ಆಡಳಿತದಲ್ಲಿ ಕನ್ನಡ ಅನುಷ್ಠಾನಕ್ಕೆ ದ.ಕ.ಮಾದರಿ: ಟಿ.ಎಸ್. ನಾಗಾಭರಣ
Team Udayavani, Apr 9, 2022, 5:50 AM IST
ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಡಳಿತದಲ್ಲಿ ಕನ್ನಡ ಪರಿಣಾಮಕಾರಿಯಾಗಿ ಅನುಷ್ಠಾನ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳೂರನ್ನು ಮಾದರಿ ಯಾಗಿಟ್ಟುಕೊಂಡು ರಾಜ್ಯದ ಎಲ್ಲ ಜಿಲ್ಲೆ
ಗಳಲ್ಲೂ ಕನ್ನಡ ಕಲಿಕೆ ಮತ್ತು ಬಳಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಟಿ.ಎಸ್. ನಾಗಾಭರಣ ತಿಳಿಸಿದರು.
ಆಡಳಿತದಲ್ಲಿ ಕನ್ನಡ ಅನುಷ್ಠಾನ ಕುರಿತಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನ ಸಭೆ ನಡೆಸಿದ ಬಳಿಕ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಕೊರೊನಾ ಸಂದರ್ಭ ಕನ್ನಡ ಕಲಿಕೆಗೆ ವಿದೇಶದಲ್ಲಿ ಆನ್‌ಲೈನ್ ಮೂಲಕ ಅಭಿಯಾನ ನಡೆಸಲಾಗಿದೆ. 56 ದೇಶಗಳ ಅನಿವಾಸಿ ಕನ್ನಡಿಗರ ಮಕ್ಕಳಿಗೆ 18 ಕಾರ್ಯಾಗಾರಗಳನ್ನು ನಡೆಸಲಾಗಿದೆ. ಅಲ್ಲಿ ಸಾಧ್ಯವಾಗಿ ರುವುದು ಇಲ್ಲಿ ಯಾಕೆ ಅಸಾಧ್ಯ ಎಂದು ನಾಗಾಭರಣ ಪ್ರಶ್ನಿಸಿದರು.
ಕೇಂದ್ರಕ್ಕೆ ಮನವಿ
ಕೇಂದ್ರೀಯ ವಿದ್ಯಾಲಯಗಳಲ್ಲಿ ಕನ್ನಡ ಭಾಷೆ ಕಲಿಸುವ ಕುರಿತಂತೆ ಕೇಂದ್ರದಿಂದ ನಿಯಮ ಜಾರಿಗೆತರಬೇಕಾಗಿದೆ. ಈ ಬಗ್ಗೆ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪ್ರಾಥಮಿಕ ಹಂತದಲ್ಲಿ ಮಾತೃ ಭಾಷೆ ಕಲಿಕೆಗೆ ಆದ್ಯತೆ ಇದೆ. ಆದರೆ ಪದವಿಯಲ್ಲಿ ಈ ಬಗ್ಗೆ ಪ್ರಸ್ತಾವವಿಲ್ಲ. ಇತ್ತೀಚೆಗೆ ಹೈಕೋರ್ಟ್ ಮಧ್ಯಾಂತರ ತೀರ್ಪಿನಲ್ಲೂ ಪದವಿ ತರಗತಿಗಳಲ್ಲಿ ಕನ್ನಡೇತರರಿಗೆ ಕನ್ನಡ ಕಲಿಕೆ ಕಡ್ಡಾಯವಲ್ಲ ಎಂದು ತಿಳಿಸಿದೆ. ಇದರಲ್ಲಿ ಪ್ರಾಧಿಕಾರ ಕೂಡ ನ್ಯಾಯಾಲಯದಲ್ಲಿ ಕನ್ನಡ ಪರವಾಗಿ ವಾದ ಮಂಡಿಸಲಿದೆ ಎಂದರು.
ಉದ್ಯೋಗ ಕಡ್ಡಾಯವಾಗಲಿ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಇತ್ತೀಚೆಗೆ 170 ಉದ್ಯೋಗಿಗಳನ್ನು ನೇಮಿಸುವಾಗ ಕೇವಲ 14 ಮಂದಿ ಕನ್ನಡಿಗರಿಗೆ ಮಾತ್ರ ಉದ್ಯೋಗ ಲಭಿಸಿದೆ. ಕರ್ನಾಟಕದ ನಾಲ್ಕು ಕಡೆ ಆಯ್ಕೆ ಪರೀಕ್ಷೆ ನಡೆಸಿದ್ದು, ಕನ್ನಡಿಗರು ಕಡಿಮೆ ಸಂಖ್ಯೆಯಲ್ಲಿ ಪರೀಕ್ಷೆಗೆ ಹಾಜರಾಗಿದ್ದರು. ಆದರೆ ಕನ್ನಡಿಗರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ನೀಡಬೇಕಾದರೆ ಈ ಕುರಿತು ಕಾಯ್ದೆ ಜಾರಿಗೆ ತರ ಬೇಕಾಗಿದೆ ಎಂದರು.
ಕನ್ನಡ ತರಬೇತಿ
ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಕನ್ನಡೇ ತರ ಅಧಿಕಾರಿಗಳಿಗೆ ಕನ್ನಡ ತರಬೇತಿ ನೀಡಲು ಉದ್ದೇಶಿಸಲಾಗಿದೆ ಎಂದು ನಾಗಾಭರಣ ವಿವರಿಸಿದರು.
ಎಂಆರ್‌ಪಿಎಲ್‌ಗೆ ನೋಟಿಸ್
ಕನ್ನಡ ಅನುಷ್ಠಾನ ನಡೆಸದೇ ಇರುವ ಕಾರಣಕ್ಕೆ ಎಂಆರ್‌ಪಿಎಲ್‌ಗೆ ಜಿಲ್ಲಾ ಕನ್ನಡ ಕಾವಲು ಸಮಿತಿಯಿಂದ ನೋಟಿಸ್ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಾಜ್ಯ ನಾಲ್ಕು ಪ್ರಾದೇಶಿಕ ವಿಭಾಗಗಳಲ್ಲಿ ಕನ್ನಡ ಅನುಷ್ಠಾನ ಬಗ್ಗೆ ವಿಚಾರ ಸಂಕಿರಣ ಹಮ್ಮಿಕೊಳ್ಳುತ್ತಿದೆ. ಮೇ ತಿಂಗಳಲ್ಲಿ ಮಂಗಳೂರಿನಲ್ಲೂ ವಿಚಾರ ಸಂಕಿರಣ ನಡೆಯಲಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ್ ಹಾನಗಲ್ ತಿಳಿಸಿದರು.
ಪ್ರಾಧಿಕಾರದ ಸದಸ್ಯ ರಮೇಶ್ ಗುಬ್ಬಿಗೂಡು ಮಾತನಾಡಿದರು. ಎಡಿಸಿ ಕೃಷ್ಣಮೂರ್ತಿ, ಜಿ.ಪಂ. ಸಿಇಒ ಡಾ| ಕುಮಾರ್, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಉಪಸ್ಥಿತರಿದ್ದರು.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜನರು ಶುದ್ಧ ಕನ್ನಡ ಮಾತನಾಡುತ್ತಿದ್ದಾರೆ. ಮುದ್ರಣ ಮಾಧ್ಯಮಗಳು ಶುದ್ಧ ಕನ್ನಡಕ್ಕೆ ಆದ್ಯತೆ ನೀಡುತ್ತಿವೆ. ತರಂಗ ವಾರ ಪತ್ರಿಕೆ¿ಲ್ಲಿ ಬಳಸುವ ಭಾಷೆ ಶುದ್ಧ ಕನ್ನಡವಾಗಿದ್ದು, ಅದರಿಂದ ನಾನು ಪ್ರೇರಿತನಾಗಿದ್ದೇನೆ. ಹಲವಾರು ಹೊಸ ಶಬ್ದಗಳನ್ನು ನಾನು ಈ ಪತ್ರಿಕೆಯ ಮೂಲಕ ಕಲಿತಿದ್ದೇನೆ.
– ಟಿ.ಎಸ್. ನಾಗಾಭರಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್ ಬಾವ
ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.