MUDA Scam: ಬಿಜೆಪಿ-ಜೆಡಿಎಸ್ ನಂಟು?: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್
Team Udayavani, Jul 15, 2024, 7:20 AM IST
ಬೆಂಗಳೂರು: ಮುಡಾ ಹಗರಣ ಈಗ ಮತ್ತೂಂದು ತಿರುವು ಪಡೆದುಕೊಂಡಿದ್ದು ಹಗರಣದ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ವಿಪಕ್ಷಗಳ ನಾಯಕರ ಸಂಬಂಧಿಕರು ಮತ್ತು ಹತ್ತಿರವಾಗಿದ್ದವರು ಜಾಗವೇ ಇಲ್ಲದೆ ಬದಲಿ ಜಮೀನು ಪಡೆದಿದ್ದಾರೆ ಎಂದು ಆಡಳಿತಾರೂಢ ಕಾಂಗ್ರೆಸ್ ಆರೋಪಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಮ್ಮಗೆ ಜಮೀನು ನೀಡಿರುವುದು ಅಕ್ರಮವಲ್ಲ. ಅದು ಅವರ ಹಕ್ಕಿನಂತೆ ನೀಡಿರುವುದು. ಇದಕ್ಕೂ ಮುಡಾ ಹಗರಣಕ್ಕೂ ತಳಕು ಹಾಕುವುದು ಬೇಡ. ನಿಜವಾಗಿಯೂ ಹಗರಣ ಯಾವುದು ಅಂದರೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಸಂಬಂಧಿಯೊಬ್ಬರಿಗೆ ಜಮೀನಿನ ದಾಖಲೆ ಇಲ್ಲದೆ 50:50ರ ಅನುಪಾತದಲ್ಲಿ ಮುಡಾದಲ್ಲಿ ಬದಲಿ ಜಮೀನು ಮಂಜೂರು ಮಾಡಲಾಗಿದೆ. ಅದೇ ರೀತಿ, ಜೆಡಿಎಸ್ ಪ್ರಮುಖ ನಾಯಕನಿಗೆ ಅತ್ಯಂತ ಹತ್ತಿರವಾದ ವ್ಯಕ್ತಿಗೂ ಇದೇ ರೀತಿ ಲಭ್ಯವಿಲ್ಲದ ಜಮೀನಿಗೆ ಪ್ರತಿಯಾಗಿ 50:50ರ ಅನುಪಾತದಲ್ಲಿ ಜಮೀನನ್ನು ಪಡೆದಿದ್ದಾರೆ. ಇದಕ್ಕೆ ಎರಡೂ ಪಕ್ಷಗಳ ನಾಯಕರು ಉತ್ತರ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.
ನಕಲಿ ವ್ಯಕ್ತಿ ಸೃಷ್ಟಿಸಿ ವಂಚನೆ
ಮೈಸೂರಿನ ಎಸ್.ಸಿ. ರಾಜೇಶ್ ಬಿನ್ ಚಂದ್ರಪ್ಪ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ತಂಗಿ ಮಗ. ಬಿ.ವೈ. ವಿಜಯೇಂದ್ರ ಅವರಿಗೆ ಮಾವ ಆಗಬೇಕು. ಇವರು ಒಬ್ಬ ನಕಲಿ ವ್ಯಕ್ತಿಯನ್ನು ಸೃಷ್ಟಿಸಿ ಆ ವ್ಯಕ್ತಿಯಿಂದ 50:50ರ ಅನುಪಾತದಲ್ಲಿ ಮೈಸೂರು ತಾಲೂಕು ಕಸಬಾ ಹೋಬಳಿ ಇನಕಲ್ ಗ್ರಾಮ ಸರ್ವೇ ಸಂಖ್ಯೆ 255/3ರಲ್ಲಿ 33 ಗುಂಟೆ ಜಮೀನನ್ನು ಪ್ರಾಧಿಕಾರ ಭೂಸ್ವಾಧೀನಪಡಿಸಿಕೊಳ್ಳದೆ ಉಪಯೋಗಿಸಿಕೊಂಡಿದ್ದಾರೆ.
ವಿಚಿತ್ರವೆಂದರೆ ಆ ಜಮೀನಿನ ಭೂಸ್ವಾಧೀನಕ್ಕೆ ಸಂಬಂಧಿಸಿದ ಮೂಲ ಕಡತವೇ ಲಭ್ಯವಿಲ್ಲ. ಅಂದರೆ ಜಾಗವೇ ಇಲ್ಲದೆ 50:50 ಅನುಪಾತದಲ್ಲಿ ಅಂದಿನ ಮುಡಾ ಆಯುಕ್ತರು ನಕಲಿ ವ್ಯಕ್ತಿಗೆ 33 ಗುಂಟೆ ಜಾಗಕ್ಕೆ ಬದಲಿಯಾಗಿ 9 ಸಾವಿರ ಚದರಡಿ ನಿವೇಶನ ನೀಡಿದ್ದಾರೆ. ಆ ನಕಲಿ ವ್ಯಕ್ತಿಯಿಂದ ರಾಜೇಶ್ ಬಿನ್ ಚಂದ್ರಪ್ಪ ಅವರು ನಿವೇಶನ ಖರೀದಿಸಿದ್ದಾರೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.