MUDA Scam: ನನ್ನ ಏಳಿಗೆ ಸಹಿಸದೆ ಪಟ್ಟಭದ್ರರು ಕುತಂತ್ರದಿಂದ ಹೆಣೆದ ಷಡ್ಯಂತ್ರ: ಸಿಎಂ
Team Udayavani, Aug 26, 2024, 1:26 AM IST
ಬೆಂಗಳೂರು: ಮುಡಾ ವಿಚಾರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಮೇಲ್ನೋಟಕ್ಕೆ ರಾಜಕೀಯ ಸಂಘರ್ಷ ಎನಿಸಿದರೂ, ಆಂತರ್ಯದಲ್ಲಿ ಹಿಂದುಳಿದ ಜಾತಿಗೆ ಸೇರಿದ ನಾಯಕನೊಬ್ಬನ ಏಳಿಗೆ ಸಹಿಸದ ಪಟ್ಟಭದ್ರರು ಕುತಂತ್ರದಿಂದ ಹೆಣೆದ ಷಡ್ಯಂತ್ರ ಎಂಬುದು ಸೂರ್ಯಚಂದ್ರರಷ್ಟೇ ಸತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹಿಂದುಳಿದ, ದಲಿತ, ಶೋಷಿತ ಸಮುದಾಯಗಳ ಮಠಾಧೀಶರಿಗೆ ತಮ್ಮನ್ನು ಭೇಟಿಯಾಗಿ ಬೇಷರತ್ ಬೆಂಬಲ ಘೋಷಿಸಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣ “ಎಕ್ಸ್’ ಮೂಲಕ ಎಲ್ಲ ಮಠಾಧೀಶರಿಗೆ ಧನ್ಯವಾದ ಅರ್ಪಿಸಿದ ಅವರು, ನನ್ನ ವಿರುದ್ಧ ನಡೆಯುತ್ತಿರುವುದು ಷಡ್ಯಂತ್ರ ಎಂಬುದನ್ನು ಅರಿತು ನನ್ನ ಬೆಂಬಲಕ್ಕೆ ನಿಲ್ಲುವುದರೊಂದಿಗೆ ಇಡೀ ಸಮಾಜಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಸತ್ಯ ನನ್ನ ಜತೆಗಿದೆ. ನಾನು ಸತ್ಯದ ಜತೆಗಿದ್ದೇನೆ. “ಸತ್ಯ ಮೇವ ಜಯತೆ’ ಎಂದು ತಿಳಿಸಿದ್ದಾರೆ.
ಮುಡಾ ವಿಚಾರದಲ್ಲಿ ನನ್ನ ವಿರುದ್ಧ ಷಡ್ಯಂತ್ರ ರೂಪಿಸಿ, ನನ್ನನ್ನು ಮುಗಿಸಲು ಹೊರಟಿರುವ ಎದುರಾಳಿಗಳ ಕುಟಿಲ ಕಾರಸ್ಥಾನವನ್ನು ಅರ್ಥಮಾಡಿಕೊಂಡು ನೈತಿಕವಾಗಿ ಮಠಾಧೀಶರೆಲ್ಲರೂ ಬೆಂಬಲ ಘೋಷಿಸಿದ್ದಾರೆ. ಬುದ್ಧ, ಬಸವ, ಬಾಬಾ ಸಾಹೇಬ್ ಅಂಬೇಡ್ಕರ್, ಕನಕದಾಸರು, ನಾರಾಯಣಗುರುಗಳ ಆಶಯದಂತೆ ಸಮಸಮಾಜದ ಸ್ಥಾಪನೆಗಾಗಿ ಶೋಷಿತ, ಅವಕಾಶ ವಂಚಿತರ ಕಲ್ಯಾಣಕ್ಕಾಗಿ ದುಡಿಯುತ್ತಿರುವ ನಾನು, ಪಟ್ಟಭದ್ರ ಹಿತಾಸಕ್ತಿಗಳಿಗೆ ಕಳೆದ 40 ವರ್ಷಗಳಿಂದ ಬಹುದೊಡ್ಡ ಸವಾಲಾಗಿದ್ದೇನೆ. ನನ್ನನ್ನು ಮೂಲೆಗೆ ಸರಿಸುವ ಮೂಲಕ ಸಮಾಜದ ಬಹುಸಂಖ್ಯಾಕರ ದನಿಯನ್ನು ಅಡಗಿಸುವ ಪ್ರಯತ್ನ ಇಂದು ನಡೆಯುತ್ತಿದೆ’ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ
MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ
Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.