Mudubidire: ಖಾಸಗಿ ಬಸ್ ಢಿಕ್ಕಿ; ಇಬ್ಬರಿಗೆ ಗಂಭೀರ ಗಾಯ, ರೊಚ್ಚಿಗೆದ್ದ ಸ್ಥಳೀಯರು
ಬಸ್ಸಿಗೆ ಕಲ್ಲೆಸೆದ ಉದ್ರಿಕ್ತರು, ಮೂರು ತಾಸು ಪ್ರತಿಭಟನೆ
Team Udayavani, Nov 12, 2024, 7:45 AM IST
ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ 169ರ ಮಿಜಾರು ತೋಡಾರಿನಲ್ಲಿರುವ ಎಂಜಿನಿಯರಿಂಗ್ ಕಾಲೇಜೊಂದರ ಬಳಿ ಸೋಮವಾರ ಬೆಳಗ್ಗೆ ಖಾಸಗಿ ಬಸ್ ಸ್ಕೂಟರ್‌ಗೆ ಢಿಕ್ಕಿ ಹೊಡೆದು ಸವಾರೆ, ಸಹಸವಾರೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಿಂದ ರೊಚ್ಚಿಗೆದ್ದ ಸ್ಥಳಿಯರು, ವಿದ್ಯಾರ್ಥಿಗಳ ಸಹಿತ ನೂರಾರು ಮಂದಿ ಸ್ಥಳದಲ್ಲಿ ಜಮಾಯಿಸಿ ಬಸ್ಸಿಗೆ ಕಲ್ಲೆಸೆದು, ಬಸ್ಸಿನ ಮೇಲೇರಿ ಪ್ರತಿಭಟನೆ ನಡೆಸಿದ್ದಾರೆ.
ಸುಮಾರು ಮೂರು ಗಂಟೆಗಳ ಕಾಲ ಪ್ರತಿಭಟನೆ ನಡೆದಿದ್ದು, ಹೀಗೆ ನಿರ್ಲಕ್ಷéದಿಂದ ಬಸ್ ಚಲಾಯಿಸುವ ಚಾಲಕರು ಮತ್ತು ಬೇಜವಾಬ್ದಾರಿಯಿಂದ ವರ್ತಿಸುವ ಮಾಲಕರ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಸ್ಕೂಟರ್ ಸವಾರೆ ಸುಮಿತ್ರಾ ಹಾಗೂ ಸಹಸವಾರೆ ಅವರ ಸಂಬಂಧಿ ಸಾನ್ವಿಗೆ ಗಂಭೀರ ಗಾಯಗಳಾಗಿವೆ. ಘಟನೆ ನಡೆದ ತತ್‌ಕ್ಷಣ ರಿಕ್ಷಾವೊಂದು ಅಲ್ಲಿಗೆ ಬಂದ ಕಾರಣ ಬಸ್ಸಿನ ಚಾಲನೆಗೆ ತಡೆಯೊಡ್ಡಿದಂತಾಗಿ ಹತ್ತಿರವೇ ಇದ್ದ ವಿದ್ಯಾರ್ಥಿಗಳು ಜೀವಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಮೂಡುಬಿದಿರೆಯಿಂದ ಮಂಗ ಳೂರು ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು ಚಾಲಕ ಅತಿ ವೇಗದಿಂದ ಚಲಾಯಿಸಿಕೊಂಡು ಬಂದಿದ್ದು, ಮೈಟ್ ಕಾಲೇಜಿನ ತಿರುವು ಬಳಿಯಲ್ಲಿ ನಿಯಂತ್ರಣ ಕಳೆದುಕೊಂಡ ಬಸ್ ಮೊದಲು ಕಾಲೇಜು ಬಸ್‌ಗೆ ಢಿಕ್ಕಿ ಹೊಡೆದು ಬಳಿಕ ಹೆದ್ದಾರಿ ಬಿಟ್ಟು ಕಾಲೇಜು ರಸ್ತೆಗೆ ನುಗ್ಗಿ ಸ್ಕೂಟರಿಗೆ ಗುದ್ದಿದೆ. ಹಿಂದೂ ಜಾಗರಣ ವೇದಿಕೆ, ಬಿಜೆಪಿಯ ಮುಖಂಡರು, ಮತ್ತಿತರರು ಸ್ಥಳಕ್ಕೆ ಆಗಮಿಸಿ ಬಸ್ ಚಾಲಕನ ವಿರುದ್ಧ ಕಠಿನ ಕ್ರಮಕ್ಕೆ ಆಗ್ರಹಿಸಿದರು.
ಸ್ಥಳಕ್ಕಾಗಮಿಸಿದ ಬಸ್ ಮಾಲಕ ರಫೀಕ್ ಸಂತ್ರಸ್ತರಿಗೆ ವೈಯಕ್ತಿಕ ನೆಲೆಯಲ್ಲಿ 5 ಲಕ್ಷ ರೂ. ಪರಿಹಾರ ಒದಗಿಸುತ್ತೇನೆ ಹಾಗೂ ತಪ್ಪಿತಸ್ಥ ಬಸ್ ಚಾಲಕನನ್ನು ಕೆಲಸದಿಂದ ವಜಾಗೊಳಿ ಸುವುದಾಗಿ ಭರವಸೆ ನೀಡಿದರು. ಪಣಂಬೂರು ಎಸಿಪಿ ಶ್ರೀಕಾಂತ್ ಆಗಮಿಸಿ, ಈ ಘಟನೆಯಲ್ಲಿ ಬಸ್ ಚಾಲಕ ಮತ್ತು ನಿರ್ವಾಹಕನನ್ನು ಆರೋಪಿಗಳಾಗಿ ಮಾಡಲಾಗುವುದು. ಖಾಸಗಿ ಬಸ್‌ಗಳಿಂದಾಗುವ ತೊಂದರೆಗಳ ಬಗ್ಗೆ ಚರ್ಚಿಸಲು ಶೀಘ್ರವೇ ಆರ್‌ಟಿಒ, ಪೊಲೀಸ್ ಹಾಗೂ ಬಸ್ ಮಾಲಕರ ಸಭೆ ಕರೆಯುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂದೆಗೆಯ ಲಾಯಿತು. ಚಾಲಕ ನಿಜಾಮ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.