MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್‌ಡಿಕೆ
ದಲಿತರ ಭೂಮಿ ಕಬಳಿಸಿದ ಸಿದ್ದರಾಮಯ್ಯ ಕುಟುಂಬ: ಕೇಂದ್ರ ಸಚಿವ ವಾಗ್ಧಾಳಿ
Team Udayavani, Jul 21, 2024, 9:41 PM IST
ಹಾಸನ: ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಾಪ್ರಪಜ್ಞೆ ಕಾಡುತ್ತಿದೆ. ವಿಧಾನಸಭೆಯಲ್ಲಿ ಅವರು ಮಾತನಾಡುವ ಮುಖಚರ್ಯೆಯನ್ನು ನೋಡಿದರೆ ಅವರಿಗೆ ಎಷ್ಟು ಪಾಪಪ್ರಜ್ಞೆ ಕಾಡುತ್ತಿದೆ ಎಂಬುದು ಗೊತ್ತಾಗುತ್ತದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ವಾಗ್ಧಾಳಿ ನಡೆಸಿದರು.
ಹಾಸನ ಕ್ಷೇತ್ರದ ಶಾಸಕ ಸ್ವರೂಪ್ ಪ್ರಕಾಶ್ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಒಂದು ವರ್ಷದಿಂದ ಅವರು ಆಡಳಿತ ನಡೆಸುತ್ತಿದ್ದಾರೆ. ಮೂಡಾದಲ್ಲಿ 2010-2011 ಇಸವಿಯಲ್ಲಿನ ಮಂಜೂರಾತಿಯ ಬಗ್ಗೆ ಈಗ ಸಿದ್ದರಾಮಯ್ಯ ಅವರು ಮಾತನಾಡುತ್ತಿದ್ದಾರೆ. ಅವತ್ತು ಗಮನಕ್ಕೆ ಬಂದಿರಲಿಲ್ಲವಾ? ಮಾಡಿರುವ ಅಕ್ರಮಗಳನ್ನು ಮುಚ್ಚಿಕೊಳ್ಳಲು ಈಗ ತನಿಖೆ ಮಾಡಿಸುತ್ತೇವೆ ಎಂದು ಹೇಳುತ್ತಿದ್ದೀರಾ? ಯಾವ ತನಿಖೆ ನಡೆಸಿ ಯಾರ ಮೇಲೆ ಕ್ರಮ ತೆಗೆದುಕೊಳ್ಳುತ್ತೀರಿ?
ಸ್ವತಂತ್ರವಾದ ಸರಕಾರವನ್ನು ಜನರು ನನಗೆ ಕೊಡಲಿಲ್ಲ. ನನಗೆ ಕೆಲ ವರದಿಗಳನ್ನು ಕೊಡಲು ಬಿಡಲಿಲ್ಲ. ಮೈಸೂರಿನ ಮುಡಾದಲ್ಲಿ ಅಷ್ಟೆಲ್ಲಾ ತಪ್ಪು ಮಾಡಿ ನನ್ನ ಬಾಮೈದ ತಪ್ಪು ಮಾಡಿ ದ್ದಾನೆ ಎಂದು ಅವರ ಮೇಲೆ ಹೇಳುತ್ತಿದ್ದಾರೆ. ಆ ಭೂಮಿಯನ್ನು ನಿಮ್ಮ ಬಾಮೈದ ತೆಗೆದುಕೊಳ್ಳಲು ಅವಕಾಶ ಇತ್ತಾ? ಅದು ದಲಿತರಿಗೆ ಸೇರಿದ ಭೂಮಿ ಎಂದು ಕಿಡಿಕಾರಿದರು.
ಸಿದ್ದರಾಮಯ್ಯ ಅವರೇ ಮುಡಾದಲ್ಲಿ ಯಾರಧ್ದೋ ಜಮೀನು, 62 ಕೋಟಿ ಕೊಟ್ಟರೆ ಪುಕ್ಸಟ್ಟೆ ಬಿಟ್ಟುಕೊಡ್ತೀರಾ ನೀವು? 1992ರಲ್ಲಿ ಅಂತಿಮ ಅಧಿಸೂಚನೆ ಆಗಿದೆ. 1998ರಲ್ಲಿ ಅವರು ಬದುಕೇ ಇರಲಿಲ್ಲ. ಡಿನೋಟಿಫೀಕೇಷನ್ ಮಾಡಿ ಎಂದು ಅರ್ಜಿ ಕೊಟ್ಟವರು ಯಾರು? ನಿಂಗ ಎನ್ನುವ ವ್ಯಕ್ತಿ ತೀರಿಕೊಂಡಿದ್ದು ಯಾವಾಗ? ಸ್ವರ್ಗದಿಂದ ಬಂದು ಅರ್ಜಿ ಕೊಟ್ಟು ಡಿನೋಟಿಫಿಕೇಷನ್ ಮಾಡಿ ಎಂದು ಕೇಳಿದ್ರಾ ಅವರು? ಆ ಜಮೀನನ್ನು ನಿಮ್ಮ ಬಾಮೈದ ಖರೀದಿ ಮಾಡಿ ದಾನ ಕೊಟ್ಟ ಎನ್ನುವುದೆಲ್ಲಾ ಬರೀ ಡ್ರಾಮಾ. ಇದರಲ್ಲಿ ನಿಮ್ಮ ಕುಟುಂಬದ ನೇರ ಪಾತ್ರ ಇದೆ ಎಂದು ಕೇಂದ್ರ ಸಚಿವರು ಆರೋಪ ಮಾಡಿದರು.
ಮುಡಾದ್ದು ದಾಖಲೆ ಸಮೇತ ಮಾತನಾಡುತ್ತಿದ್ದೇವೆ ನಾವು. ನಿಮಗೆ ನಾಚಿಕೆ ಆಗಲ್ವಾ ಸಿದ್ದರಾಮಯ್ಯನವರೇ..? ನಿಮ್ಮ ಮುಖ ನೋಡಿದರೆ ಗೊತ್ತಾಗುತ್ತದೆ, ನಿಮ್ಮ ಮುಖದಲ್ಲಿ ಪಾಪಪ್ರಜ್ಞೆ ಎನ್ನುವುದು ಎದ್ದು ಕಾಣುತ್ತಿದೆ. ನಿಮಗೆ ಪಾಪಪ್ರಜ್ಞೆ ಕಾಡುತ್ತಿದೆ. ಮಾಧ್ಯಮಗಳ ಮುಂದೆ ಕುಳಿತಾಗ ಗೊತ್ತಾಗುತ್ತಿದೆ, ನಿಮ್ಮನ್ನು ಪಾಪಪ್ರಜ್ಞೆ ಕಾಡುತ್ತಿದೆ ಎಂದು. ವಿಧಾನಸಭೆಯಲ್ಲಿ ನೀವು ಕೊಟ್ಟ ಉತ್ತರ ಇದೆಯಲ್ಲಾ, ಅದನ್ನು ನೋಡಿದರೆ ಗೊತ್ತಾಗುತ್ತದೆ ನಿಮ್ಮ ಸ್ಥಿತಿ. ಹಿಂದೆ ನೀವು ಯಾವ ರೀತಿ ಉತ್ತರ ಕೊಡುತ್ತಿದ್ದಿರಿ, ಶುಕ್ರವಾರ ಯಾವ ರೀತಿ ಉತ್ತರ ಕೊಟ್ಟಿರಿ? ಎಲ್ಲವನ್ನು ಗಮನಿಸಿ ಸದ್ದೇನೆ. ಈ ಸರಕಾರದ ಪಾಪದ ಕೊಡ ತುಂಬಿ ಹೋಗಿದೆ ಎಂದು ಕುಮಾರಸ್ವಾಮಿ ಅವರು ಚುಚ್ಚಿದರು.
ರಾಮನಗರದಲ್ಲಿ ಬೆಂಗಳೂರು ಕಸ ಸುರಿಯಲು ಹುನ್ನಾರ:
ಬ್ರ್ಯಾಂಡ್ ಬೆಂಗಳೂರು ರೀತಿ ರಾಮನಗರವನ್ನೂ ಅಭಿವೃದ್ಧಿ ಮಾಡಬೇಕಾ? ರಾಮನಗರ ಜಿಲ್ಲೆ ಅಭಿವೃದ್ಧಿಯಾಗಿ ಹತ್ತು ವರ್ಷಗಳಾಯಿತು. ಇವರು ಬಂದು ಏನು ಅಭಿವೃದ್ಧಿ ಮಾಡುತ್ತಾರೆ? ಈಗ ಬೆಂಗಳೂರಿನ ಜಾಗವನ್ನು ಯಾವನಿಗೋ 45 ಸಾವಿರ ಕೋಟಿಗೆ ಮೂವತ್ತು ವರ್ಷ ಲೀಸ್?ಗೆ ಕೊಡಲು ಹೊರಟಿದ್ದಾರೆ. ಬ್ರ್ಯಾಂಡ್ ಬೆಂಗಳೂರು ಮಾಡೋದು ಕಸ ತುಂಬಿಸಲಿಕ್ಕಾ? ರಾಮನಗರ ತೆಗೆದು ಬೆಂಗಳೂರು ದಕ್ಷಿಣ ಹೆಸರಿಡುವುದು ಬೆಂಗಳೂರಿನ ಕಸ ತಂದು ತುಂಬಿಸಲಿಕ್ಕಾ? ಕಪ್ಪುಪಟ್ಟಿಯಲ್ಲಿ ಇದ್ದವರನ್ನು ಕರೆದುಕೊಂಡು ಬಂದು ಲೀಸ್ ಕೊಡಲು ಹೊರಟಿದ್ದೀರಾ? ಸುಮ್ಮನೆ ಬಾಯಿ ಚಪಲಕ್ಕೆ ಹೇಳುತ್ತಿಲ್ಲ ನಾನು, ಸರಕಾರದಲ್ಲಿ ಏನೇನು ನಡೆದಿದೆ ಎಲ್ಲಾ ಮಾಹಿತಿ ಸಂಗ್ರಹ ಮಾಡಿದ್ದೇನೆ ಎಂದು ಕೇಂದ್ರ ಸಚಿವರು ಹೇಳಿದರು.
ಚನ್ನಪಟ್ಟಣ ಅಭ್ಯರ್ಥಿ ಇನ್ನು ನಿರ್ಧಾರ ಮಾಡಿಲ್ಲ
ಚನ್ನಪಟ್ಟಣ ಉಪ ಚುನಾವಣೆ ಅಭ್ಯರ್ಥಿ ಬಗ್ಗೆ ಇನ್ನು ನಿರ್ಧಾರ ಮಾಡಿಲ್ಲ. ಯಾರೇ ಅಭ್ಯರ್ಥಿಯಾದರೂ ಅವರು ಎನ್ ಡಿಎ ಅಭ್ಯರ್ಥಿಯಾಗುತ್ತಾರೆ. ಎನ್‌ಡಿಎ ಅಭ್ಯರ್ಥಿ ನಿಲ್ಲುವುದಷ್ಟೇ ಅಲ್ಲ, ಗೆಲ್ಲಲೇಬೇಕು. ಗೆಲ್ಲುವುದಕ್ಕೆ ಏನೆಲ್ಲಾ ನಿರ್ಧಾರ ಮಾಡಬೇಕೋ ಅದನ್ನೆಲ್ಲಾ ಮಾಡುತ್ತೇವೆ. ಯಾರು ಅಭ್ಯರ್ಥಿ ಎಂದು ಇನ್ನೂ ಚರ್ಚೆ ಹಂತಕ್ಕೆ ಬಂದಿಲ್ಲ. ಕೇಂದ್ರದ ನಾಯಕರು, ರಾಜ್ಯದ ಬಿಜೆಪಿ ನಾಯಕರು ಎಲ್ಲಾ ಕುಳಿತು ಚರ್ಚೆ ಮಾಡುತ್ತೇವೆ. ಯೋಗೇಶ್ವರ್ ಅವರು ಗೆಲ್ಲಲು ಅವಕಾಶ ಇದ್ದರೆ ಅವರೇ ಚುನಾವಣೆಗೆ ನಿಲ್ಲುತ್ತಾರೆ. ಇಲ್ಲವೆಂದರೆ ಬೇರೆ ಅಭ್ಯರ್ಥಿಯನ್ನು ನಿಲ್ಲಿಸುತ್ತೇವೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಎಚ್.ಕೆ.ಕುಮಾರಸ್ವಾಮಿ, ಶಾಸಕ ಸಿ.ಎನ್.ಬಾಲಕೃಷ್ಣ, ಸ್ವರೂಪ್ ಪ್ರಕಾಶ್, ಸಿಮೆಂಟ್ ಮಂಜುನಾಥ್, ಎಚ್.ಕೆ.ಸುರೇಶ್ ಮುಂತಾದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.