MUDA Scam: ಮುಖ್ಯಮಂತ್ರಿ, ಕುಟುಂಬದವರ ವಿರುದ್ಧ ದೂರು
ರಾಜ್ಯಪಾಲರು, ಸಿಎಸ್‌ಗೂ ಪತ್ರ ಜಿಲ್ಲಾಧಿಕಾರಿ, ತಹಶೀಲ್ದಾರ್, ಎಸಿ, ಮುಡಾ ಅಧಿಕಾರಿಗಳೂ ಶಾಮೀಲು ಆರೋಪ
Team Udayavani, Jul 10, 2024, 7:15 AM IST
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಗರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಭೂಮಾಲಕ ಎಂದು ಹೇಳಲಾಗಿರುವ ದೇವರಾಜು ಹಾಗೂ ಕುಟುಂಬದವರ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಕಲಿ ದಾಖಲೆ ಸೃಷ್ಟಿಸಿ ಮೈಸೂರು ನಗರಾಭಿವೃದ್ಧಿಗೆ ವಂಚಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ನಿವೇಶನ ಪಡೆದ ಆರೋಪದಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ದೂರು ದಾಖಲಿಸಿದ್ದಾರೆ. ಜಿಲ್ಲಾಧಿಕಾರಿ, ತಹಶೀಲ್ದಾರ್, ಉಪ ನೋಂದಣಾಧಿಕಾರಿ ಹಾಗೂ ಮುಡಾ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆಯೂ ದೂರು ದಾಖಲಾಗಿದೆ. ಈ ಸಂಬಂಧ ರಾಜ್ಯಪಾಲರು, ರಾಜ್ಯ ಮುಖ್ಯಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೂ ಪತ್ರ ಬರೆದು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.
ದೂರಿನಲ್ಲಿರುವ ಪ್ರಶ್ನೆಗಳು
* ಪಾರ್ವತಿ ಪ್ರಕರಣದಲ್ಲಿ ಭೂ ಸ್ವಾಧೀನದಿಂದ ಕೈಬಿಟ್ಟಿರುವ ರಾಜ್ಯಪತ್ರದ ಬಗ್ಗೆಯೇ ಅನುಮಾನ ಇದ್ದು, ಮೂಲ ಭೂ ಮಾಲಕರ ಮಗ ಎನ್ನುವ ದೇವರಾಜು ಅಸ್ತಿತ್ವ ನಿಜವೇ?
* 1998ರಲ್ಲಿ ಭೂ ಸ್ವಾಧಿನದಿಂದ ಕೈ ಬಿಟ್ಟಿದ್ದು ನಿಜವಾದರೆ 2010ರ ವರೆಗಿನ ಆರ್‌ಟಿಸಿಗಳಲ್ಲಿ ಭೂ ಸ್ವಾಧೀನ ಎಂಬ ಉÇÉೇಖ ಏಕಿದೆ?
* ದೇವರಾಜು, ಅನಂತರ ಮಲ್ಲಿಕಾರ್ಜುನ ಸ್ವಾಮಿ ಮಾಲಕತ್ವದಲ್ಲಿ ಈ ಜಮೀನಿದ್ದಿದ್ದರೆ ಮುಡಾ ಕೈಗೊಂಡ ಅಭಿವೃದ್ಧಿ ಕೆಲಸವನ್ನೇಕೆ ತಡೆದಿಲ್ಲ?
* ಪಾರ್ವತಿ ಹೆಸರಿಗೆ ಖಾತೆ ವರ್ಗಾವಣೆ ಮಾಡುವಾಗ ಸ್ಥಳ ಪರಿಶೀಲನೆ ಮಾಡಲಿಲ್ಲವೇ? ಮುಡಾ ಬಡಾವಣೆ ಅಭಿವೃದ್ಧಿ ಮಾಡಿದ್ದರೂ ಕೃಷಿ ಭೂಮಿ ಎಂದು ಹೇಗೆ ಖಾತೆ ಮಾಡಲಾಯಿತು?
* ನಿಜವಾದ ಭೂ ಮಾಲಕರ ವಂಶವೃಕ್ಷದ ಉಲ್ಲೇಖ ಏಕಿಲ್ಲ?
* 2004-05ನೇ ಸಾಲಿನ ಆರ್‌ಟಿಸಿಯ ಕಲಂ 10ರಲ್ಲಿ ಎಂಆರ್ 8/92-93 ಎಂಬ ಉಲ್ಲೇಖವಿದೆ. ಇದರ ಎಂಆರ್ ಗಮನಿಸಿದಾಗ ಮಾರಪ್ಪ ಎಂಬವರಿಗೆ ಸೇರಿದ ದಾಖಲೆ ಎಂದು ಗೊತ್ತಾಗುತ್ತದೆ. ಮಲ್ಲಿಕಾರ್ಜುನ ಸ್ವಾಮಿಗೆ ಭೂಮಿ ಮಾರಿರುವ ದೇವರಾಜು ಕುಟುಂಬದ ವಿಳಾಸವೇ ಅಸ್ತಿತ್ವದಲ್ಲಿ ಇಲ್ಲದಿರುವುದು ದೊಡ್ಡ ಅನುಮಾನ ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.