MUDA Scam: ಸದನದಲ್ಲಿ ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ
ಸಿಎಂ ಸಿದ್ದರಾಮಯ್ಯ ಮಾನ ಮರ್ಯಾದೆ ಹೋಗುತ್ತೆ ಎಂದು ಸ್ಪೀಕರ್ ಚರ್ಚೆಗೆ ಅವಕಾಶ ಕೊಡುತ್ತಿಲ್ಲ: ವಿಪಕ್ಷ ನಾಯಕ ಅಶೋಕ್
Team Udayavani, Jul 24, 2024, 7:42 PM IST
ಬೆಂಗಳೂರು: ಮುಂಗಾರು ಅಧಿವೇಶನದಲ್ಲಿ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಸ್ತಾಪಿಸಿ ಆಡಳಿತರೂಢ ಕಾಂಗ್ರೆಸ್ ವಿರುದ್ಧ ಮುಗಿಬಿದ್ದ ಬಳಿಕ ಬುಧವಾರ (ಜು. 24) ಬಿಜೆಪಿ, ಸದನದಲ್ಲಿ ಮುಡಾ ಹಗರಣ ಕುರಿತು ಚರ್ಚೆಗೆ ಅವಕಾಶ ಕೊಟ್ಟಿಲ್ಲ ಎಂದು ಬಿಜೆಪಿ ಸದಸ್ಯರು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸಲು ತೀರ್ಮಾನಿಸಿದ್ದಾರೆ.
ಮುಡಾ ಹಗರಣ ಕುರಿತು ಬಿಜೆಪಿ ಸದಸ್ಯರು ಪ್ರಸ್ತಾಪಿಸಿ ಪ್ರಶ್ನೋತ್ತರ ಕಲಾಪ ಬದಿಗೊತ್ತಿ ಚರ್ಚೆಗೆ ಅವಕಾಶ ನೀಡುವಂತೆ ವಿಧಾನ ಸಭೆಯಲ್ಲಿ ಆಗ್ರಹಿಸಿದರು ಆದ್ರೆ, ಇದಕ್ಕೆ ಒಪ್ಪದ ಸ್ಪೀಕರ್, ಚರ್ಚೆಗೆ ತೆಗೆದುಕೊಳ್ಳುವಂಥದ್ದು ಏನಿದೆ ಎಂದು ಪ್ರಶ್ನಿಸಿದರು. ಚರ್ಚೆಗೆ ಅವಕಾಶ ನೀಡಲು ಒಪ್ಪದ ಸ್ಪೀಕರ್ ನಡೆಯಿಂದ ಬಿಜೆಪಿ, ಜೆಡಿಎಸ್ ಸದಸ್ಯರು ಆಕ್ರೋಶಗೊಂಡರು.
ಆದರೂ ಬಿಜೆಪಿ ಆಗ್ರಹಕ್ಕೆ ಮಣಿಯದ ಸ್ಪೀಕರ್, ನ್ಯಾಯಾಂಗ ತನಿಖೆ ನಡೆಯುತ್ತಿದೆ. ಅಲ್ಲಿ ಹೋಗಿ ದಾಖಲೆ ಕೊಡಿ ಎಂದು ಹೇಳಿದರು. ಇದರಿಂದ ರೊಚ್ಚಿಗೆದ್ದ ಬಿಜೆಪಿ ಸದಸ್ಯರು, ಅಲ್ಲಿಗೆ ಹೋಗಿ ದಾಖಲೆ ಕೊಡುವುದಾದರೆ ಸದನ ಏಕೆ ಬೇಕು ಎಂದು ಆಕ್ರೋಶ ಹೊರ ಹಾಕಿದರು. ಬಳಿಕ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಪೋಸ್ಟರ್ ಗಳೊಂದಿಗೆ ಸದನದ ಬಾವಿಗೆ ಇಳಿದು ಧರಣಿ ಆರಂಭಿಸಿದ್ದಾರೆ. ಇದರಿಂದ ಸಿಟ್ಟಿಗೆದ್ದ ಸ್ಪೀಕರ್, ಪೋಸ್ಟರ್ ತಂದರೆ ನಿಯಮಾನುಸಾರ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಅಲ್ಲದೇ ಖಾದರ್ ಕೆಪಿಸಿಸಿ ಅಧ್ಯಕ್ಷರಾಗಲು ಲಾಯಕ್ ಎಂದ ವಿಪಕ್ಷ ನಾಯಕ ಅಶೋಕ್ ಗುಡುಗಿದ್ದು, ಸ್ಪೀಕರ್ ಗೆ ಕನ್ನಡ ಅರ್ಥ ಆಗಲ್ಲ, ತುಳುವಿನಲ್ಲಿ ಘೋಷಣೆ ಕೂಗಿ ಎಂದರು.
#WATCH | Karnataka Assembly adjourned till tomorrow, 25th July. BJP MLAs to continue their dharna in the Assembly tonight and stay the night inside the House.
They are demanding discussion over MUDA issue.
(Video Source: Karnataka BJP) pic.twitter.com/63owvWFBSf
— ANI (@ANI) July 24, 2024
ಎರಡು ಸದನದಲ್ಲಿ ಬಿಜೆಪಿ ಅಹೋರಾತ್ರಿ ಧರಣಿ
ಇನ್ನು ಚರ್ಚೆಗೆ ಸ್ಪೀಕರ್ ಅವಕಾಶ ನೀಡದಿದ್ದರಿಂದ ರೊಚ್ಚಿಗೆದ್ದಿರುವ ಬಿಜೆಪಿ, ಜೆಡಿಎಸ್ ಸದಸ್ಯರು, ವಿಧಾನಸಭೆ ಮತ್ತು ವಿಧಾನಪರಿಷತ್ನಲ್ಲಿ ಅಹೋರಾತ್ರಿ ಧರಣಿ ನಡೆಸಲು ತೀರ್ಮಾನಿಸಿದ್ದು, ಈ ಬಗ್ಗೆ ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಬಿಜೆಪಿ ಜೆಡಿಎಸ್ ಸದಸ್ಯರು ಜಂಟಿ ಅಹೋರಾತ್ರಿ ಹೋರಾಟ ನಡೆಸಲಿದ್ದಾರೆ.
ಮುಡಾ ಹಗರಣ ಹಾಗೂ ರಾಜ್ಯದ ಎಸ್ಸಿ/ಎಸ್ಟಿ ಸಮುದಾಯಕ್ಕಾದ ಅನ್ಯಾಯದ ವಿರುದ್ಧ ಚರ್ಚೆಗೆ ಅವಕಾಶ ನೀಡದ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ ಉಭಯ ಸದನಗಳಲ್ಲಿ ಇಂದು ಅಹೋರಾತ್ರಿ ಧರಣಿ ನಡೆಸಲಿದ್ದೇವೆ.
– ಶ್ರೀ @BYVijayendra ರಾಜ್ಯಾಧ್ಯಕ್ಷರು. pic.twitter.com/rQ3GIJl4nN
— BJP Karnataka (@BJP4Karnataka) July 24, 2024
ಸಿಎಂ ಸದನದಲ್ಲಿ ಹೇಳಲಿ:
ಇನ್ನು ಈ ಬಗ್ಗೆ ಮಾತನಾಡಿರುವ ಅಶೋಕ್, ಮುಡಾ ಹಗರಣದಲ್ಲಿ ಸರ್ಕಾರ ಹೆದರಿ ಓಡಿ ಹೋಗಿದೆ. ಹೇಡಿಗಳಂತೆ ಸರ್ಕಾರದ ನಡೆದುಕೊಳ್ಳುತ್ತಿದೆ. 14 ಮುಡಾ ಸೈಟ್ ನ್ಯಾಯವಾಗಿ ತೆಗೆದುಕೊಂಡಿದ್ದೆ ಎಂದು ಸಿಎಂ ಸದನದಲ್ಲಿ ಹೇಳಬೇಕು. ಕೇವಲ ಹೊರಗಡೆ ಹೇಳುವುದಲ್ಲ. ದಲಿತರ ಜಾಗ ಲೂಟಿ ಹೊಡೆಯುವ ಕೆಲಸ ಆಗಿದೆ. ಸಿದ್ದರಾಮಯ್ಯ ಡಿಸಿಎಂ, ಸಿಎಂ ಆಗಿದ್ದಾಗ ಮುಡಾ ಹಗರಣ ಆಗಿದೆ. ದಲಿತರ ಜಮೀನು ಲೂಟಿ ಹೊಡೆದು ದಲಿತ ಸಮುದಾಯಕ್ಕೆ ಸಿದ್ದರಾಮಯ್ಯ ಅನ್ಯಾಯ ಮಾಡಿದ್ದಾರೆ. ಮುಡಾ ಹಗರಣದ ಬಗ್ಗೆ ಮಾತನಾಡಿದ್ರೆ ಸಿಎಂ ಮಾನ ಮರ್ಯಾದೆ ಹೋಗುತ್ತೆ ಎಂದು ಸ್ಪೀಕರ್ ಚರ್ಚೆಗೆ ಅವಕಾಶ ಕೊಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.