MUDA Case: ಅಭಿಯೋಜನೆಗೆ ಅನುಮತಿ ಎಲ್ಲರಿಗೂ ಅನ್ವಯ ಆಗಲಿ: ಗೃಹ ಸಚಿವ ಡಾ.ಜಿ. ಪರಮೇಶ್ವರ್
Team Udayavani, Sep 26, 2024, 12:42 AM IST
ಬೆಂಗಳೂರು: ಹೈಕೋರ್ಟ್ ತೀರ್ಪಿನಿಂದ ರಾಜ್ಯಪಾಲರಿಗೆ ಬಲ ಬಂದಿರಬಹುದು. ಆದರೆ ಅವರು ಮುಖ್ಯಮಂತ್ರಿ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿದ ಕ್ರಮ ಎಲ್ಲರಿಗೂ ಅನ್ವಯ ಆಗಬೇಕಲ್ಲವೇ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ಪ್ರಶ್ನಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಬಲ ಬಂದಿದೆ ಅಂತ ಹೇಳಿ ಒಬ್ಬರಿಗೆ, ಒಂದು ವರ್ಗಕ್ಕೆ ಸೀಮಿತ ಮಾಡುವುದು ಸರಿ ಕಾಣಿಸುವುದಿಲ್ಲ. ಅದು ನ್ಯಾಯವೂ ಅಲ್ಲ. ರಾಜ್ಯಪಾಲರು, ಮುಖ್ಯಮಂತ್ರಿ ವಿರುದ್ಧ ಕೈಗೊಂಡ ಕ್ರಮವನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ , ಜನಾರ್ದನ ರೆಡ್ಡಿ ಅವರಿಗೂ ಅನ್ವಯಿಸಬೇಕಲ್ಲವೇ ಎಂದು ಕೇಳಿದರು.
ರಾಜ್ಯಪಾಲರು ಕಡತಗಳನ್ನು ಲೋಕಾಯುಕ್ತಕ್ಕೆ ವಾಪಸ್ ಕಳುಹಿಸಿರಬಹುದು. ಲೋಕಾಯುಕ್ತರು ಸ್ಪಷ್ಟನೆ ನೀಡಿ, ಆ ಕಡತಗಳನ್ನು ಮತ್ತೆ ರಾಜ್ಯಪಾಲರಿಗೆ ಕಳುಹಿಸಿದ್ದಾರೆ. ರಾಜ್ಯಪಾಲರು ತಮ್ಮ ಬಲವನ್ನು ಈ ಪ್ರಕರಣಗಳಿಗೂ ಉಪಯೋಗಿಸಬೇಕು. ಲೋಕಾಯುಕ್ತ ಒಂದು ಸ್ವತಂತ್ರ ಸಂಸ್ಥೆ. ಯಾವುದೇ ಅನುಕಂಪ ಇಲ್ಲದೆ, ನಿಷ್ಪಕ್ಷ ತನಿಖೆ ಮಾಡಲಿದೆ ಎಂದರು. ಈ ಬೆಳವಣಿಗೆಯಿಂದ ಸಿದ್ದರಾಮಯ್ಯ ದುರ್ಬಲವಾಗಿಲ್ಲವೇ ಎಂಬ ಪ್ರಶ್ನೆಗೆ, ನಮಗೆ ಆ ರೀತಿ ಅನ್ನಿಸುವುದಿಲ್ಲ. ಅವರು ಗುಂಡುಕಲ್ಲಿನಂತಿದ್ದಾರೆ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.