IT ದಾಳಿ ಖಂಡಿಸಿ ಕಾಂಗ್ರೆಸ್, ಜೆಡಿಎಸ್ ಪ್ರತಿಭಟನೆ; ಪೊಲೀಸ್ ಸರ್ಪಗಾವಲು
Team Udayavani, Mar 28, 2019, 2:48 PM IST
ಬೆಂಗಳೂರು: ಜೆಡಿಎಸ್, ಕಾಂಗ್ರೆಸ್ ಮುಖಂಡರ ನಿವಾಸ, ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿರುವುದನ್ನು ಖಂಡಿಸಿ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಬುಧವಾರ ಅಹೋರಾತ್ರಿ ಧರಣಿಗೆ ಮುಂದಾಗಿದೆ.
ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಪ್ರತ್ಯೇಕವಾಗಿ ಧರಣಿ ನಡೆಸುತ್ತಿದ್ದು, ತೊಲಗಲಿ, ತೊಲಗಲಿ ಬಿಜೆಪಿ ತೊಲಗಲಿ ಎಂದು ಘೋಷಣೆ ಕೂಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಪ್ರತಿಭಟನೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಮಾಧ್ಯಮದ ವರದಿಗಳು ತಿಳಿಸಿವೆ.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ಬೆಳಗ್ಗೆ ಮಂಡ್ಯ, ಹಾಸನ, ಮೈಸೂರು, ಬೆಂಗಳೂರು ಸೇರಿದಂತೆ ವಿವಿಧೆಡೆ ಕಾಂಗ್ರೆಸ್, ಜೆಡಿಎಸ್ ಮುಖಂಡರ ನಿವಾಸ, ಕಚೇರಿ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.