Spelling Error:ಎಂಕೆ ಸ್ಟಾಲಿನ್ ತಮಿಳುನಾಡಿನ ವಧು! DMK ಮತ್ತೊಂದು ಜಾಹೀರಾತು ಎಡವಟ್ಟು!
ಸ್ಪೆಲ್ಲಿಂಗ್ ದೋಷದ ಜಾಹೀರಾತು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್
Team Udayavani, Mar 5, 2024, 4:35 PM IST
ಚೆನ್ನೈ: ಇತ್ತೀಚೆಗಷ್ಟೇ ತಮಿಳುನಾಡು ಸರ್ಕಾರ ನೀಡಿದ್ದ ಜಾಹೀರಾತಿನಲ್ಲಿ ಚೀನಿ ರಾಕೆಟ್ ನ ಚಿತ್ರವನ್ನು ಬಳಸಿದ್ದಕ್ಕೆ ಭಾರೀ ಟೀಕೆಗೆ ಗುರಿಯಾಗಿದ್ದ ಘಟನೆಯ ಬೆನ್ನಲ್ಲೇ ಇದೀಗ ತನ್ನದೇ ಸರ್ಕಾರದ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕುರಿತು ಹಾಕಲಾಗಿದ್ದ ಪೋಸ್ಟರ್ ನಲ್ಲಿನ ಸ್ಪೆಲ್ಲಿಂಗ್ (ಕಾಗುಣಿತ) ದೋಷ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವ ಮೂಲಕ ಮತ್ತೊಮ್ಮೆ ಪೇಚಿಗೆ ಸಿಲುಕುವಂತಾಗಿದೆ.
ಇದನ್ನೂ ಓದಿ:Army Plane: ಬಿಹಾರದ ಗಯಾದಲ್ಲಿ ತರಬೇತಿ ವಿಮಾನ ಪತನ… ಇಬ್ಬರು ಪೈಲಟ್‌ಗಳಿಗೆ ಗಾಯ
ಪೋಸ್ಟರ್ ನಲ್ಲಿ “ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ತಮಿಳುನಾಡಿನ ವಧು” ಎಂಬುದಾಗಿ ಬರೆಯಲಾಗಿದ್ದು, ಈ ಸ್ಪೆಲ್ಲಿಂಗ್ ದೋಷದ ಜಾಹೀರಾತು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ವರದಿಯ ಪ್ರಕಾರ, ಎಂಕೆ ಸ್ಟಾಲಿನ್ ಫೋಟೋದ ಜತೆ “ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ತಮಿಳುನಾಡಿನ ಹೆಮ್ಮೆ” ಎಂಬ ಕ್ಯಾಪ್ಶನ್ ಬರೆಯಲು ನಿರ್ಧರಿಸಲಾಗಿತ್ತು. ಆದರೆ ಸ್ಪೆಲ್ಲಿಂಗ್ ದೋಷದಿಂದಾಗಿ ಅದು “Bride of Tamilnadu” ಅಂತ ಬರೆಯಲಾಗಿದೆ.! ಆದರೆ ಈ ಪೋಸ್ಟರ್ ಅನ್ನು ಯಾರು, ಯಾವ ಸ್ಥಳದಲ್ಲಿ ಪ್ರದರ್ಶಿಸಿದ್ದಾರೆ ಎಂಬುದು ಸ್ಪಷ್ಟವಾಗಿ ತಿಳಿದು ಬಂದಿಲ್ಲ ಎಂದು ವರದಿ ವಿವರಿಸಿದೆ.
ಕಾಗುಣಿತ ದೋಷದ ಜಾಹೀರಾತು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಮೆಮೆಗಳ ವ್ಯಂಗ್ಯದ ಮಹಾಪೂರವೇ ಹರಿದುಬಂದಿದೆ. ಸ್ಪೆಲ್ಲಿಂಗ್ ದೋಷಕ್ಕೆ ಪ್ರತಿಕ್ರಿಯೆ ನೀಡಿರುವ ನೆಟ್ಟಿಗರು, ಇದು Bribe of Tamilnadu ಅಂತ ಉಲ್ಲೇಖಿಸಿದ್ದಾರೆ. ಮತ್ತೊಬ್ಬ ಎಕ್ಸ್ ಬಳಕೆದಾರ ವರ ಯಾರು ಎಂದು ಪ್ರಶ್ನಿಸಿದ್ದಾರೆ.
ಮೂರನೇ ಬಳಕೆದಾರ, ವ್ಹಾ…ಇದೊಂದು ಅದ್ಭುತ…ಆದರೆ ಈ ವಧುವನ್ನು ಯಾರು ವರಿಸುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ. ಇತ್ತೀಚೆಗೆ ಇಸ್ರೋದ 2ನೇ ಉಡಾವಣಾ ಕೇಂದ್ರದ ಉದ್ಘಾಟನೆ ವೇಲೆ ತಮಿಳುನಾಡು ಸರ್ಕಾರ ನೀಡಿದ್ದ ಜಾಹೀರಾತಿನಲ್ಲಿ ಚೀನಿ ರಾಕೆಟ್ ಚಿತ್ರ ಬಳಸಿ ಟೀಕೆಗೆ ಗುರಿಯಾಗಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.