MUDA Case: ಜಾರಿ ನಿರ್ದೇಶನಾಲಯದಿಂದ ನೂರಾರು ಪುಟಗಳ ದಾಖಲೆ ವಶ

ಉದ್ಯಮಿ ಜಯರಾಮು ಮನೆ, ಕಚೇರಿ ಮೇಲೆ ದಾಳಿ ಪ್ರಕರಣ

Team Udayavani, Oct 31, 2024, 7:25 AM IST

ED-Raid

ಮೈಸೂರು: ಮುಡಾ ಹಗರಣ ಸಂಬಂಧ ರಿಯಲ್‌ ಎಸ್ಟೇಟ್‌ ಉದ್ಯಮಿ ಜಯರಾಮು ಅವರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳ ತಂಡ ನೂರಾರು ಪುಟಗಳ ದಾಖಲೆ ವಶಕ್ಕೆ ಪಡೆದು ಪರಿಶೀಲನೆ ಪೂರ್ಣಗೊಳಿಸಿದ್ದಾರೆ.

ಮೈಸೂರಿನ ಕುವೆಂಪು ನಗರದಲ್ಲಿರುವ ಎಂಎಂಜಿ ಕನ್ಸ್‌ಸ್ಟ್ರಕ್ಷನ್‌ ಕಚೇರಿ ಹಾಗೂ ಶ್ರೀರಾಂಪುರದಲ್ಲಿರುವ ಜಯರಾಮು ಅವರ ನಿವಾಸಕ್ಕೆ ಸೋಮವಾರ ಬೆಳಗ್ಗೆಯಿಂದ ಇ.ಡಿ. ಅಧಿಕಾರಿಗಳ ತಂಡ ದಾಳಿ ಮಾಡಿ ಬುಧವಾರ ಬೆಳಗ್ಗೆವರೆಗೆ ಕಾರ್ಯಾಚರಣೆ ನಡೆಸಿ ಪರಿಶಿಲನೆ ಕಾರ್ಯ ಪೂರ್ಣಗೊಳಿಸಿದ್ದಾರೆ. ಈ ವೇಳೆ ಜಯ ರಾಮುಗೆ ಮುಡಾ ಅಧಿಕಾರಿಗಳೊಂದಿಗೆ ಇರುವ ನಂಟಿನ ಬಗ್ಗೆ ಪ್ರಶ್ನಿಸಲಾಗಿದೆ ಎಂದು ತಿಳಿದು ಬಂದಿದೆ.

ಪರಿ ಶೀ ಲನೆ ವೇಳೆ ಕಂಪೆನಿಯ ಎಲ್ಲ ವ್ಯವಹಾರಗಳ ದಾಖಲೆಯ ನಕಲು ಪ್ರತಿಗಳು, ಎಂಎಂಜಿ ಕನ್ಸ್‌ಸ್ಟ್ರಕ್ಷನ್‌ ಹಾಗೂ ವಕ್ರತುಂಡ ಸೊಸೈಟಿಗೆ ಸಂಬಂಧಿಸಿದ ಬ್ಯಾಂಕ್‌ ಖಾತೆಗಳ ವಿವರಗಳನ್ನು ಸಂಗ್ರಹಿಸಲಾಗಿದೆ. ಎಚ್‌.ಡಿ. ಕೋಟೆ ತಾಲೂಕಿನ ಜಯರಾಮು ಉದ್ಯಮಿಯಾಗಿದ್ದು, ಅಲ್ಪ ಅವಧಿಯಲ್ಲಿ ದೊಡ್ಡ ಪ್ರಮಾಣದ ವ್ಯವಹಾರ ನಡೆಸುತ್ತಿರುವ ಹಾಗೂ ಆಸ್ತಿ ಹೊಂದಿರುವ ಕುರಿತೂ ಇ.ಡಿ. ಪ್ರಶ್ನಿಸಿದೆ ಎಂದು ತಿಳಿದು ಬಂದಿದೆ.

ಮಾಹಿತಿ ಕೊಟ್ಟಿದ್ದೇವೆ: ಜಯರಾಮು
ಇ.ಡಿ. ದಾಳಿ ಸಂಬಂಧ ಮಾತನಾಡಿರುವ ಬಿಲ್ಡರ್‌ ಜಯರಾಮ್‌, ಮುಡಾ ಆಯುಕ್ತ ದಿನೇಶ್‌ ಅವರನ್ನು ಬಡಾವಣೆಗಳ ಕೆಲಸಕ್ಕೆ ಸಂಬಂಧಿಸಿ ಕಚೇರಿಯಲ್ಲಿ ಭೇಟಿ ಮಾಡಿದ್ದೆ . ಅವರು ಹಾಗೂ ಅವರ ಭಾಮೈದ ತೇಜಸ್‌ಗೌಡ ಜತೆಗೆ ವ್ಯಾವಹಾರಿಕ ಸಂಬಂಧವಿಲ್ಲ. ಯಾರ ಹೆಸರಿನಲ್ಲೂ ಬೇನಾಮಿ ಆಸ್ತಿ ಹೊಂದಿಲ್ಲ. ಕಳೆದ 10 ವರ್ಷದಿಂದ ರಿಯಲ್‌ ಎಸ್ಟೇಟ್‌ ಉದ್ಯಮದಲ್ಲಿದ್ದು, ಸಾವಿರಾರು ಮನೆ ಹಾಗೂ ನಿವೇಶನ ನಿರ್ಮಿಸಿ ಮಾರಾಟ ಮಾಡಿದ್ದೇನೆ.

ಕ್ಯಾಥೋಲಿಕ್‌ ಸೊಸೈಟಿಗೆ ಮುಡಾದಿಂದ 50:50 ಅನುಪಾತದ ಅಡಿ ನೀಡಲಾಗಿದ್ದ ನಿವೇಶನಗಳ ಪೈಕಿ 5 ನಿವೇಶನ ಖರೀದಿಸಿದ್ದು, ಅದರ ಮಾಹಿತಿ ನೀಡಿದ್ದೇನೆ ಎಂದು ಹೇಳಿ ದ್ದಾರೆ. ವಕ್ರತುಂಡ ಸಹಕಾರ ಸಂಘ ಸಾರ್ವಜನಿಕರ ಸೊಸೈಟಿ ನಮಗೆ ಸೇರಿದ್ದಲ್ಲ. ಮುಂದಿನ ದಿನಗಳಲ್ಲಿ ವಿಚಾರಣೆಗೆ ಇ.ಡಿ. ಮತ್ತೆ ಕರೆದರೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.