ಮುರುಗೇಶ್ ನಿರಾಣಿ ದಿಢೀರ್ ದೆಹಲಿ ಭೇಟಿ : ರಾಜ್ಯ ಬಿಜೆಪಿಯಲ್ಲಿ ಹೆಚ್ಚಿದ ಕುತೂಹಲ
Team Udayavani, Jul 6, 2021, 8:02 PM IST
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಿರಂತರ ಚರ್ಚೆಗೆ ಗ್ರಾಸವಾಗಿರುವ ನಾಯಕತ್ವ ಬದಲಾವಣೆಯ ವಿಚಾರಕ್ಕೆ ತೆರೆ ಬಿದ್ದಿದೆ ಎನ್ನುವಷ್ಟಲ್ಲಿ ಮತ್ತೆ ಬೆಳವಣಿಗೆಗಳು ನಡೆಯುತ್ತಿವೆ.
ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ದಿಢೀರ್ ದೆಹಲಿಗೆ ತೆರಳಿರುವುದು ರಾಜ್ಯ ಬಿಜೆಪಿಯಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕರೆಯ ಮೇರೆಗೆ ದೆಹಲಿಗೆ ಭೇಟಿ ನೀಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಮಂಗಳವಾರ ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನಿರಾಣಿ ಭೇಟಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಅಮಿತ್ ಶಾ ಅವರೊಂದಿಗೆ ಮುರುಗೇಶ್ ನಿರಾಣಿ ಉತ್ತಮ ಬಾಂಧವ್ಯ ಇಟ್ಟುಕೊಂಡಿದ್ದು, ರಾಜ್ಯದಲ್ಲಿ ಹೊಸ ನಾಯಕತ್ವಕ್ಕೆ ಅವಕಾಶ ಕೊಡುವ ವಿಚಾರದಲ್ಲಿ ಅಮಿತ್ ಶಾ ಮುರುಗೇಶ್ ನಿರಾಣಿ ಅವರ ಪರ ಒಲವು ಹೊಂದಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಆದರೆ, ಸಚಿವ ಮರುಗೇಶ್ ನಿರಾಣಿ, ದೆಹಲಿ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ, ತಾವು ವಯಕ್ತಿಕ ಕಾರಣಕ್ಕೆ ದೆಹಲಿಗೆ ಆಗಮಿಸಿದ್ದು, ಯಾವುದೇ ನಾಯಕರ ಭೇಟಿಗೆ ಬಂದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಆದರೆ, ಅವರ ಆಪ್ತ ಮೂಲಗಳ ಪ್ರಕಾರ ಸಂಜೆ ಪಕ್ಷದ ಹೈಕಮಾಂಡ್ ನಾಯಕರಾದ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕೀಯದ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ :ಐಟಿ ಪೋರ್ಟಲ್ ಸಮಸ್ಯೆ ಶೀಘ್ರ ಇತ್ಯರ್ಥ : ಸಚಿವ ಅನುರಾಗ್ ಠಾಕೂರ್
ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆಯಾದರೆ, ಲಿಂಗಾಯತ ಸಮುದಾಯದವರಿಗೆ ವಿಶೇಷವಾಗಿ ಪಂಚಮಸಾಲಿ ಸಮುದಾಯದವರಿಗೆ ನೀಡಬೇಕೆಂಬ ಒತ್ತಡ ಹೆಚ್ಚಿರುವುದರಿಂದ ಪಂಚಮಸಾಲಿ ಸಮುದಾಯದಲ್ಲಿ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಲ್ಲಿ ಸಚಿವ ಮುರುಗೇಶ್ ನಿರಾಣಿ ವರ ಹೆಸರೂ ಕೇಳಿ ಬರುತ್ತಿರುವುದರಿಂದ ಅವರ ದೆಹಲಿ ಭೇಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಗುರುವಾರ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗುವುದರಿಂದ ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯ ಯಾವ ಸಂಸದರಿಗೆ ಸಚಿವ ಸ್ಥಾನ ಸಿಗುತ್ತದೆ ಎನ್ನುವದರ ಮೇಲೆಯೇ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗೆ ಪ್ರಾಧಾನ್ಯತೆ ದೊರೆಯಲಿದೆ ಎಂಬ ಮಾತುಗಳು ರಾಜ್ಯ ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.