MUDA Scam: ಪಾರದರ್ಶಕ ತನಿಖೆಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಗದ್ದಿಗೌಡರ್
ಕಾಂಗ್ರೆಸ್ ಸರ್ಕಾರ ರಾಜ್ಯದ ಖಜಾನೆ ಲೂಟಿ ಹೊಡೆದು ಅಧೋಗತಿಗೆ ತಂದಿದೆ: ಶಾಸಕ ಸಿದ್ದು ಸವದಿ
Team Udayavani, Sep 24, 2024, 9:16 PM IST
ರಬಕವಿ-ಬನಹಟ್ಟಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಳಷ್ಟು ನುರಿತ, ಅನುಭವಿ ರಾಜಕಾರಣಿಯಾಗಿದ್ದು, ಹಿಂದಿನ ಪರಂಪರೆ ಅವಲೋಕಿಸಿದಾಗ ಇಂತಹ ತೀರ್ಮಾನ ಬಂದ ಸಂದರ್ಭದಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗೆ ಅವಕಾಶ ನೀಡಬೇಕು ಎಂದು ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ್ ಹೇಳಿದರು.
ಮಂಗಳವಾರ ಬನಹಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ಸಾಮಾಜಿಕ ನ್ಯಾಯದ ವಿರುದ್ಧವಿದೆ ಎಂದು ಹೇಳಿದ್ದು ಸರಿಯಲ್ಲ. ಅವರ ಆಡಳಿತದಲ್ಲಿ ಹಲವು ಪ್ರಕರಣಗಳ ನೋಡಿದಾಗ ಕಾಂಗ್ರೆಸ್ ಪಕ್ಷವೇ ಸಾಮಾಜಿಕ ನ್ಯಾಯದ ವಿರುದ್ಧವಿದೆ ಎಂಬುದು ಗೊತ್ತಾಗುತ್ತದೆ ಎಂದು ಗದ್ದಿಗೌಡರ್ ತಿಳಿಸಿದರು.
ಶಾಸಕ ಸಿದ್ದು ಸವದಿ ಮಾತನಾಡಿ, ಇದು ಸತ್ಯಕ್ಕೆ ಜಯವಾಗಿದೆ. ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಲೂಟಿ ಮಾಡಿದ್ದು, ರಾಜ್ಯವನ್ನು ಅಧೋಗತಿಗೆ ತಂದು ಬಿಟ್ಟಿದೆ. ಬಿಜೆಪಿ ಮಿತ್ರ ಪಕ್ಷಗಳು ಮುಖಮಂತ್ರಿ ಸಿದ್ಧರಾಮಯ್ಯ ರಾಜೀನಾಮೆಗೆ ಹೋರಾಟ ಮಾಡುತ್ತವೆ. ಕೇವಲ ಮುಡಾ ಹಗರಣ ಮಾತ್ರವಲ್ಲ, ಎಸ್.ಟಿ ನಿಗಮದ ಹಣ ಲೂಟಿ ಹೊಡೆದಿದ್ದಾರೆ.
ಖರ್ಗೆಯವರು ಕೂಡ ಬೆಂಗಳೂರಿನ ಪ್ರಮುಖ ಪ್ರದೇಶದಲ್ಲಿ ತಮ್ಮ ಕುಟುಂಬಕ್ಕೆ ಐದು ಎಕರೆ ಭೂಪ್ರದೇಶ ಪಡೆದಿದ್ದು ಇದು ಕೂಡ ತನಿಖೆಯಾಗಲಿ. ಕಾಂಗ್ರೆಸ್ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಗ್ಯಾರಂಟಿ ಯೋಜನೆಗಳ ಸರಿಯಾದ ಹಂಚಿಕೆ ಆಗುತ್ತಿಲ್ಲ ಈ ಮೂಲಕ ಸರ್ಕಾರ ನಾಟಕ ಆಡುತ್ತಿದೆ. ಸಿಎಂ ಸಿದ್ಧರಾಮಯ್ಯರಿಗೆ ರಾಜ್ಯದ ಜನರ ಬಗ್ಗೆ ಪ್ರೀತಿ ವಿಶ್ವಾಸವಿದ್ದರೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಶಾಸಕ ಸಿದ್ದು ಸವದಿ ಆಗ್ರಹಿಸಿದರು.
ಡಾ.ಎಂ.ಎಸ್.ದಡ್ಡೆನ್ನವರ, ಗೋವಿಂದ ಡಾಗಾ, ಶ್ರೀಶೈಲ ಯಾದವಾಡ, ಲಕ್ಕಪ್ಪ ಪಾಟೀಲ, ಶ್ರೀಶೈಲ ಬೀಳಗಿ, ಚಿದಾನಂದ ಹೊರಟ್ಟಿ, ಭೀಮಶಿ ಪಾಟೀಲ ಸೇರಿದಂತೆ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.