MUDA Case: ಕತ್ತಲಾದ ಮೇಲೆ ಜಗ್ಗಿದ್ಯಾಕೆ? ಬಗ್ಗಿದ್ಯಾಕೆ?: ಸಿಎಂಗೆ ನಾರಾಯಣಸ್ವಾಮಿ ಲೇವಡಿ
ನಿವೇಶನಗಳ ಮರಳಿಸಿರುವುದರಿಂದ ಅಪರಾಧ ಮನ್ನಾ ಆಗುವುದಿಲ್ಲ: ವಿಧಾನಪರಿಷತ್ ವಿಪಕ್ಷ ನಾಯಕ
Team Udayavani, Oct 2, 2024, 6:47 AM IST
ಬೆಂಗಳೂರು: “ನಾನು ಜಗ್ಗುವುದಿಲ್ಲ, ಬಗ್ಗುವುದಿಲ್ಲ, ಏನೇ ಬಂದರೂ ಎದುರಿಸುತ್ತೇನೆ’ ಎನ್ನುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಕತ್ತಲಾದ ಮೇಲೆ ಜಗ್ಗಿದ್ಯಾಕೆ? ಬಗ್ಗಿದ್ಯಾಕೆ?’ ರಾತೋರಾತ್ರಿ ಇಂಥ ಪರಿವರ್ತನೆಗೆ ಕಾರಣವೇನು ? ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 14 ನಿವೇಶನಗಳನ್ನು ಮುಡಾಕ್ಕೆ ಹಿಂತಿರುಗಿಸುವುದಾಗಿ ಅವರ ಪತ್ನಿ ಪತ್ರ ಕೊಟ್ಟಿದ್ದಾರೆ. ಆದರೆ ಅದರಲ್ಲಿ ದಿನಾಂಕವೇ ಇಲ್ಲ. ಆದ್ದರಿಂದ ಅದು ಖಾತ್ರಿಯೇನಲ್ಲ. ಇದರಿಂದ ನಿಮ್ಮ ಕಪಟತನ ಬಯಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯಾರೂ ಕೂಡ ಈ ರೀತಿ ಉದ್ಧಟತನ ತೋರಬಾರದು ಎಂದರು.
ವಾಲ್ಮೀಕಿ ನಿಗಮದ್ದು 187 ಕೋಟಿ ರೂ.ಗಳ ಹಗರಣವಲ್ಲ, 87 ಕೋಟಿ ರೂ. ಹಗರಣ ಎಂದು ಸದನದಲ್ಲೇ ಒಪ್ಪಿಕೊಂಡರು. ಮುಡಾದ ತಮ್ಮ ನಿವೇಶನಗಳಿಗೆ 62 ಕೋ.ರೂ. ಬರಬೇಕು; ಕೊಡುತ್ತೀರಾ ಎಂದು ಪತ್ರಕರ್ತರನ್ನು ಪ್ರಶ್ನಿಸಿದ್ದರು. ಈಗ ನಿವೇಶನ ಮರಳಿಸಿದ್ದಾರೆ. ಇದರಿಂದ ಅಪರಾಧ ಮನ್ನಾ ಆಗುವುದಿಲ್ಲ ಎಂದರು.
ಸಮರ್ಥಿಸಿದ ಎಲ್ಲರೂ ರಾಜೀನಾಮೆ ಕೊಡಲಿ: ಲೆಹರ್ ಸಿಂಗ್ ಆಗ್ರಹ
ಮುಡಾ ಪ್ರಕರಣದಲ್ಲಿ ಇಡೀ ಸಚಿವ ಸಂಪುಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಂಡಿದೆ. ಕಾಂಗ್ರೆಸ್ ಹೈಕಮಾಂಡ್ ಹಾಗೂ ಸಮಸ್ತ ಆಡಳಿತ ಯಂತ್ರವೇ ಸಮರ್ಥಿಸಿಕೊಂಡಿದ್ದು ಪ್ರತಿಯೊಬ್ಬರೂ ರಾಜೀನಾಮೆ ನೀಡಬೇಕು. ಇಲ್ಲವಾದರೆ ರಾಜ್ಯದ ಜನರ ಕ್ಷಮೆಯಾಚಿಸಬೇಕೆಂದು ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.