ಮೈಸೂರು ಅತ್ಯಾಚಾರ ಪ್ರಕರಣ : ಸಂತ್ರಸ್ತೆಯ ಸ್ನೇಹಿತರಿಂದಲೇ ಕೃತ್ಯ?
Team Udayavani, Aug 28, 2021, 7:10 AM IST
ಮೈಸೂರು : ನಗರದ ಚಾಮುಂಡಿ ಬೆಟ್ಟದ ತಪ್ಪಲಿನ ನಿರ್ಜನ ಪ್ರದೇಶದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದ್ದು, ನಗರದ ಖಾಸಗಿ ಕಾಲೇಜೊಂದರ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.
ಘಟನೆಯ ಸಂಬಂಧ ಮೈಸೂರು- ಬೆಂಗಳೂರು ಪೊಲೀಸರ ಜಂಟಿ ತಂಡಕ್ಕೆ ಆರೋಪಿಗಳ ಸುಳಿವು ಲಭಿಸಿದ್ದು, ನಗರದ ಕಾಲೇಜೊಂದರಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಕೇರಳದ ಮೂವರು ಮತ್ತು ತಮಿಳುನಾಡಿನ ಒಬ್ಬ ವಿದ್ಯಾರ್ಥಿಯ ಮೇಲೆ ದೃಷ್ಟಿ ನೆಟ್ಟಿದ್ದಾರೆ. ಅತ್ಯಾಚಾರ ಘಟನೆಯ ಬಳಿಕ ಇವರು ಮೈಸೂರಿನ ಮನೆ ಖಾಲಿ ಮಾಡಿ ಕೇರಳ ಮತ್ತು ತಮಿಳುನಾಡಿನಲ್ಲಿ ತಲೆಮರೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅತ್ಯಾಚಾರ ನಡೆದ ದಿನ ಮೈಸೂರಿನಲ್ಲಿದ್ದ ಈ ನಾಲ್ವರು ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪರಾರಿಯಾಗಿದ್ದಾರೆ. ಬುಧವಾರ ನಡೆದ ಪರೀಕ್ಷೆಗೂ ಗೈರಾಗಿದ್ದರು ಎನ್ನಲಾಗಿದೆ.
ಈ ಸುಳಿವಿನ ಆಧಾರದಲ್ಲಿ ಮೈಸೂರು ಪೊಲೀಸರ ತಂಡ ಆರೋಪಿಗಳನ್ನು ಬಂಧಿಸಲು ಕೇರಳ ಮತ್ತು ತಮಿಳುನಾಡಿಗೆ ತೆರಳಿದೆ ಎಂದು ತಿಳಿದುಬಂದಿದೆ. ಘಟನೆಯ ಸಂಬಂಧ ಈಗಾಗಲೇ 40ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಸಂತ್ರಸ್ತೆಯ ಸ್ನೇಹಿತರೇ?
ಘಟನೆ ನಡೆದು 3 ದಿನಗಳಾದರೂ ಸಂತ್ರಸ್ತೆ ದೂರು, ಅಧಿಕೃತ ಹೇಳಿಕೆ ನೀಡಿಲ್ಲ. ಹೀಗಾಗಿ ದುಷ್ಕರ್ಮಿಗಳು ಈಕೆಗೆ ಪರಿಚಯದವರೇ ಎಂಬ ಅನುಮಾನ ವ್ಯಕ್ತವಾಗಿದೆ. ಆಕೆ ಹೇಳಿಕೆ ದಾಖಲಿಸದೆ, ದೂರು ನೀಡದೆ ಇರುವುದರಿಂದ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಸಂತ್ರಸ್ತೆ ದೂರು ನೀಡಲು ನಿರಾಕರಿಸಿದ್ದು, ಚೇತರಿಸಿಕೊಂಡ ಬಳಿಕ ಊರಿಗೆ ತೆರಳುವ ಯೋಚನೆಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
3 ಲಕ್ಷ ರೂ.ಗೆ ಬೇಡಿಕೆ
ದುಷ್ಕರ್ಮಿಗಳು ಅತ್ಯಾಚಾರ ಎಸಗಿದ ಬಳಿಕ ನನ್ನ ತಂದೆಗೆ ಕರೆ ಮಾಡಿ 3 ಲಕ್ಷ ರೂ. ಹಣ ತರಿಸುವಂತೆ ಒತ್ತಾಯಿಸಿದ್ದರು ಎಂದು ಸಂತ್ರಸ್ತೆಯ ಸ್ನೇಹಿತ ಹೇಳಿಕೆ ನೀಡಿದ್ದಾನೆ. ನಾನು ವಾಕಿಂಗ್ ನಡೆಸುವ ಸ್ಥಳದಲ್ಲಿ ಸ್ನೇಹಿತೆಯ ಜತೆ ಕುಳಿತಿದ್ದಾಗ ನಾಲ್ವರು ಏಕಾಏಕಿ ಬಂದು ಹಲ್ಲೆ ನಡೆಸಿದರು. ಸ್ನೇಹಿತೆಯನ್ನು ಎಳೆದುಕೊಂಡು ಹೋದರು. ನಾನು ಪ್ರಜ್ಞೆ ತಪ್ಪಿ ಬಿದ್ದೆ ಎಂದಿದ್ದಾನೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಘಟನ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಶೀಘ್ರದಲ್ಲೇ ಆರೋಪಿಗಳ ಪತ್ತೆ ಹಚ್ಚುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.