Monsoon in Agumbe: ಆಗುಂಬೆಯಲ್ಲಿ ಒಂದೇ ದಿನ 33 ಸೆಂ.ಮೀ. ಮಳೆ ದಾಖಲು
ಇಂದು ರಾಜ್ಯದ 6 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ, ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ
Team Udayavani, Jul 17, 2024, 7:30 AM IST
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಂಗಳವಾರ ವ್ಯಾಪಕ ಮಳೆ(Rain)ಯಾಗಿದ್ದು ಕರ್ನಾಟಕದ ಚಿರಾಪುಂಜಿ ಆಗುಂಬೆ (Agumbe)ಯಲ್ಲಿ ಕಳೆದ 24 ಗಂಟೆಯಲ್ಲಿ 33 ಸೆಂ.ಮೀ.ಮಳೆಯಾಗಿದೆ.
ನೈಋತ್ಯ ಮುಂಗಾರು ರಾಜ್ಯಾದ್ಯಂತ ಸಕ್ರಿಯವಾಗಿದ್ದು ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ಬರೋಬ್ಬರಿ 33 ಸೆಂ.ಮೀ ಅತ್ಯಧಿಕ ಮಳೆ ದಾಖಲಾಗಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ಗಾಳಿಯ ವೇಗವು 30 ರಿಂದ 50 ಕಿ.ಮೀ ವರೆಗೆ ಇದ್ದು ಕರ್ನಾಟಕದ ಕರಾವಳಿಯುದ್ದಕ್ಕೂ ಪ್ರತಿ ಗಂಟೆಗೆ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. ಮೀನುಗಾರರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆಯು ಸೂಚಿಸಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕೆಲವು ಕಡೆ ಅತೀ ಭಾರೀ ಮತ್ತು ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು ಜು.17ರಂದು ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜು.20ರ ವರೆಗೆ ರಾಜ್ಯಾದ್ಯಂತ ಭಾರೀ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಭಾರತೀಯ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ನೀಡಿದೆ.
ಬೆಳಗಾವಿ ಹಾಗೂ ಹಾಸನ ಜಿಲ್ಲೆಗಳ ಕೆಲವು ಕಡೆ ಸಹ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಜು.20ರವರೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ನಿರ್ದೇಶಕ ಹಾಗೂ ವಿಜ್ಞಾನಿ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ
Kannada ಸಾಹಿತ್ಯ ಸಮ್ಮೇಳನ 2 – 3 ವರ್ಷಕ್ಕೊಮ್ಮೆ ನಡೆಯಲಿ
MUST WATCH
ಹೊಸ ಸೇರ್ಪಡೆ
Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Mangaluru: ವೆನ್ಲಾಕ್ನಲ್ಲಿ ದೊರೆಯಲಿದೆ ಕಿಮೋಥೆರಪಿ
Ullal: ತೊಕ್ಕೊಟ್ಟು ಜಂಕ್ಷನ್ – ಭಟ್ನಗರ ರಸ್ತೆಯಲ್ಲಿ ಉಲ್ಟಾ ಸಂಚಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.