MUDA Case: ಲೋಕಾಯುಕ್ತದಿಂದ ಕೆಸರೆ ಗ್ರಾಮದ ವಿವಾದಿತ ಸ್ಥಳದಲ್ಲಿ ಮಹಜರು
ಸ್ನೇಹಮಯಿ ಕೃಷ್ಣ ಸಮ್ಮುಖದಲ್ಲಿ ಸ್ಥಳ ಪರಿಶೀಲಿಸಿದ ಅಧಿಕಾರಿಗಳು, ಲೋಕಾಯುಕ್ತ ಕಚೇರಿಗೆ ತೆರಳಿ ಅಗತ್ಯ ದಾಖಲೆಗಳ ಒದಗಿಸಿದ ದೂರುದಾರ
Team Udayavani, Oct 2, 2024, 7:20 AM IST
ಮೈಸೂರು: ಮುಡಾ ನಿವೇಶನ ಹಂಚಿಕೆಯಲ್ಲಿನ ಅಕ್ರಮದ ತನಿಖೆ ಚುರುಕುಗೊಳಿಸಿರುವ ಲೋಕಾಯುಕ್ತ ಪೊಲೀಸರು ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಮೈಸೂರು ತಾಲೂಕಿನ ಕೆಸರೆ ಗ್ರಾಮದಲ್ಲಿರುವ ವಿವಾದಿತ ಜಾಗಕ್ಕೆ ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದರು.
6 ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲಿಸಿದ್ದ ಮೈಸೂರು ಲೋಕಾಯುಕ್ತ ಪೊಲೀಸರು, ಸೋಮವಾರ ದೂರುದಾರ ಸ್ನೇಹ ಮಯಿ ಕೃಷ್ಣ ಅವರಿಗೆ ನೋಟಿಸ್ ನೀಡಿ ಮಂಗಳವಾರ ಬೆಳಗ್ಗೆ 7.30ಕ್ಕೆ ವಿಚಾರಣೆಗೆ ಬರುವಂತೆ ಸೂಚಿಸಿದ್ದರು. ಕೆಸರೆಯ ಸರ್ವೇ ನಂ. 464 ಮಾತ್ರವಲ್ಲದೇ ಸಂಪೂರ್ಣ ಬೌಂಡರಿಯ ಸರ್ವೇ ಕಾರ್ಯ ನಡೆಯಿತು.
ಮುಡಾ ನಿವೇಶನ ಹಂಚಿಕೆಯಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಹೆಸರಿಗೆ ವರ್ಗಾವಣೆಯಾದ ನಿವೇಶನ ವ್ಯವಹಾರದಲ್ಲಿ ಅಕ್ರಮವಾಗಿದೆಯೇ ಎಂಬ ಅಧಿಕಾರಿಗಳು ತನಿಖೆ ಕೈಗೊಂಡಿದ್ದು, ಮುಂದಿನ ಹಂತದಲ್ಲಿ 14 ನಿವೇಶನಗಳಿರುವ ಸ್ಥಳಕ್ಕೆ ತೆರಳಿ ಪರಿಶೀಲಿಸಲಿದ್ದಾರೆ. ಬಳಿಕ ಮೈಸೂರು ನಗರಾಭಿ ವೃದ್ಧಿ ಪ್ರಾಧಿಕಾರಕ್ಕೆ ತೆರಳಿ ಅಗತ್ಯ ದಾಖಲೆಗಳನ್ನು ಸಂಗ್ರಹಿಸುವ ಸಾಧ್ಯತೆಗಳಿವೆ.
ಮಹಜರು ತೃಪ್ತಿ ನೀಡಿದೆ: ಸ್ನೇಹಮಯಿ ಕೃಷ್ಣ
ಸ್ಥಳ ಮಹ ಜರು ಬಳಿಕ ಸ್ನೇಹಮಯಿ ಕೃಷ್ಣ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರ ಪತ್ನಿ ಖರೀದಿಸಿರುವ ಜಮೀನಿನಲ್ಲಿ ನಿವೇಶನ ರಚನೆ ಕುರುಹು ಸ್ಪಷ್ಟವಾಗಿದೆ. ಮುಡಾ ಆಸ್ತಿಯನ್ನು ಕೃಷಿ ಭೂಮಿ ಮಾಡಿಕೊಂಡಿರುವುದು ನನ್ನ ಆರೋಪ. ಆ ಆರೋಪ ನಿಜ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಪ್ರಕರಣದ ಹೇಳಿದರು. ಇವತ್ತಿನ ಸ್ಥಳ ಮಹಜರು ಪ್ರಕ್ರಿಯೆ ತೃಪ್ತಿ ನೀಡಿದೆ. ಸಿಎಂ ಪತ್ನಿಗೆ ಸೇರಿದೆ ಎನ್ನುತ್ತಿರುವ ಆಸ್ತಿ ಮುಡಾಕ್ಕೆ ಸೇರಿದ್ದು.
ಆ ಆಸ್ತಿಯನ್ನು ದೇವರಾಜು ಸುಳ್ಳು ದಾಖಲೆ ಸೃಷ್ಟಿಸಿ, ಸಿದ್ದರಾಮಯ್ಯ ಭಾಮೈದ ಮಲ್ಲಿಕಾರ್ಜುನ ಸ್ವಾಮಿಗೆ ಮಾರಾಟ ಮಾಡಿದ್ದಾರೆ. ಅದನ್ನು ಸಿಎಂ ಪತ್ನಿಗೆ ಬರೆದಿರುವ ದಾಖಲಾತಿ ನನ್ನ ಬಳಿ ಇದೆ. 3 ಎಕರೆ 16 ಗುಂಟೆ ಜಾಗ ಮುಡಾಕ್ಕೆ ಸೇರಿಸಲಾಗಿದೆ. ಆದರೂ ಆ ಭೂಮಿ ಯನ್ನು ಮತ್ತೆ ಮುಡಾಕ್ಕೆ ಕೊಟ್ಟಿದ್ದೇವೆಂದು ಮುಡಾದಿಂದ ಬದಲಿ ನಿವೇಶನ ಪಡೆಯಲಾಗಿದೆ ಎಂದರು.
ನಾಳೆ ಮತ್ತೆ ಬರುವಂತೆ ನೋಟಿಸ್
ಅ. 3ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಶಾಂತಿನಗರದಲ್ಲಿ ರುವ ಜಾರಿ ನಿರ್ದೇಶನಾಲಯ ಕಚೇರಿಗೆ ಮತ್ತೆ ಬರುವಂತೆ ಸ್ನೇಹಮಯಿ ಅವರಿಗೆ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದಾರೆ.
ಮುಂದೇನು?
* ಮುಂದಿನ ಹಂತದಲ್ಲಿ 14 ನಿವೇಶನಗಳಿರುವ ಸ್ಥಳ ಪರಿಶೀಲನೆ ನಡೆಸಲಿರುವ ಲೋಕಾಯುಕ್ತ
* ಬಳಿಕ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ತೆರಳಿ ಅಗತ್ಯ ದಾಖಲೆಗಳ ಸಂಗ್ರಹ ಸಾಧ್ಯತೆ
ಚೆಕ್‌ಬೌನ್ಸ್: ಸ್ನೇಹಮಯಿ ಕೃಷ್ಣಗೆ ವಾರಂಟ್!
ಮೈಸೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದ ಮುಡಾ ಪ್ರಕರಣದ ದೂರುದಾರ, ಸಾಮಾಜಿಕ ಕಾರ್ಯ ಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಜಾರಿಗೊಳಿಸಿದೆ. ಎನ್. ಕುಮಾರ್ ಎಂಬವರು 2015ರ ಜೂನ್ 30ರಂದು ಸ್ನೇಹಮಯಿ ಕೃಷ್ಣ ವಿರುದ್ಧ ಚೆಕ್‌ಬೌನ್ಸ್ ಪ್ರಕರಣ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.