BGML ಜಮೀನು ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆ
ನೂತನ ಕೈಗಾರಿಕಾ ಟೌನ್‍ಶಿಪ್ ಯೋಜನೆ
Team Udayavani, Nov 30, 2021, 9:00 PM IST
ಬೆಂಗಳೂರು : ಕೋಲಾರ ಜಿಲ್ಲೆಯ ಕೆಜಿಎಪ್ ನ ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್ ( ಬಿಜಿಎಂಎಲ್ ) ಒಡೆತನದಲ್ಲಿರುವ ಭೂಮಿಯ ಸಮೀಕ್ಷಾ ವರದಿಯನ್ನು ಆದಷ್ಟು ಶೀಘ್ರವಾಗಿ
ನೀಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಸೂಚಿಸಿದ್ದಾರೆ.
ಮಂಗಳವಾರ ವಾಣಿಜ್ಯ ಮತ್ತು ಕೈಗಾರಿಕಾ, ಭಾರತ್ ಗೋಲ್ಡ್ ಮೈನ್ಸ್, ಭೂ ಮಾಪನ ಇಲಾಖೆ, ಗಣಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್ ನ ಬಳಕೆಯಾಗದೆ ಖಾಲಿ ಇರುವ ಸುಮಾರು 3212 ಎಕರೆ ಜಮೀನಿನಲ್ಲಿ ಹೊಸದಾಗಿ ಕೈಗಾರಿಕಾ ಟೌನ್‍ಶಿಪ್ ನಿರ್ಮಾಣ ಮಾಡುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ.
ಕೆಜಿಎಪ್ ಹಾಗೂ ಬಂಗಾರಪೇಟೆಯಲ್ಲಿ ಬಿಜಿಎಂಎಲ್ ನಲ್ಲಿರುವ ಭೂಮಿಯ ಸಮೀಕ್ಷೆ ನಡೆಸಿ ಅತೀ ಶೀಘ್ರವಾಗಿ ವರದಿಯನ್ನು ನೀಡಬೇಕು ಎಂದು ಭೂಮಾಪನ ಕಂದಾಯ ಹಾಗೂ ಭೂ ದಾಖಲೆಗಳ ಆಯುಕ್ತ ಮನೀಷ್ ಮೌದ್ಗೀಲ್ ಅವರಿಗೆ ಸೂಚಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ವಿಳಂಬ ಮಾಡದೆ, ಕೂಡಲೇ ಸಮೀಕ್ಷಾ ಕಾರ್ಯವನ್ನು ಆರಂಭಿಸಬೇಕು.15 ದಿನದೊಳಗೆ ವರದಿಯನ್ನು ನೀಡಿದರೆ, ಕೇಂದ್ರ ಸಚಿವ ಸಂಪುಟ ಸಭೆಯ ತೀರ್ಮಾನವನ್ನು ನೋಡಿಕೊಂಡು ನಂತರ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳೋಣ ಎಂದು ಹೇಳಿದ್ದಾರೆ ಎನ್ನಲಾಗಿದೆ.
ಈಗಾಗಲೇ ಸುಮಾರು 2 ಸಾವಿರ ಎಕರೆ ಜಮೀನನ್ನು ಸಮೀಕ್ಷೆ ನಡೆಸಲಾಗಿದ್ದು, ಬಾಕಿ ಇರುವ ಅಂದಾಜು 3 ಸಾವಿರಕ್ಕೂ ಹೆಚ್ಚಿನ ಜಮೀನಿನ ಸಮೀಕ್ಷಾ ಕಾರ್ಯ ಕೈಗೆತ್ತಿಕೊಳ್ಳಬೇಕು ಎಂದು ನಿದೇರ್ಶನ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ
ಇದೇ ಪ್ರದೇಶದಲ್ಲಿ ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಕೂಡ ಇಲ್ಲಿಯೇ ಹಾದು ಹೋಗುವುದರಿಂದ ಕೈಗಾರಿಕಾ ಬೆಳವಣಿಗೆಗೆ ಸಾಕಷ್ಟು ಸಹಕಾರಿಯಾಗಲಿದೆ. ಟೌನ್ ಶಿಪ್ ನಿರ್ಮಾಣ ಮಾಡಲು ಯೋಗ್ಯವಾಗಿರುವುದರಿಂದ ತ್ವರಿತವಾಗಿ ಸಮೀಕ್ಷೆಯನ್ನು ಮುಗಿಸಬೇಕು ಎಂದು ಸಭೆಯಲ್ಲಿ ಹೇಳಿದ್ದಾರೆ ಎಂದು ವಿಶ್ವಸನೀಯ ಮೂಲಗಳ ಖಚಿತಪಡಿಸಿವೆ.
ಈ ಪ್ರದೇಶವನ್ನು ಕೈಗಾರಿಕಾ ಬಳಕೆಗೆ ಬಳಸಿಕೊಳ್ಳುವ ಸಂಬಂಧ ಕರ್ನಾಟಕದವರೇ ಆದ ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಹ್ಲಾದ್ ಜೋಶಿ ಅವರದೊಂದಿಗೆ ತಾವು ಮತ್ತೊಮ್ಮೆ ಮಾತುಕತೆ ನಡೆಸುವುದಾಗಿ ಸಚಿವ ನಿರಾಣಿ ಅವರು ತಿಳಿಸಿದರು. ಕಳೆದ ಆಗಸ್ಟ್ ತಿಂಗಳ ನಲ್ಲಿಯೇ ಜೋಷಿ ಅವರನ್ನು ಭೇಟಿಯಾಗಿ ಕೆಜಿಎಪ್ ನಲ್ಲಿ ಟೌನ್‍ಶಿಪ್ ನಿರ್ಮಾಣ ಮಾಡುವ ಬಗ್ಗೆ ಮನವಿ ಪತ್ರದಲ್ಲಿ ಸುದೀರ್ಘವಾಗಿ ವಿವರಿಸಿದ್ದರು.
ಈ ಭೂಮಿಯನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಹಸ್ತಾಂತರ ಮಾಡಿದರೆ, ಹೆಚ್ಚಿನ ಬಂಡವಾಳ ಹೂಡಿಕೆ, ದೊಡ್ಡ ಮಟ್ಟದ ಕೈಗಾರಿಕೆಗಳು ಸ್ಥಾಪನೆಯಾಗಲಿದ್ದು, ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಸೇರಿದಂತೆ ಮತ್ತಿತರ ಭಾಗಗಳಲ್ಲಿ’ ಕೈಗಾರಿಕೆಗಳ ಉತ್ತೇಜನ ಸಾವಿರಾರು ಸ್ಥಳೀಯ ಜನರಿಗೆ ಉದ್ಯೋಗವಕಾಶಗಳು’ ಸೃಷ್ಟಿಯಾಗಲಿವೆ ಎಂದು ತಿಳಿಸಿದರು. ಕೆಜಿಎಪ್ ನಗರವು ರಾಜಧಾನಿ ಬೆಂಗಳೂರಿನಿಂದ ಸುಮಾರು 100 ಕಿ.ಮೀ ವ್ಯಾಪ್ತಿಯಲ್ಲಿದ್ದು, ವಿಶ್ವದರ್ಜೆಯ ರಾಷ್ಟ್ರೀಯ ಹೆದ್ದಾರಿಗಳು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಅತ್ಯುತ್ತಮ ರೈಲ್ವೆ ಸಂಪರ್ಕ ಹೊಂದಿದೆ.
ಕೆಜಿಎಪ್ ಚಿನ್ನದ ಗಣಿಯು ಅತ್ಯಂತ ಪುರಾತನವಾದ ಗಣಿ ಪ್ರದೇಶವಾಗಿದ್ದು, ಬ್ರಿಟಿಷರ ಕಾಲದಿಂದಲೇ ಇಲ್ಲಿ ಗಣಿಗಾರಿಕೆಯನ್ನು ನಡೆಸಲಾಗುತ್ತಿತು. 2001 ರಿಂದ ಬಿಜಿಎಂಎಲ್ ಸಂಪೂರ್ಣವಾಗಿ ಬಂದ್ ಆಗಿರುವ ಸ್ಥಗಿತಗೊಂಡಿದೆ.
ಇದನ್ನೂ ಓದಿ : ಗುರುದ್ವಾರದಲ್ಲಿ ಪೋಸ್ ಕೊಟ್ಟು ಪಜೀತಿಗೆ ಸಿಲುಕಿದ ಪಾಕ್ ಮಾಡೆಲ್
ಸಭೆಯಲ್ಲಿ ಹಾಜರಿದ್ದ ಭೂ ಮಾಪನ ಹಾಗೂ ಭೂ ದಾಖಲೆಗಳ ಆಯುಕ್ತ ಮನೀಷ್ ಮೌದ್ಗಲ್ , ಆಧುನಿಕ ತಂತ್ರಜ್ಞಾನದ ನೆರವು ಪಡೆದುಕೊಂಡು ಎಷ್ಟು ಸಾಧ್ಯವೋ, ಅಷ್ಟು ಬೇಗ ಸಮೀಕ್ಷೆಯನ್ನು ನಡೆಸಿ ವರದಿಯನ್ನು ನೀಡುವುದಾಗಿ ಸಭೆಗೆ ತಿಳಿಸಿದರು ಇಲಾಖೆಯ ನಂಬಲರ್ಹ ಮೂಲಗಳಿಂದ ತಿಳಿದು ಬಂದಿದೆ.
ಕೇಂದ್ರ ಸರ್ಕಾರದ ಖನಿಜ ಪರಿಶೋಧನೆ ನಿಗಮದ ವ್ಯವಸ್ಥಾಪಕ ನಿದೇರ್ಶಕ ಡಾ. ರಂಜನ್ ರಾಥ್ ಮಾತನಾಡಿ, ಪ್ರಸ್ತುತ ಸದ್ಯಕ್ಕೆ ಇಲ್ಲಿ ಚಿನ್ನದ ನಿಕ್ಷೇಪ ಸಿಗದಿರುವ ಕಾರಣ, ಯಾವುದೇ ಚಟುವಟಿಕೆಗಳು ನಡೆಯುತ್ತಿಲ್ಲ ಎಂದು ತಿಳಿಸಿದರು.
ಸಭೆಯಲ್ಲಿ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ,ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ ಗಣಿ ಇಲಾಖೆಯ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಕೆಐಎಡಿಬಿ ಸಿಇಒ ಡಾ.ಶಿವಶಂಕರ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.