ ಸೋನು ಹೋಟೆಲ್ ನಿಂದ ಹೊರಟು ಹೋಗಿದ್ದ ಎಂದು ತಿಳಿಸಿದೆ.
ಮರುದಿನ ಸೋನು ತನ್ನ ಗೆಳೆಯರ ಗುಂಪಿನೊಂದಿಗೆ ಬಂದು ಮ್ಯಾನೇಜರ್ ನನ್ನು ರಸ್ತೆಗೆ ಎಳೆದು ತಂದು, ಹಿಗ್ಗಾಮುಗ್ಗಾ ಹೊಡೆದು, ಆ ದೃಶ್ಯವನ್ನು ವಿಡಿಯೋ ಚಿತ್ರೀಕರಣ ಮಾಡಿ, ಇನ್ಸ್ಟಾಗ್ರಾಮ್ ನಲ್ಲಿ ಅಪ್ ಲೋಡ್ ಮಾಡಿದ್ದರು ಎಂದು ವರದಿ ವಿವರಿಸಿದೆ.
#WATCH | MP: Hotel Manager Attacked After Denying Room Without Authentic Identity Card In Jabalpur#MadhyaPradesh #MPNews pic.twitter.com/CoxhGVMm4L
— Free Press Madhya Pradesh (@FreePressMP) September 8, 2024
ಘಟನೆಗೆ ಸಂಬಂಧಿಸಿದಂತೆ ಪೊಲೀಸರ ಸಿನಿಮಾ ಶೈಲಿಯ ಕಾರ್ಯಾಚರಣೆ ಮೂಲಕ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳನ್ನು ಪೊಲೀಸರು ಸಾರ್ವಜನಿಕವಾಗಿ ಮೆರವಣಿಗೆ ಮಾಡಿಸಿ ಎಚ್ಚರಿಕೆಯ ಸಂದೇಶ ರವಾನಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.