MUDA Scam: ನಿವೇಶನಗಳ ವಾಪಸ್ ಕೊಡುವ ನಿರ್ಧಾರ ರಾಜಕೀಯ ಡ್ರಾಮಾವಷ್ಟೇ: ಬಿ.ವೈ.ವಿಜಯೇಂದ್ರ
ಸಿದ್ದರಾಮಯ್ಯ ಪತ್ನಿ ಪಾರ್ವತಿಯವರೇ ಪತ್ರ ಬರೆದಿದ್ದಾರೋ ಅಥವಾ ಬಲವಂತವಾಗಿ ಬರೆದಿದ್ದಾರೋ ಗೊತ್ತಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ಪ್ರಶ್ನೆ
Team Udayavani, Oct 1, 2024, 7:21 PM IST
ಬೆಂಗಳೂರು: ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ಪತ್ನಿ ಅರ್ಥಾತ್ ಸಿದ್ದರಾಮಯ್ಯ 14 ನಿವೇಶನಗಳ ವಾಪಸ್ ಕೊಡುವ ನಿರ್ಧಾರ ಕೈಗೊಂಡಿದ್ದಾರೆ ಎಂದರೆ ಕಾನೂನಿನ ಕುಣಿಕೆಯಿಂದ ಪಾರಾಗಲು, ಅನುಕಂಪ ಪಡೆಯಲು ಹಾಗೂ ಸ್ವಪಕ್ಷದಲ್ಲೇ ತೊಡೆ ತಟ್ಟುವವರ ಎದುರಿಸುವ ಲೆಕ್ಕಾಚಾರದಿಂದ ಸಿದ್ದರಾಮಯ್ಯ ನಿವೇಶನಗಳ ವಾಪಸ್ ಕೊಡುವ ನಿರ್ಧಾರ ಕೈಗೊಂಡಿರುವುದು ರಾಜಕೀಯ ಡ್ರಾಮಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಬಿ.ವೈ.ವಿಜಯೇಂದ್ರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಸಿಎಂ ಕುಟುಂಬಕ್ಕೆ ಹಂಚಿಕೆಯಾದ ಮುಡಾ ನಿವೇಶನಗಳ ವಾಪಸ್ ಕೊಡುವ ನಿರ್ಣಯ ಮಾಡಿದ್ದಾರೆ ಎಂದರೆ ತಪ್ಪು ಒಪ್ಪಿಕೊಂಡಿದ್ದಾರೆ ಎಂದೇ ಅರ್ಥ. ಮುಖ್ಯಮಂತ್ರಿಯವರು ತಮ್ಮ ತಪ್ಪು ಒಪ್ಪಿಕೊಳ್ಳುವ ಸಂದರ್ಭ ಬರುತ್ತದೆ ಎಂದು ಈ ಹಿಂದೆಯೇ ಹೇಳಿದ್ದೆ. ಸಿದ್ದರಾಮಯ್ಯನವರು ಇನ್ನಾದರೂ ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ರಾಜೀನಾಮೆ ನೀಡುವ ಮೊದಲು ಸಿಎಂ ರಾಜ್ಯಪಾಲರ ಕ್ಷಮೆ ಕೇಳಬೇಕು. ಡಿಜಿಪಿಯವರು ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಸೋಮವಾರ ರಾತ್ರಿ ಮಹತ್ತರ ಬೆಳವಣಿಗೆಯಲ್ಲಿ ಸಿಎಂ ಪತ್ನಿ ಸಿದ್ದರಾಮಯ್ಯ, ಪುತ್ರ ಗಮನಕ್ಕೂ ಬಾರದೇ ಸಿಎಂ ಅಧಿಕೃತ ನಿವಾಸದಿಂದಲೇ ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯ ಪತ್ನಿ ಪಾರ್ವತಿಯವರು ಅವರಾಗಿಯೇ ಪತ್ರ ಬರೆದಿದ್ದಾರೋ ಅಥವಾ ಬಲವಂತವಾಗಿ ಬರೆದಿದ್ದಾರೋ ಗೊತ್ತಿಲ್ಲ. ನಾನು ಜಗ್ಗಲ್ಲ, ಬಗ್ಗಲ್ಲ ಅಂತಾ ಸಿದ್ದರಾಮಯ್ಯ ಆರ್ಭಟ ಮಾಡುತ್ತಿದ್ದರು. ನಾನ್ಯಾಕೆ ನಿವೇಶನಗಳ ವಾಪಸ್ ಕೊಡಬೇಕು, ನನಗೆ 62 ಕೋಟಿ ರೂ. ಕೊಡುತ್ತಾರಾ ಅಂತಾ ಸಿದ್ದರಾಮಯ್ಯ ಹೇಳಿದ್ದರು. ಸಾಮಾಜಿಕ ಕಾರ್ಯಕರ್ತರು ಕೊಟ್ಟ ದೂರು, ಅದರ ಆಧಾರದಲ್ಲಿ ರಾಜ್ಯಪಾಲರು ಕೊಟ್ಟ ಅನುಮತಿ, ಕೋರ್ಟ್ ಆದೇಶ ಎಲ್ಲವೂ ಆಗಿದೆ ಎಂದು ಹೇಳಿದರು.
ಸಿಎಂ ಕುಟುಂಬಕ್ಕೆ ಹಂಚಿಕೆಯಾದ ಮುಡಾ ನಿವೇಶನಗಳನ್ನು ವಾಪಸ್ ಕೊಡುವ ನಿರ್ಣಯ ಮಾಡಿದ್ದಾರೆ ಎಂದರೆ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದೇ ಅರ್ಥ. ಮುಖ್ಯಮಂತ್ರಿಗಳು ತಮ್ಮ ತಪ್ಪನ್ನು ಒಪ್ಪಿಕೊಳ್ಳುವ ಸಂದರ್ಭ ಬರುತ್ತದೆ ಎಂದು ಈ ಹಿಂದೆಯೇ ಹೇಳಿದ್ದೆ. ನಿನ್ನೆ ರಾತ್ರಿ ಬಹಳ ಮಹತ್ತರವಾದ ಬೆಳವಣಿಗೆ ಆಗಿದೆ. ಸೈಟ್ ವಾಪಸ್ ನೀಡುವ ಕುರಿತು ಸಿಎಂ ಪತ್ನಿ… pic.twitter.com/LG8NiVdkT0
— Vijayendra Yediyurappa (@BYVijayendra) October 1, 2024
ಹಿಂದೆ ಸಿದ್ದರಾಮಯ್ಯ ಮೇಲೆ ಭ್ರಷ್ಟಾಚಾರ ಆರೋಪ ಬಂದಾಗ ಎಸಿಬಿ ರಚನೆ ಮಾಡಿದ್ದರು. ಲೋಕಾಯುಕ್ತ ಸಂಸ್ಥೆ ಮುಚ್ಚಿ ಹಾಕಿ ಎಸಿಬಿ ರಚನೆ ಮಾಡಿದ್ದರು. ಎಸಿಬಿ ರಚಿಸಿ ತಮಗೆ ಬೇಕಾದ ಅಧಿಕಾರಿಗಳನ್ನು ನೇಮಕ ಮಾಡಿದ್ದರು. ಮುಡಾ ಸೈಟ್ ಹಂಚಿಕೆ ಕೇಸ್ನಲ್ಲಿ ಎರಡು ವಿಚಾರ ಗಮನಿಸಬೇಕು. ಸಿಎಂ ಪತ್ನಿಗೆ 14 ನಿವೇಶನ ಹಂಚಿಕೆ ಮಾಡಿದ್ದು ಒಂದು ಕಡೆಯಾದರೆ. ಸಿಎಂ ಹಿಂಬಾಲಕರು, ರಿಯಲ್ ಎಸ್ಟೇಟ್ ದಲ್ಲಾಳಿಗಳಿಗೂ ಸೈಟ್ ಹಂಚಿಕೆ ಮಾಡಲಾಗಿದೆ ಎಂದು ಬಿ.ವೈ.ವಿಜಯೇಂದ್ರ ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು
NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ
Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.