MUDA Scam: ಸಿಎಂ ಆಗಿ ಮುಂದುವರಿಯುವ ಹಕ್ಕಿಲ್ಲ: ಸಂಸದ ಕ್ಯಾ.ಬ್ರಿಜೇಶ್ ಚೌಟ
Team Udayavani, Aug 18, 2024, 1:13 AM IST
ಮಂಗಳೂರು: ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬಳಿಕ ರಾಜ್ಯದ ಸಿಎಂ ಆಗಿ ಮುಂದು ವರಿಯುವ ಎಲ್ಲ ನೈತಿಕ ಹಕ್ಕನ್ನು ಸಿದ್ದರಾ ಮಯ್ಯ ಕಳೆದುಕೊಂಡಿದ್ದಾರೆ. ಅವರಿಗೆ ರಾಜ್ಯದ ಜನತೆಯ ಹಾಗೂ ನಮ್ಮ ಸಂವಿ ಧಾನದ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ, ಹುದ್ದೆಗೆ ತತ್‌ಕ್ಷಣ ರಾಜೀನಾಮೆ ಸಲ್ಲಿಸಬೇಕು ಎಂದು ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ಆಗ್ರಹಿಸಿದ್ದಾರೆ.
ಮುಡಾ ಅವ್ಯವಹಾರದ ಪ್ರಕರಣ ಕೇವಲ ಅಧಿಕಾರ ದುರುಪಯೋಗ ಮತ್ತು ಭ್ರಷ್ಟಾಚಾರದ ಪ್ರಕರಣವಾಗಿರದೇ, ದುರ್ಬಲ ಹಾಗೂ ಬಡವರ್ಗದ ಜನರಿಗೆ ಎಸಗಿರುವ ವಂಚನೆ ಎಂದರು. ರಾಜಕೀಯ ಜೀವನ ತೆರೆದ ಪುಸ್ತಕ ವಿದ್ದಂತೆ. ಸಣ್ಣ ಕಪ್ಪು ಚುಕ್ಕಿಯೂ ಇಲ್ಲ ಎನ್ನುವ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಭ್ರಷ್ಟಾಚಾರ ಎಸಗುವ ಮೂಲಕ ಜನತೆಗೆ ಮೋಸ ಮಾಡಿದ್ದಾರೆ. ಈಗ ಆರೋಪಗಳಿಗೆ ಉತ್ತರಿಸಬೇಕಿದೆ ಎಂದು ಸಂಸದರು ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
ರಾಜೀನಾಮೆ ನೀಡದಿದ್ದರೆ ಹೋರಾಟ: ಕುಂಪಲ
ಮಂಗಳೂರು, ಆ.17: ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಕೂಡಲೇ ರಾಜೀನಾಮೆ ನೀಡದಿದ್ದರೆ ಬಿಜೆಪಿ ಉಗ್ರ ಹೋರಾಟ ನಡೆಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.
ಮುಡಾದಲ್ಲಿ ಕಾನೂನುಬಾಹಿರವಾಗಿ ನಿವೇಶನ ಗಳನ್ನು ಪಡೆದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅವರ ರಾಜೀನಾಮೆಗೆ ಆಗ್ರಹಿಸಿ, ಬಿಜೆಪಿ ಬೆಂಗಳೂರಿನಿಂದ ಮೈಸೂರಿನವರೆಗೂ ಪಾದಯಾತ್ರೆ ಹಮ್ಮಿಕೊಂಡಿತ್ತು. ಈ ಗಂಭೀರ ಪ್ರಕರಣದಲ್ಲಿ ರಾಜ್ಯದ ತನಿಖಾ ಸಂಸ್ಥೆಗಳು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಸಿಎಂ ರಾಜೀನಾಮೆ ಕೊಡಬೇಕು. ತಾವು ತಪ್ಪಿತಸ್ಥರಲ್ಲ, ಯಾವುದೇ ತಪ್ಪು ಮಾಡಿಲ್ಲ ಎನ್ನುವುದಾದರೆ ಸಿಎಂ, ತಮ್ಮ ರಾಜೀನಾಮೆಯಿಂದ ಹಿಂಜರಿಯುತ್ತಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ.
ಸಿಎಂ ರಾಜೀನಾಮೆಗೆ ಭರತ್ ಶೆಟ್ಟಿ, ಡಿ. ವೇದವ್ಯಾಸ ಕಾಮತ್ ಆಗ್ರಹ
ಮಂಗಳೂರು: ಮುಡಾ ಪ್ರಕರಣದ ಹಿನ್ನೆಲೆಯಲ್ಲಿ ಸಿಎಂ ಸಿದ್ಧರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಶಾಸಕ ರಾದ ಡಾ| ವೈ. ಭರತ್ ಶೆಟ್ಟಿ ಮತ್ತು ಡಿ. ವೇದವ್ಯಾಸ ಕಾಮತ್ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಬೇರೆ ರಾಜ್ಯಗ ಳಲ್ಲಿ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ಮುಂದಾ ದಾಗ ಅವರು ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಿದ ಉದಾಹರಣೆಗಳಿವೆ. ಆದರೆ, ಸಿದ್ದರಾಮಯ್ಯ ಅಧಿಕಾರದ ಆಸೆಯಿಂದಾಗಿ ರಾಜೀನಾಮೆ ನೀಡುತ್ತಿಲ್ಲ ಎಂದರು.
ಸಿಎಂ ಮೇಲೆ ಭ್ರಷ್ಟಾಚಾರದ ಆರೋಪ ಬಂದಾಗ ಸಾಮಾನ್ಯವಾಗಿ ಯೇ ಪ್ರಾಸಿಕ್ಯೂಶನ್ ಆಗುತ್ತದೆ. ತನಿಖೆಯಿಂದ ತಪ್ಪಿತಸ್ಥ ಅಲ್ಲ ಎಂದು ಕಂಡು ಬಂದರೆ ಬಳಿಕ ಮತ್ತೆ ಪಟ್ಟಕ್ಕೇರಲಿ ಎಂದರು. ವಾಲ್ಮೀಕಿ ನಿಗಮದಲ್ಲಿ ಹಗರಣ ಆಗಿದೆ ಎಂದು ಸದನದಲ್ಲಿ ಸಿಎಂ ಒಪ್ಪಿಕೊಂಡಿದ್ದಾರೆ. ಮುಡಾದಲ್ಲಿನ ಭ್ರಷ್ಟಾಚಾರದ ವಿರುದ್ದ ಸದನದಲ್ಲಿ ಚರ್ಚೆಗೂ ಅವಕಾಶ ನೀಡಲಿಲ್ಲ ಎಂದು ಟೀಕಿಸಿದರು.
ಕಾಂಗ್ರೆಸ್‌ನೊಳಗೇ ಸಿಎಂ ಕುರ್ಚಿಗೆ ಪೈಪೋಟಿ ಆರಂಭವಾಗಿದೆ. ಡಿ.ಕೆ. ಶಿವಕುಮಾರ್, ಮಲ್ಲಿಕಾ ರ್ಜುನ ಖರ್ಗೆ, ಉತ್ತರ ಕರ್ನಾಟಕ, ತುಮಕೂರು ಕಡೆಯವರಿಗೆ ಈ ಪ್ರಕರಣದಿಂದ ಖುಷಿಯಾಗಿದೆ ಎಂದು ಡಾ| ವೈ. ಭರತ್ ಶೆಟ್ಟಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.