ವಿದ್ಯಾರ್ಥಿನಿ ಜೊತೆ ಮದುವೆಯ ನಾಟಕವಾಡಿ ದೈಹಿಕ ಸಂಪರ್ಕ ಬೆಳೆಸಿ ಕೈ ಕೊಟ್ಟ ಹಾಸ್ಟೆಲ್ ವಾರ್ಡನ್
Team Udayavani, Jun 1, 2022, 9:03 PM IST
ಮದ್ದೂರು: ವಿವಾಹವಾಗುವುದಾಗಿ ನಂಬಿಸಿ ದೈಹಿಕವಾಗಿ ಬಳಸಿಕೊಂಡು ನಂತರ ನಿಶ್ಚಿತಾರ್ಥವೂ ಮುಗಿದ ಬಳಿಕ ಮದುವೆಗೆ ನಿರಾಕರಿಸಿದ ಹಾಸ್ಟೆಲ್ ವಾರ್ಡನ್ ವಿರುದ್ಧ ವಿದ್ಯಾರ್ಥಿನಿಯೊಬ್ಬಳು ಮದ್ದೂರು ಠಾಣೆಗೆ ದೂರು ನೀಡಿರುವ ಘಟನೆ ನಡೆದಿದೆ.
ಏನಿದು ಘಟನೆ?:
ತಾಲೂಕಿನ ಕೊಪ್ಪ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ನಿಲಯ ಪಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆಕ್ಕಳಲೆ ಗ್ರಾಮದ ಸತೀಶ್, ಕಳೆದ ೪ ವರ್ಷದಿಂದ ಅದೇ ಹಾಸ್ಟೆಲ್‌ನಲ್ಲಿದ್ದ ಪಟ್ಟಣದ ವಿದ್ಯಾರ್ಥಿನಿಯೊಬ್ಬಳನ್ನು ಪುಸಲಾಯಿಸಿ ಪ್ರೀತಿಸುತ್ತಿದ್ದು, ಮದುವೆಯಾಗುತ್ತೇನೆ ಎಂದು ನಂಬಿಸಿ ನಿಶ್ಚಿತಾರ್ಥ ಮಾಡಿಕೊಂಡು ದೈಹಿಕವಾಗಿ ಬಳಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.
ನಿಶ್ಚಿತಾರ್ಥ ನಾಟಕವಾಡಿ ಗರ್ಭಪಾತ:
ಪ್ರೀತಿಸುತ್ತಿದ್ದ ಸಂದರ್ಭದಲ್ಲಿ ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಈ ಸಂದರ್ಭದಲ್ಲಿ ಯುವತಿಯು ಗರ್ಭಿಣಿಯಾಗಿದ್ದಾಳೆ. ಆಗ ನಿಶ್ಚಿತಾರ್ಥದ ನಾಟಕವಾಡಿ ಆಕೆಯನ್ನು ಪುಸಲಾಯಿಸಿದ ಆರೋಪಿ ಸತೀಶ್ ಮೂರು ಬಾರಿ ಗರ್ಭಪಾತ ಮಾಡಿಸಿದ್ದಾನೆ. ಈ ನಡುವೆ ನಿಶ್ಚಿತಾರ್ಥವೂ ಮಾಡಿಕೊಂಡು ಮದುವೆ ಮಾತುಕತೆ ನಡೆಸಿದ್ದರೆನ್ನಲಾಗಿದೆ.
ಮದುವೆ ಆಗಲ್ಲ ಎಂದು ಉಡಾಫೆ:
ಕಳೆದ ಕೆಲ ದಿನಗಳಿಂದ ಸತೀಶ್ ನಾನು ನಿನ್ನನ್ನು ಮದುವೆಯಾಗುವುದಿಲ್ಲ. ಸರ್ಕಾರಿ ನೌಕರಿಯಲ್ಲಿರುವವರನ್ನು ಮದುವೆಯಾಗುತ್ತೇನೆ ಎಂದು ಉಡಾಫೆ ಉತ್ತರ ನೀಡುತ್ತಾ, ಇಲ್ಲಸಲ್ಲದ ನೆಪವೊಡ್ಡಿ ತಪ್ಪಿಸಿಕೊಳ್ಳುತ್ತಿದ್ದಾನೆ. ಇದರಿಂದ ನನಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ನೊಂದ ಸಂತ್ರಸ್ತೆ ಸತೀಶ್ ವಿರುದ್ಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾಳೆ.
ಇದನ್ನೂ ಓದಿ : ಹುಣಸೂರು : ಕೊಟ್ಟಿಗೆಯಲ್ಲಿದ್ದ ಕರುವನ್ನೇ ಹೊತ್ತೊಯ್ದ ಚಿರತೆ : ಜೀವ ಭಯದಲ್ಲಿ ಗ್ರಾಮಸ್ಥರು
ಕ್ರಮ ಕೈಗೊಳ್ಳದ ಪೊಲೀಸರು:
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಂತ್ರಸ್ತೆಯ ಪೋಷಕರು ಆರೋಪಿಸಿದ್ದಾರೆ. ಆರೋಪಿ ಸತೀಶ್‌ನ ಬಳಿ ಹಣ ಪಡೆದುಕೊಂಡು ಪೊಲೀಸರು ಆತನನ್ನು ಬಿಟ್ಟು ಕಳುಹಿಸಿದ್ದಾರೆ ಎಂದು ಪೊಲೀಸರ ವಿರುದ್ಧ ಆರೋಪ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.