ನಿವೃತ್ತ ಲೋಕಾಯುಕ್ತ ಎನ್. ವೆಂಕಟಾಚಲ ವಿಧಿವಶ
Team Udayavani, Oct 30, 2019, 9:33 AM IST
ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಿವೃತ್ತ ಲೋಕಾಯುಕ್ತ ಎನ್. ವೆಂಕಟಾಚಲ (90) ಅವರು ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಕರ್ನಾಟಕ ರಾಜ್ಯದ ಲೋಕಾಯುಕ್ತರಾಗಿ ಸುಪ್ರಿಂಕೋರ್ಟ್ ನ್ಯಾಯಧೀಶರಾಗಿ ಕೂಡ ಸೇವೆ ಸಲ್ಲಿಸಿದ್ದರು.
ಬೆಳಗಿನ ಜಾವ ನಿಧನರಾಗಿದ್ದಾರೆ ಎಂದು ಎಂ.ಎಸ್.ರಾಮಯ್ಯ ಆಸ್ಪತ್ರೆ ಮೂಲಗಳು ತಿಳಿಸಿವೆ. ನಂಜೇಗೌಡ ವೆಂಕಟಾಚಲ ಅವರ ಪೂರ್ಣ ಹೆಸರು. ಇವರು 1930 ಜುಲೈ 3ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಮಿತ್ತೂರು ಗ್ರಾಮದಲ್ಲಿ ಜನಿಸಿದರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ ಪಡೆದ ಇವರು ವಕೀಲರಾಗಿ ವೃತ್ತಿ ಜೀವನ ಆರಂಭಿಸಿದರು.
ಕರ್ನಾಟಕದ ಮೊದಲ ಲೋಕಾಯುಕ್ತರಾಗಿದ್ದ ವೆಂಕಟಾಚಲ ಅವರು ಲೋಕಾಯುಕ್ತ ಸಂಸ್ಥೆಗೆ ಹೊಸ ರೂಪರೇಷೆ ನೀಡುವ ಮೂಲಕ ಭ್ರಷ್ಟರಲ್ಲಿ ನಡುಕ ಹುಟ್ಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.