Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ವಿರುದ್ಧ ಕಠಿನ ಕ್ರಮ ಕೈಗೊಳ್ಳಲು ಸಿದ್ದರಾಮಯ್ಯಗೆ ಆಗ್ರಹ
Team Udayavani, Sep 16, 2024, 10:32 PM IST
ಬೆಂಗಳೂರು: ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಶಾಸಕ ಮುನಿರತ್ನ ನೀಡಿರುವ ಹೇಳಿಕೆಗೆ ಆ ಸಮುದಾಯದ ಕಾಂಗ್ರೆಸ್ ನಾಯಕರು ರೊಚ್ಚಿಗೆದ್ದು ಅದಕ್ಕಾಗಿ ಜಾತಿ ನಿಂದನೆ ಮಾಡಿರುವ ಶಾಸಕ ಮುನಿರತ್ನ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು ಎಂದು ಒಕ್ಕಲಿಗ ಸಮುದಾಯದ ಸಚಿವರಾದ ಚಲುವರಾಯಸ್ವಾಮಿ, ಎಂ.ಸಿ ಸುಧಾಕರ್, ಶಾಸಕರು ಮಾಗಡಿ ಶಾಸಕ ಬಾಲಕೃಷ್ಣ, ಕುಣಿಗಲ್ ಶಾಸಕ ರಂಗನಾಥ್, ವಿಧಾನಪರಿಷತ್ ಸದಸ್ಯರಾದ ರವಿ, ಪುಟ್ಟಣ್ಣ ಮತ್ತಿತರರು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಸಲ್ಲಿಸಿದ್ದಾರೆ.
ನಗರದಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಭೇಟಿಯಾದ ಒಕ್ಕಲಿಗ ಸಮುದಾಯದ ನಾಯಕರಲ್ಲಿ ಒಬ್ಬರಾದ ಕೃಷಿ ಸಚಿವ ಚಲುವರಾಯಸ್ವಾಮಿ ಮಾತನಾಡಿ, ಬಿಜೆಪಿ ಶಾಸಕ ಮುನಿರತ್ನ, ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಏನು ಮಾತನಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಕುಮಾರಸ್ವಾಮಿ ಯಾವ್ಯಾವುದೋ ವಿಚಾರ ಮಾತನಾಡುತ್ತಾರೆ. ಬದ್ಧತೆ ಇದ್ದರೆ, ಈ ವಿಚಾರ (ಮುನಿರತ್ನ ಹೇಳಿಕೆ)ಕ್ಕೆ ಉತ್ತರ ಕೊಡಲು ಹೇಳಿ. ಒಕ್ಕಲಿಗ ಸಮುದಾಯದ ನಾಯಕರೇ ಆದ ಅಶೋಕ್ ಮತ್ತು ಸಿ.ಟಿ. ರವಿ ಈ ಶಾಸಕನನ್ನು ಸಮರ್ಥನೆ ಮಾಡಿಕೊಳ್ಳುತ್ತಾರೆ. ಒಕ್ಕಲಿಗ ಹೆಣ್ಣುಮಗಳನ್ನು ಮಲಗಿಸಿ ಅಂತಾನಲ್ಲ ಅವನನ್ನು ಹೇಗೆ ಸಮರ್ಥನೆ ಮಾಡಿಕೊಳ್ಳುತ್ತಾರೆ?’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಮಾತನಾಡಿ ಮುನಿರತ್ನ ಮಾತನಾಡಿದ್ದು ಎನ್ನಲಾದ ಆಡಿಯೋದಿಂದ ಒಕ್ಕಲಿಗ ಹಾಗೂ ಪರಿಶಿಷ್ಟ ಜಾತಿ ಸಮುದಾಯದ ಜನರಿಗೆ ತುಂಬಾ ನೋವಾಗಿದೆ ಎಂದು ಹೇಳಿದರು. ಶಾಸಕ ಮುನಿರತ್ನ ವಿರುದ್ಧ ಎಲ್ಲ ಜಿಲ್ಲೆಗಳಲ್ಲೂ ಜಾತಿ ನಿಂದನೆ ಪ್ರಕರಣ ದಾಖಲಿಸುವಂತೆ ಕಾಂಗ್ರೆಸ್ ಪಕ್ಷದಿಂದಲೂ ಸೂಚನೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.