ಕೇರಳಕ್ಕೆ ಮುಂಗಾರು; ನಿಸರ್ಗ ಜತೆಗೂಡಿ ಭಾರೀ ಮಳೆ
Team Udayavani, Jun 2, 2020, 5:50 AM IST
ಹೊಸದಿಲ್ಲಿ: ಕೇರಳಕ್ಕೆ ವಾಡಿಕೆಯಂತೆ ಜೂ.1ರಂದು ನೈಋತ್ಯ ಮುಂಗಾರು ಪ್ರವೇಶಿಸಿದೆ. ಸದ್ಯ ದಲ್ಲೇ ಕರ್ನಾಟಕವನ್ನೂ ತಲುಪುವ ಸಾಧ್ಯತೆ ಇದೆ. 2013ರ ಬಳಿಕ ಇದೇ ಮೊದಲ ಬಾರಿಗೆ ನಿಗದಿತ ಸಮಯಕ್ಕೇ ಮಳೆ ಮಾರುತಗಳು ಆಗಮಿಸಿದ್ದು, ಈ ವರ್ಷ ವಾಡಿಕೆಗಿಂತ ಅಧಿಕ ಮಳೆ ಸುರಿಸಲಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಸದ್ಯ ಕೇರಳದ ಹಲವು ಜಿಲ್ಲೆಗಳಲ್ಲಿ ಮೂರು ದಿನಗಳಿಂದ ಮಳೆ ಸುರಿಯುತ್ತಿದ್ದು, ಇದು ಅರಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮುಂಗಾರು ಮಾರುತಗಳ ಜಂಟಿ ಪರಿಣಾಮ. ಉಡುಪಿ, ದಕ್ಷಿಣ ಕನ್ನಡ ಸಹಿತ ಕರ್ನಾಟಕದ ಕೆಲವು ಜಿಲ್ಲೆಗಳಲ್ಲೂ ಸೋಮ ವಾರ ಸಂಜೆಯಿಂದಲೇ ಧಾರಾಕಾರ ಮಳೆಯಾಗುತ್ತಿದೆ. ಮುಂದಿನ 24 ತಾಸುಗಳ ಅವಧಿಯಲ್ಲಿ ಕೇರಳದ ಒಂಬತ್ತು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಹಾ,ಗುಜರಾತ್‌ಗೆ ನಾಳೆ “ನಿಸರ್ಗ’
ಅರಬಿ ಸಮುದ್ರದ ನೈಋತ್ಯ ಭಾಗ ದಲ್ಲಿ ಸೃಷ್ಟಿ ಯಾಗಿರುವ ವಾಯುಭಾರ ಕುಸಿತ ಸೋಮವಾರ ಮತ್ತಷ್ಟು ತೀವ್ರತೆ ಪಡೆದಿದೆ.ಇದು ಮಂಗಳವಾರದ ಹೊತ್ತಿಗೆ ಚಂಡಮಾರುತ ವಾಗಲಿದ್ದು, ಜೂ.3ರಂದು ಮಹಾರಾಷ್ಟ್ರ ಮತ್ತು ಗುಜರಾತ್ ಕರಾವಳಿಗೆ ಅಪ್ಪಳಿಸಲಿದೆ. ಇದಕ್ಕೆ “ನಿಸರ್ಗ’ ಎಂದು ಹೆಸರಿಡಲಾಗಿದೆ. ಕರ್ನಾಟಕ,ಕೇರಳ,ಗೋವಾಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕ ಕರಾವಳಿಯಲ್ಲೂ ಭಾರೀ ಮಳೆ ಜತೆಗೆ ವೇಗದ ಗಾಳಿ ಬೀಸ ಲಿದ್ದು, ಮೀನುಗಾರರು ಸಮುದ್ರಕ್ಕಿಳಿ ಯದಂತೆ ಎಚ್ಚರಿಕೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು
Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ
Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ
Kasturi Shankar: ನಟಿ ಕಸ್ತೂರಿ ಶಂಕರ್ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ
Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್ ಮೀನಾ ಬಂಧನ!
MUST WATCH
ಹೊಸ ಸೇರ್ಪಡೆ
Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು
Mika Singh: ಮಿಕಾ ಹಾಡಿಗೆ ಫಿದಾ..ಪಾಕ್ ಅಭಿಮಾನಿಯಿಂದ 3 ಕೋಟಿ ರೂ. ವಾಚ್, ಚಿನ್ನ ಗಿಫ್ಟ್
Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ
Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ
Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.