MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ: ಅಶೋಕ್
Team Udayavani, Oct 2, 2024, 2:17 AM IST
ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹಾಗೂ ಸಿಬಿಐ ತನಿಖೆಗೆ ವಹಿಸುವವರೆಗೂ ಬಿಜೆಪಿಯಿಂದ ಹೋರಾಟ ನಡೆಯಲಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯ ಹೋರಾಟದ ಫಲವಾಗಿ ಮುಡಾ ಹಗರಣ ಈ ಹಂತಕ್ಕೆ ಬಂದಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬುದು ನಮ್ಮ ಆಗ್ರಹ. ಈ ಗುರಿ ಈಡೇರುವವರೆಗೂ ಹೋರಾಟ ಮಾಡುತ್ತೇವೆ. ಈ ಹೋರಾಟ ನಿಲ್ಲಲ್ಲ. ಸಚಿವ ಬಿ.ನಾಗೇಂದ್ರ ರಾಜೀನಾಮೆ ಕೊಡಲ್ಲ ಎಂದಿದ್ದರು. ಬಳಿಕ ಕಾನೂನಿನ ಕುಣಿಕೆಯಲ್ಲಿ ಸಿಲುಕಿಕೊಂಡು ರಾಜೀನಾಮೆ ನೀಡಿದರು. ಇದೇ ರೀತಿ ಸಿದ್ದರಾಮಯ್ಯ ಕೂಡ ರಾಜೀನಾಮೆ ನೀಡಬೇಕಾಗುತ್ತದೆ ಎಂದು ವ್ಯಂಗ್ಯವಾಡಿದರು.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ಹಂದಿ ಎಂದು ನಿಂದಿಸಿದ್ದಾರೆ. ಈ ಅಧಿಕಾರಿಯ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರಕಾರ ಕ್ರಮ ಕೈಗೊಳ್ಳಬೇಕು. ಕಾನೂನಿನಿಂದ ನುಣುಚಿಕೊಳ್ಳಲು ನೇರವಾಗಿ ಪತ್ರ ಬರೆಯದೆ, ಕೆಳ ಹಂತದ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಅಧಿಕಾರಿ ತನ್ನ ಮಿತಿ ಮೀರಿ ವರ್ತಿಸಿರುವುದು ಖಂಡನೀಯ. ಸರಕಾರದ ಮುಖ್ಯ ಕಾರ್ಯದರ್ಶಿ ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.