ಗೇರ್-ಶಿಲ್ಪಾ ಶೆಟ್ಟಿ ಕಿಸ್ಸಿಂಗ್ ಪ್ರಕರಣ; 16 ವರ್ಷದ ಬಳಿಕ ಅರ್ಜಿ ವಜಾ-ಕೋರ್ಟ್ ಹೇಳಿದ್ದೇನು?
ಗೇರ್ ಹಾಗೂ ನಟಿ ಶಿಲ್ಪಾ ಶೆಟ್ಟಿ ವಿರುದ್ಧ ಐಪಿಸಿಯ ವಿವಿಧ ಸೆಕ್ಷೆನ್ ಗಳಡಿ ಪ್ರಕರಣ ದಾಖಲಾಗಿತ್ತು
Team Udayavani, Apr 4, 2023, 6:04 PM IST
ಮುಂಬೈ: 2007ರಲ್ಲಿ ರಾಜಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಾಲಿವುಡ್ ನಟ ರಿಚರ್ಡ್ ಗೇರ್, ಬಾಲಿವುಡ್ ನಟಿ ಶಿಲ್ಪಾ ನಟಿಗೆ ಕಿಸ್ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಅರ್ಜಿಯನ್ನು ಮುಂಬೈಯ ಸೆಷನ್ಸ್ ಕೋರ್ಟ್ ವಜಾಗೊಳಿಸಿದ್ದು, ಈ ಮೂಲಕ ಶಿಲ್ಪಾ ಶೆಟ್ಟಿಗೆ ರಿಲೀಫ್ ಸಿಕ್ಕಂತಾಗಿದೆ.
ಇದನ್ನೂ ಓದಿ:ಲಿಂಗಾಯತರ ವಿರುದ್ದ ಸಿ.ಟಿ.ರವಿ ಹೇಳಿಕೆ ಪೋಸ್ಟ್ ಪ್ರಕರಣ: ಮೂವರ ವಿರುದ್ದ ಎಫ್.ಐ.ಆರ್
ರಾಜಸ್ಥಾನದಲ್ಲಿ 2007ರಲ್ಲಿ ಏಡ್ಸ್ ಕುರಿತ ಅರಿವು ಮೂಡಿಸುವ ಸಾರ್ವಜನಿಕ ಕಾರ್ಯಕ್ರಮದ ವೇದಿಕೆಯಲ್ಲಿ ರಿಚರ್ಡ್ ಗೇರ್ ನಟಿ ಶಿಲ್ಪಾ ಶೆಟ್ಟಿಗೆ ಕಿಸ್ ಕೊಟ್ಟಿದ್ದರು. ಈ ಘಟನೆ ಬಗ್ಗೆ ಎಲ್ಲೆಡೆ ಆಕ್ರೋಶ, ಟೀಕೆ ವ್ಯಕ್ತವಾಗಿತ್ತು.
ಗೇರ್ ಅವರ ನಡವಳಿಕೆ ಭಾರತದ ಸಂಸ್ಕೃತಿಗೆ ವಿರುದ್ಧವಾದದ್ದು ಎಂದು ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ರಾಜಸ್ಥಾನದಲ್ಲಿ ನಟ ರಿಚರ್ಡ್ ಗೇರ್ ಹಾಗೂ ನಟಿ ಶಿಲ್ಪಾ ಶೆಟ್ಟಿ ವಿರುದ್ಧ ಐಪಿಸಿಯ ವಿವಿಧ ಸೆಕ್ಷೆನ್ ಗಳಡಿ ಪ್ರಕರಣ ದಾಖಲಾಗಿತ್ತು. 2017ರಲ್ಲಿ ಸುಪ್ರೀಂಕೋರ್ಟ್ ಆದೇಶದಂತೆ ರಾಜಸ್ಥಾನದಲ್ಲಿ ದಾಖಲಾಗಿದ್ದ ಪ್ರಕರಣ ಮುಂಬೈಗೆ ವರ್ಗಾವಣೆಗೊಳಿಸಲಾಗಿತ್ತು.
2022ರಲ್ಲಿ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್ ಕೋರ್ಟ್, ಈ ಘಟನೆಯಲ್ಲಿ ಗೇರ್ ಅವರ ದಿಢೀರ್ ನಡವಳಿಕೆಯಿಂದ ಶಿಲ್ಪಾ ಶೆಟ್ಟಿ ಬಲಿಪಶುವಾಗಿದ್ದಾರೆ ಎಂದು ತಿಳಿಸಿತ್ತು. ಅಲ್ಲದೇ ಗೇರ್ ಚುಂಬಿಸಿದಾಗ ಶಿಲ್ಪಾ ಶೆಟ್ಟಿ ಪ್ರತಿಭಟಿಸಲಿಲ್ಲ ಎಂಬ ಆರೋಪಕ್ಕೆ ಕೋರ್ಟ್, ಯಾವುದೇ ಕಲ್ಪನೆಯಿಂದ ಆಕೆಯನ್ನು ಸಂಚುಗಾರ್ತಿ ಅಥವಾ ಅಪರಾಧಿ ಎಂದು ನಿರ್ಧರಿಸಲು ಸಾಧ್ಯವಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಿ, ಶಿಲ್ಪಾ ಶೆಟ್ಟಿಯನ್ನು ಆರೋಪದಿಂದ ಮುಕ್ತಗೊಳಿಸಿತ್ತು.
ಏತನ್ಮಧ್ಯೆ ಪ್ರಾಸಿಕ್ಯೂಷನ್ ಸೆಷನ್ಸ್ ನ್ಯಾಯಾಲಯದಲ್ಲಿ ಮತ್ತೆ ಪರಿಷ್ಕೃತ ಅರ್ಜಿಯನ್ನು ಸಲ್ಲಿಸಿ, ಮ್ಯಾಜಿಸ್ಟ್ರೇಟ್ ಆರೋಪಿಯನ್ನು ಬಿಡುಗಡೆ ಮಾಡುವುದು ಕಾನೂನು ಬಾಹಿರವಾಗಲಿದೆ. ಇದು ನೈಸರ್ಗಿಕ ನ್ಯಾಯದ ತತ್ವಕ್ಕೆ ವಿರುದ್ಧವಾದದ್ದು ಎಂದು ವಾದಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್ ಸೋಮವಾರ (ಎ.03) ಅರ್ಜಿಯನ್ನು ವಜಾಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.