ರಾಜ್ಯ ಕರಾವಳಿಗೆ ಕಾಲಿರಿಸಿದ ಮುಂಗಾರು
ಈ ಬಾರಿ ವಾಡಿಕೆ ಮಳೆ ನಿರೀಕ್ಷೆ
Team Udayavani, Jun 5, 2020, 6:15 AM IST
ಮಂಗಳೂರು: ನಿರೀಕ್ಷೆ ಯಂತೆ ರಾಜ್ಯ ಕರಾವಳಿ ಭಾಗಕ್ಕೆ ಗುರುವಾರ ಮುಂಗಾರು ಪ್ರವೇಶ ಪಡೆದಿದೆ. ಪರಿಣಾಮವಾಗಿ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ.
ಕೆಲವಾರು ವರ್ಷಗಳ ಬಳಿಕ ಈ ಬಾರಿ ಜೂ. 1ರಂದೇ ಮುಂಗಾರು ಮಾರುತಗಳು ಕೇರಳವನ್ನು ಪ್ರವೇಶಿಸಿ ದ್ದವು. ಆ ಬಳಿಕ ಕೆಲವೇ ದಿನಗಳಲ್ಲಿ ಅವು ರಾಜ್ಯದ ಕರಾವಳಿ ಯನ್ನು ತಲುಪುವುದು ವಾಡಿಕೆ. ಈ ಬಾರಿ ಮಾನ್ಸೂನ್ ಈ ನಿಗದಿತ ವೇಳಾಪಟ್ಟಿ ಪಾಲಿಸಿದೆ. “ನಿಸರ್ಗ’ ಚಂಡಮಾರುತ ಮುಂಗಾರಿನ ಕ್ಷಿಪ್ರ ಚಲನೆಗೆ ಪೂರಕವಾಗಿತ್ತು.
ಕಳೆದ ವರ್ಷಕ್ಕೆ ಹೋಲಿಸಿದರೆ ಮುಂಗಾರು 10 ದಿನಗಳ ಮುಂಚಿತ ವಾಗಿ ಕರಾವಳಿ ಪ್ರವೇಶಿಸಿದೆ. ಕಳೆದ ವರ್ಷ ಜೂನ್ 14ರಂದು ಅದು ಆಗಮಿಸಿತ್ತು.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಯಂತೆ ಈ ಬಾರಿಯ ಮುಂಗಾರು ಋತುವಿನಲ್ಲಿ ಕರಾವಳಿ ಯಲ್ಲಿ ವಾಡಿಕೆಯಂತೆ ಮಳೆಯಾಗುವ ಸಾಧ್ಯತೆ ಇದೆ.
ಉತ್ತಮ ಮಳೆ ಸಂಭವ
ಮುಂದಿನ ಕೆಲವು ದಿನಗಳವರೆಗೆ ಕರಾವಳಿ, ಒಳನಾಡು ಭಾಗದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಜೂನ್ 8ರಿಂದ ಮೂರು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗ ಬಹುದು ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಗುರುವಾರದಂದು ಕರಾವಳಿ ಮತ್ತು ಮಲೆನಾಡು ಪ್ರದೇಶ ಗಳಿಗೆ ಮುಂಗಾರು ಕಾಲಿಟ್ಟಿದ್ದು, ಮುಂದಿನ ಒಂದೆರಡು ದಿನಗಳಲ್ಲಿ ದಕ್ಷಿಣ ಒಳನಾಡು ಪ್ರದೇಶಗಳಾದ ಮೈಸೂರು, ಮಂಡ್ಯ, ಬೆಂಗಳೂರು, ಹಾಸನ, ರಾಮನಗರ, ತುಮಕೂರು ಸೇರಿದಂತೆ ಮತ್ತಿತರ ಪ್ರದೇಶಗಳಿಗೆ ಪ್ರವೇಶ ಪಡೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆಯ.
ಮುಂದುವರಿದ ಮಳೆ
ಅರಬಿ ಸಮುದ್ರದಲ್ಲಿ ಸೃಷ್ಟಿಯಾದ “ನಿಸರ್ಗ’ ಚಂಡಮಾರುತ ಪರಿ ಣಾಮವಾಗಿ ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಗುರುವಾರ ಬೆಳಗ್ಗಿನಿಂದಲೇ ದ.ಕ. ಜಿಲ್ಲೆಯ ಹೆಚ್ಚಿನ ಕಡೆ ಉತ್ತಮ ಮಳೆಯಾಗಿತ್ತು. ಮಂಗಳೂರು ನಗರದಲ್ಲಿ ಬೆಳಗ್ಗಿನ ಜಾವದಿಂದ ಬಿಟ್ಟು ಬಿಟ್ಟು ಮಳೆಯಾಗಿತ್ತು.ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೂಡ ಗುರುವಾರ ಸಾಧಾರಣ ಮಳೆ ಯಾಗಿದೆ. ಬ್ರಹ್ಮಾವರದ ನಾಲ್ಕೂರು ಗ್ರಾ.ಪಂ. ವ್ಯಾಪ್ತಿಯ ಮಿಯಾರಿನಲ್ಲಿ ಲಕ್ಷ್ಮೀ ಕುಲಾಲ್ ಅವರ ಮನೆಗೆ ಬುಧವಾರ ರಾತ್ರಿ ಸಿಡಿಲು ಬಡಿದು ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಹೋಗಿವೆ.
ಎರಡು ದಿನ ಎಲ್ಲೊ ಅಲರ್ಟ್
ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಭಾಗದಲ್ಲಿ ಎರಡು ದಿನಗಳ ಕಾಲ ಎಲ್ಲೊ ಅಲರ್ಟ್ ಘೋಷಣೆ ಮಾಡಿದೆ. ಮುಂದಿನ ಎರಡು ದಿನಗಳಲ್ಲಿ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಜತೆಗೆ ಗಾಳಿ ಮತ್ತು ಗುಡುಗು ಕೂಡ ಇರಲಿದೆ ಎಂದು ಮುನ್ಸೂಚನೆ ನೀಡಿದೆ.
ರಾಜ್ಯ ಕರಾವಳಿ ಭಾಗಕ್ಕೆ ಜೂನ್ 4ರಂದು ಮುಂಗಾರು ಪ್ರವೇಶ ಪಡೆದಿದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಈ ಬಾರಿ ವಾಡಿಕೆಯಂತೆ ಮಳೆಯಾಗಲಿದೆ. ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
– ಸುನಿಲ್ ಗವಾಸ್ಕರ್
ಕೆಎಸ್‌ಎನ್‌ಡಿಎಂಸಿ ವಿಜ್ಞಾನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.