Monsoon : 2 ದಿನಗಳಲ್ಲಿ ಆವರಿಸಲಿದೆ ಮುಂಗಾರು: ಬಿರುಸು ನಿರೀಕ್ಷೆ
Team Udayavani, Jun 12, 2023, 7:51 AM IST
ಬೆಂಗಳೂರು: ರಾಜ್ಯದ ಕರಾವಳಿ ಸಹಿತ ಕೆಲವು ಭಾಗಗಳಿಗೆ ಮುಂಗಾರು ಪ್ರವೇಶಿಸಿದ್ದು, ಮುಂದಿನ ಎರಡು ದಿನಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಮುಂಗಾರು ಮಳೆ ಆರಂಭವಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ರವಿವಾರ ಇಬ್ಬರು ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮೃತರನ್ನು ರಾಯಚೂರಿನ ದೇವದುರ್ಗದ ಗೆಜ್ಜೆಬಾವಿ ದೊಡ್ಡಿಯ ಮೌನೇಶ ನಿಂಗಪ್ಪ (45), ಕಡೂರಿನ ತರೀಕೆರೆ ತಾಲೂಕಿನ ಗಂಜಿಗೆರೆ ಗ್ರಾಮದಲ್ಲಿ ಮುಖೇಶ್ (33) ಎಂದು ಗುರುತಿಸಲಾಗಿದೆ.
ರವಿವಾರ ಮುಂಗಾರಿನ ಉತ್ತರ ಸೀಮಾರೇಖೆ (ಎನ್‌ಎಲ್‌ಎಂ)ಯು ರತ್ನಗಿರಿ, ಶಿವಮೊಗ್ಗ, ಹಾಸನ, ಧರ್ಮಪುರಿ ಮತ್ತು ಶ್ರೀಹರಿಕೋಟಾವರೆಗೆ ಆವರಿಸಿದೆ. ಮುಂದಿನ ಎರಡು ದಿನಗಳಲ್ಲಿ ರಾಜ್ಯವನ್ನು ಪೂರ್ಣಪ್ರಮಾಣದಲ್ಲಿ ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ. ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಕಡೆ ಸೋಮವಾರದಿಂದ ಮುಂಗಾರು ಮಳೆ ಆರಂಭವಾಗುವ ಸಾಧ್ಯತೆಗಳಿವೆ. ಉತ್ತರ ಒಳನಾಡಿನಲ್ಲಿ ಈಗಾಗಲೇ ಮಳೆ ಸುರಿಯುತ್ತಿದೆ. ಕರಾವಳಿಯಲ್ಲೂ ಹೆಚ್ಚಿನ ಮಳೆಯಾಗಲಿದೆ. ರಾಜ್ಯದಲ್ಲಿ ನೈಋತ್ಯ ದಿಕ್ಕಿನಿಂದ ಗಾಳಿ ಬೀಸುತ್ತಿದ್ದು, ಸಾಮಾನ್ಯವಾಗಿ ಇದು ಮುಂಗಾರು ಪ್ರವೇಶಕ್ಕೆ ಮುನ್ನ ಬೀಸುತ್ತದೆ ಎಂದು ಹವಾಮಾನ ತಜ್ಞ ಪ್ರಸಾದ್ “ಉದಯವಾಣಿ”ಗೆ ಮಾಹಿತಿ ನೀಡಿದ್ದಾರೆ.
ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಸೇರಿದಂತೆ ಕೆಲವೆಡೆ ಗಾಳಿಯ ವೇಗವು ತಾಸಿಗೆ 40ರಿಂದ 50 ಕಿ.ಮೀ ಇರಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.