Noida: ಚಲಿಸುತ್ತಿದ್ದ A/C ಬಸ್ ಗೆ ಬೆಂಕಿಹೊತ್ತಿಕೊಂಡು ಭಸ್ಮ- ಪ್ರಯಾಣಿಕರು ಅಪಾಯದಿಂದ ಪಾರು
Team Udayavani, Nov 15, 2023, 4:55 PM IST
ನವದೆಹಲಿ: ನೋಯ್ಡಾ ಮತ್ತು ಗ್ರೇಟರ್ ನೋಯ್ಡಾ ಸಂಪರ್ಕಿಸುವ ಬಸ್ ಚಲಿಸುತ್ತಿದ್ದ ವೇಳೆಯಲ್ಲೇ ಬೆಂಕಿ ಹೊತ್ತಿಕೊಂಡ ಘಟನೆ ನೋಯ್ಡಾ ಎಕ್ಸ್ ಪ್ರೆಸ್ ನಲ್ಲಿ ನಡೆದಿದ್ದು, ಭೀತಿಗೊಳಗಾದ ಪ್ರಯಾಣಿಕರು ಕ್ಷಿಪ್ರವಾಗಿ ಬಸ್ ನಿಂದ ಹೊರಹಾರುವ ಮೂಲಕ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ವರದಿ ವಿವರಿಸಿದೆ.
ಇದನ್ನೂ ಓದಿ:Bhatkal: ದೆಹಲಿಯಲ್ಲಿ ರಾಷ್ಟ್ರಪತಿಯವರನ್ನು ಭೇಟಿಯಾದ ಭಟ್ಕಳ ಸ್ನೇಹ ವಿಶೇಷ ಶಾಲೆಯ ತಂಡ
ಘಟನೆ ಬಗ್ಗೆ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯ ಪೊಲೀಸರು ಸ್ಥಳಕ್ಕೆ ತೆರಳಿದ್ದರು. ಬಳಿಕ ಉಳಿದ ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸಿದ್ದರು. ಅಗ್ನಿಶಾಮಕ ದಳದ ಸಿಬಂದಿಗಳು ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ತೊಡಗಿದ್ದರು ಎಂದು ವರದಿ ಹೇಳಿದೆ.
ಹವಾನಿಯಂತ್ರಿತ ಬಸ್ ಅಗ್ನಿ ಅನಾಹುತದಿಂದ ಸಂಪೂರ್ಣವಾಗಿ ಭಸ್ಮಗೊಂಡಿದೆ. ಆದರೆ ಯಾವುದೇ ಸಾವು-ನೋವು ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅನಾಹುತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
नोएडा में चलती बस बनी आग का गोला,सवारियों से भरी बस में अचानक लगी भीषण आग। सवारियों ने कूद कर बचाई जान@JagranNews @noidapolice pic.twitter.com/hRSRUgR0og
— Dharmendra Kumar (@Dkumarchandel) November 15, 2023
ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ಆದರೆ ಚಲಿಸುತ್ತಿದ್ದ ಬಸ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ನೋಯ್ಡಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುವಂತಾಗಿತ್ತು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.