MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ಸಾಧ್ಯತೆ
ಆದೇಶದ ಪ್ರತಿಗಾಗಿ ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ ಬೆಂಗಳೂರಿಗೆ ಮೈಸೂರಿಗೆ ಬಂದ ಬಳಿಕ ಕ್ರಮ
Team Udayavani, Sep 27, 2024, 7:53 AM IST
ಮೈಸೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಗುರುವಾರವೂ ಪ್ರಕರಣ ದಾಖಲಾಗಿಲ್ಲ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ನೀಡಿದ್ದ ಆದೇಶದ ಪ್ರತಿಯನ್ನು ಪಡೆಯಲು ಖುದ್ದಾಗಿ ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ ಬೆಂಗಳೂರಿಗೆ ತೆರಳಿದ್ದು, ಮೈಸೂರಿಗೆ ಬಂದ ಬಳಿಕ ಶುಕ್ರವಾರ ಬೆಳಗ್ಗೆ ಸಿಎಂ ವಿರುದ್ಧ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಬುಧವಾರ ಮಧ್ಯಾಹ್ನ ಆದೇಶವಾದ ಬಳಿಕ ಆದೇಶ ಪ್ರತಿ ಬರಬಹುದೆಂಬ ನಿರೀಕ್ಷೆಯಲ್ಲಿ ಸಂಜೆಯವರೆಗೂ ಕಚೇರಿಯಲ್ಲೇ ಇದ್ದ ಲೋಕಾಯುಕ್ತ ಎಸ್‌ಪಿ ಎಫ್ಐಆರ್ ದಾಖಲಿಸಲು ಸಿದ್ಧತೆ ನಡೆಸಿದ್ದರು. ಗುರುವಾರ ಬೆಳಗ್ಗೆ ಆದೇಶ ಪ್ರತಿ ಸಂಗ್ರಹಿಸಿಕೊಂಡು ಬರಲು ಖುದ್ದಾಗಿ ಬೆಂಗಳೂರಿಗೆ ತೆರಳಿದ್ದು, ಲೋಕಾಯುಕ್ತ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಅಗತ್ಯ ಮಾರ್ಗದರ್ಶನದೊಂದಿಗೆ ಕಾನೂನು ಸಲಹೆ ಪಡೆದಿದ್ದಾರೆ ಎನ್ನಲಾಗಿದೆ.
ಎಸ್‌ಪಿಗೆ ಬೆದರಿಕೆ ಆರೋಪ
ಮುಡಾ ಹಗರಣ ಸಂಬಂಧ ಸಿಎಂ ವಿರುದ್ಧ ಬುಧವಾರ ಜೆಡಿ ಎಸ್ ನಿಯೋ ಗ ದೊಂದಿಗೆ ದೂರು ನೀಡಲು ಆಗಮಿಸಿದ್ದ ವಕೀಲ ಪ್ರದೀಪ್ ಕುಮಾರ್, ಲೋಕಾ ಯುಕ್ತ ಎಸ್ಪಿಗೆ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಲೋಕಾಯುಕ್ತ ಕಚೇರಿಯಲ್ಲಿ ದೂರು ನೀಡಲು ಆಗಮಿಸಿದ್ದರು. ಆದರೆ ಎಸ್‌ಪಿ ಉದೇಶ್ ಇರದ ಕಾರಣ ಬರಿಗೈಯಲ್ಲಿ ಹಿಂದಿರುಗಿದರು.
ಲೋಕಾಯುಕ್ತ ಎಸ್ಪಿ ನಾಪತ್ತೆ: ಸ್ನೇಹಮಯಿ ಕೃಷ್ಣ ಆರೋಪ
ಸಿಎಂ ಸಿದ್ದರಾಮಯ್ಯ ವಿರುದ್ಧ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಕೋರ್ಟ್ ಆದೇಶದ ಪ್ರತಿಯೊಂದಿಗೆ ಮೈಸೂರು ಲೋಕಾ ಯುಕ್ತ ಕಚೇರಿಗೆ ಮತ್ತೂಮ್ಮೆ ದೂರು ನೀಡಲು ಗುರುವಾರ ಆಗಮಿಸಿದ್ದು ಸಂಜೆವರೆಗೂ ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ ಭೇಟಿಗಾಗಿ ಕಾದು ಕುಳಿತರೂ ಸಂಪರ್ಕಕ್ಕೆ ಸಿಗಲಿಲ್ಲ ಎಂದು ಆರೋಪಿಸಿದ್ದಾರೆ.
ಅವರು (ಲೋಕಾಯುಕ್ತ ಎಸ್‌ಪಿ) ನಾಪತ್ತೆಯಾಗಿದ್ದು, ಸಿಎಂ ಕಡೆಯವರು ಅವರನ್ನು ಅಪಹರಿಸಿದ್ದಾರೆ ಎಂದು ಆರೋಪಿಸಿ ನಗ ರದ ದೇವ ರಾಜ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾ ದರು. ಆದರೆ ಅಲ್ಲಿ ದೂರು ಸ್ವೀಕರಿಸದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ಆಯುಕ್ತರ ಕಚೇರಿಯಲ್ಲಿ ದೂರು ಸ್ವೀಕೃತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.