MUDA Scam: ಕೋರ್ಟ್ ಛೀಮಾರಿಗೆ ಮುನ್ನ ಸಿಎಂ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ
ಮುಖ್ಯಮಂತ್ರಿ ಮೇಲೆ ಸಚಿವರಿಗೆ ವಿಶ್ವಾಸ ಇಲ್ಲ, ಸಿದ್ದರಾಮಯ್ಯ ಆಡಳಿತದ ಕ್ಷಣಗಣನೆ ಆರಂಭ
Team Udayavani, Aug 28, 2024, 6:40 AM IST
ಬೆಂಗಳೂರು: ಸಿದ್ದರಾಮಯ್ಯ ಸರಕಾರದ ವಿರುದ್ಧ ದಿಲ್ಲಿ ಮಟ್ಟದಲ್ಲಿ ಅಭಿಪ್ರಾಯ ರೂಪಿಸುವ ಕಾರ್ಯಕ್ಕೆ ಬಿಜೆಪಿ ಮುಂದಾಗಿದೆ. ಮುಡಾ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಿಜೆಪಿ ವರಿಷ್ಠರಿಗೆ ಒಪ್ಪಿಸಿದ್ದು, “ನ್ಯಾಯಾಲಯದಿಂದ ಛೀಮಾರಿ ಹಾಕಿಸಿಕೊಳ್ಳುವುದಕ್ಕೆ ಮುನ್ನ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಸೂಕ್ತ’ ಎಂದು ಆಗ್ರಹಿಸಿದ್ದಾರೆ.
ದಿಲ್ಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರ, ಕಳೆದ 2 ತಿಂಗಳಿಂದ ಕರ್ನಾಟಕದಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಸಿದ್ದರಾಮಯ್ಯ ಯಾವುದೇ ಕ್ಷಣದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬಹುದು. ಅವರ ಮೇಲೆ ಸಚಿವರಿಗೆ ವಿಶ್ವಾಸ ಇಲ್ಲ. ಯಾವಾಗ ಮುಖ್ಯಮಂತ್ರಿ ರಾಜೀನಾಮೆ ಕೊಡುತ್ತಾರೋ, ಯಾವಾಗ ಸಿದ್ದರಾಮಯ್ಯರ ಪರವಾಗಿ ಬ್ಯಾಟಿಂಗ್ ಮಾಡಲು ದೆಹಲಿಗೆ ಹೋಗಬೇಕೋ ಎಂಬ ಆತಂಕ ಅವರಲ್ಲಿದೆ ಎಂದು ವ್ಯಂಗ್ಯವಾಡಿದರು.
ಸಿದ್ದು ಆಡಳಿತದ ಕ್ಷಣಗಣನೆ
ಸಿದ್ದರಾಮಯ್ಯನವರ ಜತೆಗೆ ದಿಲ್ಲಿಗೆ ಹೋಗಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ವೈಷ್ಣೋದೇವಿಗೆ ಹೋಗಿ ಬಂದಿದ್ದಾರೆ. ಮುಖ್ಯಮಂತ್ರಿ ಮಾಡು ಎಂದು ತಾಯಿಯಲ್ಲಿ ಆಶೀರ್ವಾದ ಬೇಡಿದಂತಿದೆ. ಈ ಎಲ್ಲ ದೃಷ್ಟಿಯಿಂದ ಸಿದ್ದರಾಮಯ್ಯ ಆಡಳಿತದ ಕ್ಷಣಗಣನೆ ಆರಂಭವಾಗಿದೆ ಎಂದು ವಿಜಯೇಂದ್ರ ಹೇಳಿದರು.
ಇಂದಲ್ಲ ನಾಳೆ ಸಿದ್ದರಾಮಯ್ಯನವರ ಆ 14 ನಿವೇಶನಗಳು ಮುಡಾ ಪಾಲಾಗಿ ಬಡವರಿಗೆ ಸಿಗಲಿವೆ. ಈ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅಭಿವೃದ್ಧಿ ಕೆಲಸಗಳು ಆರಂಭವೇ ಆಗಿಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಕುಗ್ಗಿ ಹೋಗಿದ್ದು, ಕರ್ನಾಟಕದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಟೀಕಿಸಿದರು.
ಯತ್ನಾಳ್‌ಗೆ ತಿರುಗೇಟು
ಪಕ್ಷದ ವರಿಷ್ಠರು ನನ್ನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಅಥವಾ ಇನ್ಯಾರದೋ ವಿರುದ್ಧ ದಿಲ್ಲಿಯಲ್ಲಿ ದೂರು ಕೊಡಲು ನನ್ನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿಲ್ಲ. ಸಂಘಟನೆ ಬಲಪಡಿಸಲು, ಬಿಜೆಪಿ ಸ್ಪಷ್ಟ ಬಹುಮತ ಪಡೆಯಲು ರಾಜ್ಯಾಧ್ಯಕ್ಷನನ್ನಾಗಿಸಿದ್ದಾರೆ. ಯತ್ನಾಳ್ ಕುರಿತು ಇಲ್ಲಿ ನಾನು ಪ್ರಸ್ತಾಪಿಸುವುದಿಲ್ಲ. ಅದರ ಅವಶ್ಯಕತೆಯೂ ನನಗಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
MUST WATCH
ಹೊಸ ಸೇರ್ಪಡೆ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.