ಕೋವಿಡ್ ಹೆಚ್ಚಳ:ಮುಂಬಯಿಯಲ್ಲಿ ಸಂಜೆ 5ರಿಂದ ಮುಂಜಾನೆ 5ರವರೆಗೆ ನಿರ್ಬಂಧ ಜಾರಿ
ರೂಪಾಂತರ ತಳಿ ಒಮಿಕ್ರಾನ್ ಕೂಡಾ ಹೆಚ್ಚಳವಾಗುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ
Team Udayavani, Dec 31, 2021, 4:51 PM IST
ಮುಂಬಯಿ: ಕೋವಿಡ್, ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿರುವ ಪರಿಣಾಮ ಶುಕ್ರವಾರದಿಂದ (ಡಿಸೆಂಬರ್ 31) ಜನವರಿ 15ರವರೆಗೆ ಬೀಚ್ ಗಳಲ್ಲಿ, ಆಟದ ಮೈದಾನ, ಪಾರ್ಕ್ ಹಾಗೂ ಇತರ ಸಾರ್ವಜನಿಕ ಸ್ಥಳಗಳಲ್ಲಿ ಸಂಜೆ 5ರಿಂದ ಮುಂಜಾನೆ 5ಗಂಟೆವರೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಮುಂಬಯಿ ಪೊಲೀಸರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಕೋವಿಡ್ 19: ಆಸ್ಪತ್ರೆಯಿಂದ ಬಿಡುಗಡೆಯಾದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ
ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕಠಿಣ ನಿರ್ಬಂಧ ಜಾರಿಗೊಳಿಸಿರುವ ಸರ್ಕಾರ ಸಾರ್ವಜನಿಕರು ಗುಂಪುಗೂಡುವುದನ್ನು ನಿಷೇಧಿಸಿದ್ದು, ಈ ಆದೇಶ ಕೂಡಾ ಜನವರಿ 15ರವರೆಗೆ ಅನ್ವಯವಾಗಲಿದೆ. ನಗರದಲ್ಲಿ ಕೋವಿಡ್ ಜತೆಗೆ ನೂತನ ರೂಪಾಂತರ ತಳಿ ಒಮಿಕ್ರಾನ್ ಕೂಡಾ ಹೆಚ್ಚಳವಾಗುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆದೇಶದಲ್ಲಿ ವಿವರಿಸಿದೆ.
ಮಹಾರಾಷ್ಟ್ರದಲ್ಲಿ ಕಳೆದ 24ಗಂಟೆಗಳಲ್ಲಿ 5,368 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 198 ಒಮಿಕ್ರಾನ್ ಪ್ರಕರಣ ವರದಿಯಾಗಿತ್ತು. ಕಳೆದ ಎರಡು ದಿನಗಳಿಗೆ ಹೋಲಿಸಿದಲ್ಲಿ ಮುಂಬಯಿಯಲ್ಲಿ ಶೇ.37ರಷ್ಟು ಕೋವಿಡ್ ಪ್ರಕರಣಗಳು ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ.
ಭಾರತದಲ್ಲಿ ಒಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆ ಸಾವಿರಕ್ಕೆ ತಲುಪಿದ್ದು, 450 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ಹೇಳಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.