MUDA Case: ಇ.ಡಿ. ವಿಚಾರಣೆಗೆ ಮುಡಾ ಮಾಜಿ ಆಯುಕ್ತ ದಿನೇಶ್ ಹಾಜರು ?
ಕೆಲವು ಅಧಿಕಾರಿಗಳಿಗೆ ಸಮನ್ಸ್ ನೀಡಲು ಸಿದ್ಧತೆ?
Team Udayavani, Nov 7, 2024, 7:20 AM IST
ಬೆಂಗಳೂರು: ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಇ.ಡಿ. ವಿಚಾರಣೆಗೆ ಹಾಜರಾಗಿರುವ ಕುರಿತು ವದಂತಿ ಹಬ್ಬಿದ್ದು ಈ ಬಗ್ಗೆ ಇ.ಡಿ. ಮೂಲಗಳು ದೃಢಪಡಿಸಿಲ್ಲ. ಇದರ ಜತೆಗೆ ಮುಡಾ ಸುಳಿಯಲ್ಲಿ ಸಿಲುಕಿರುವ ಇನ್ನೂ ಕೆಲವು ಅಧಿಕಾರಿಗಳಿಗೆ ಸಮನ್ಸ್ ನೀಡಲು ಇ.ಡಿ. ಸಿದ್ಧತೆ ನಡೆಸಿದೆ.
ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ಗೆ ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಸಮನ್ಸ್ ಜಾರಿ ಮಾಡಿತ್ತು. ಅ.28ರಂದು ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಬೆಂಗಳೂರಿನ ನಿವಾಸದ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ವಾಕಿಂಗ್ ಮಾಡುತ್ತಿದ್ದ ದಿನೇಶ್ ಕುಮಾರ್, ಮನೆ ಮೇಲೆ ದಾಳಿ ನಡೆದ ಸುದ್ದಿ ತಿಳಿಯುತ್ತಿದ್ದಂತೆ ಪರಾರಿಯಾಗಿದ್ದರು. ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಅಧಿಕಾರಿಗಳು ಅವರ ಮನೆಗೆ ನೋಟಿಸ್ ಅಂಟಿಸಿದ್ದರು.
ಇದೀಗ ಬುಧವಾರ ಶಾಂತಿನಗರದಲ್ಲಿರುವ ಇ.ಡಿ. ಕಚೇರಿಗೆ ದಿನೇಶ್ ಕುಮಾರ್ ಹಾಜರಾಗಿರುವ ವದಂತಿಗಳು ಹಬ್ಬಿವೆ. ದಿನೇಶ್ ಕುಮಾರ್ ಹಾಜರಾಗಿರುವುದನ್ನು ಇ.ಡಿ. ಮೂಲಗಳು ದೃಢಪಡಿಸಿಲ್ಲ. ಒಂದು ವೇಳೆ ಇ.ಡಿ. ಎದುರು ವಿಚಾರಣೆಗೆ ಹಾಜರಾಗದೇ ಇದ್ದರೆ ದಿನೇಶ್ ಕುಮಾರ್ ಅವರನ್ನು ಇ.ಡಿ. ಅಧಿಕಾರಿಗಳು ಬಂಧಿಸುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.