ಸ್ಮಾರ್ಟ್‌ಫೋನ್, ಎಲೆಕ್ಟ್ರಾನಿಕ್ಸ್ ವಸ್ತುಗಳಿಗೆ ಭರ್ಜರಿ ಬೇಡಿಕೆ
Team Udayavani, Nov 15, 2020, 7:15 AM IST
ಹೊಸದಿಲ್ಲಿ: ಕೊರೊನಾ ಲಾಕ್‌ಡೌನ್ ಅನಂತರದಲ್ಲಿ ನಿರೀಕ್ಷೆಗೂ ಮೀರಿ ಮಾರುಕಟ್ಟೆ ಚೇತರಿಸಿಕೊಳ್ಳುತ್ತಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ದೀಪಾವಳಿ ಸಡಗರದಲ್ಲಿ ಸ್ಮಾರ್ಟ್‌ಫೋನ್ ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ಮಾರುಕಟ್ಟೆ ಜಿಗಿತುಕೊಂಡಿದೆ.
ಅದರಲ್ಲೂ ಟಿವಿ, ರೆಫ್ರಿಜರೇಟರ್ಸ್ ಮತ್ತು ವಾಷಿಂಗ್ ಮೆಷಿನ್ ಗಳ ಮಾರಾಟದಲ್ಲಿ ಶೇ.8ರಿಂದ 10ರಷ್ಟು ಪ್ರಗತಿಯಾಗಿದೆ ಎಂದು ಉದ್ಯಮ ಮೂಲಗಳು ಹೇಳಿವೆ. ವಿಶೇಷವೆಂದರೆ, ಲ್ಯಾಪ್‌ಟಾಪ್ ಸೇರಿದಂತೆ ಕೆಲವೊಂದು ಎಲೆಕ್ಟ್ರಾನಿಕ್ ವಸ್ತುಗಳಿಗೆ ಬೇಡಿಕೆ ಹೆಚ್ಚಿದ್ದರೂ ಮಾರುಕಟ್ಟೆಗೆ ಸರಿಯಾಗಿ ಪೂರೈಕೆಯಾಗಿಲ್ಲ. ಹೀಗಾಗಿ ಕೆಲವೆಡೆ ಮಾರಾಟ ಕಡಿಮೆಯಾಗಿದೆ ಎಂದು ಹೇಳಲಾಗುತ್ತಿದೆ.
ಗ್ರಾಹಕರ ಸೆಳೆಯುವ ಸಲುವಾಗಿ ಕಂಪೆನಿಗಳು ಉತ್ತಮ ಇಎಂಐ ಸ್ಕೀಮ್, ಹಣಕಾಸು ಯೋಜನೆಗಳು, ಕ್ಯಾಶ್‌ಬ್ಯಾಕ್‌ನಂಥ ಆಫರ್ ನೀಡಿದ್ದವು. ಇದರಿಂದಾಗಿ ಗ್ರಾಹಕರ ಖರೀದಿ ವೆಚ್ಚವೂ ಹೆಚ್ಚಾಯಿತು. ಕಳೆದೊಂದು ವಾರದಲ್ಲಿ ಈ ವಸ್ತುಗಳ ಮಾರಾಟದಲ್ಲಿ ಗಣನೀಯ ಪ್ರಗತಿಯಾಗಿದೆ ಎಂದು ಕಂಪೆನಿಗಳು ಹೇಳಿಕೊಂಡಿವೆ.
ಇನ್ನು ಬಟ್ಟೆ ಮತ್ತು ಲೈಫ್ ಸ್ಟೈಲ್‌ಗೆ ಸಂಬಂಧಿಸಿದ ವಸ್ತುಗಳ ಮಾರಾಟವೂ ಜೋರಾಗಿದೆ. ಕಂಪೆನಿಗಳು ಹೇಳುವ ಪ್ರಕಾರ, ಈ ಉದ್ಯಮ ನಿರೀಕ್ಷೆಗೂ ಮೀರಿ ಬೆಳೆದಿದೆ. ಅಂದರೆ, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ, ಶೇ.80ರಿಂದ ಶೇ.85ರಷ್ಟು ಹೆಚ್ಚು ಮಾರಾಟವಾಗಿದೆ ಎಂದು ಎಕನಾಮಿಕ್ಸ್ ಟೈಮ್ಸ್ ಪತ್ರಿಕೆ ವರದಿ ಮಾಡಿದೆ ಎಲೆಕ್ಟ್ರಾನಿಕ್ ರಿಟೈಲರ್ಸ್ ಪ್ರಕಾರ, ಟಿವಿ, ರೆಫ್ರಿಜರೇಟರ್ಸ್, ಅಡುಗೆ ಮನೆ ಸಾಮಗ್ರಿಗಳು, ಲ್ಯಾಪ್‌ಟಾಪ್‌ಗಳಿಗೆ ಹೆಚ್ಚಿನ ಬೇಡಿಕೆ ಇತ್ತು. ಆದರೆ, ಪೂರೈಕೆಯಲ್ಲಿ ಕೊಂಚ ಸಮಸ್ಯೆಯಾಗಿದೆ. ಆದರೂ ಈ ವಲಯದಲ್ಲಿ ಶೇ.15ರಿಂದ 20ರಷ್ಟು ಮಾರಾಟ ಹೆಚ್ಚಾಗಿದೆ ಎಂದಿದ್ದಾರೆ.
ಎಲ್‌ಜಿ ಇಂಡಿಯಾದ ಉಪಾಧ್ಯಕ್ಷ ವಿಜಯ್ ಬಾಬು ಹೇಳುವ ಪ್ರಕಾರ, ದೇಶದ ಸಣ್ಣಪುಟ್ಟ ನಗರಗಳಲ್ಲಿ ಎಲೆಕ್ಟ್ರಾನಿಕ್ ಮತ್ತು ಸ್ಮಾರ್ಟ್ ಫೋನ್ ಗಳಿಗೆ ಹೆಚ್ಚಿನ ಬೇಡಿಕೆ ಬಂದಿದೆ. ಇಲ್ಲಿ ಶೇ.50ರಷ್ಟು ಬೆಳವಣಿಗೆಯಾಗಿದೆ. ಕೆಲವೆಡೆ ನೋ ಸ್ಟಾಕ್ ಬೋರ್ಡ್‌ಗಳು ಕಾಣಿಸುತ್ತಿವೆ ಎಂದಿದ್ದಾರೆ.
ಸ್ಮಾರ್ಟ್‌ಫೋನ್‌ಗಳಿಗೆ ಡಿಮ್ಯಾಂಡ್
ಈಗ ಆನ್‌ಲೈನ್ ಕ್ಲಾಸ್ ನಡೆಯುತ್ತಿರುವುದರಿಂದ ಸ್ಮಾರ್ಟ್ ಫೋನ್‌ಗಳಿಗೆ ಹೆಚ್ಚು ಬೇಡಿಕೆ ಇದೆ. ಮೊದಲು ಸ್ಮಾರ್ಟ್ ಫೋನ್ ಖರೀದಿದಾರರ ವಯಸ್ಸು 18 ವರ್ಷದಿಂದ ಆರಂಭವಾಗುತ್ತಿತ್ತು. ಆದರೆ ಈಗ 10 ವರ್ಷ ಮೇಲ್ಪಟ್ಟ ಮಕ್ಕಳ ಸಲುವಾಗಿ ಖರೀದಿಯಾಗುತ್ತಿದೆ ಸಂಗೀತಾ ಮೊಬೈಲ್ಸ್‌ನ ನಿರ್ದೇಶಕ ಚಂದು ರೆಡ್ಡಿ ಹೇಳಿದ್ದಾರೆ. ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಬಹುತೇಕ ಹೆಚ್ಚಿನ ಕಂಪೆನಿಗಳ ಮೊಬೈಲ್‌ಗಳಿಗೆ ಹೆಚ್ಚಿನ ಬೇಡಿಕೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್ ಪೇ ಇನ್ನು ಎಲ್ಲರಿಗೂ ಲಭ್ಯ
Airtel Outage:ದೇಶದ ಹಲವೆಡೆ ಏರ್ ಟೆಲ್ Network ಸಮಸ್ಯೆ; ಏರ್ ಟೆಲ್ ಗ್ರಾಹಕರಿಂದ ದೂರು
Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!
YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.