Mysuru Dasara: ವಿಶ್ವವಿಖ್ಯಾತ ಜಂಬೂಸವಾರಿ ಸಂಪನ್ನ; 5ನೇ ಬಾರಿ ಅಂಬಾರಿ ಹೊತ್ತ ಅಭಿಮನ್ಯು
ನಾಡದೇವಿ ಚಾಮುಂಡೇಶ್ವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪುಷ್ಪಾರ್ಚನೆ
Team Udayavani, Oct 12, 2024, 9:28 PM IST
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಅಂಗವಾಗಿ ವಿಜಯದಶಮಿ ದಿನದಂದು ಜಂಬೂಸವಾರಿಗೆ ಅದ್ಧೂರಿ ಚಾಲನೆ ದೊರೆಯಿತು. ನಾಡದೇವಿ ಚಾಮುಂಡೇಶ್ವರಿ ಸಹಿತವಿರುವ 750 ಕೆಜಿ ತೂಕದ ಚಿನ್ನದ ಅಂಬಾರಿಯ 5ನೇ ಬಾರಿಗೆ ಹೊತ್ತು ಅಭಿಮನ್ಯು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕುವ ಐತಿಹಾಸಿಕ ಕ್ಷಣವನ್ನು ಕೋಟ್ಯಾಂತರ ಜನರು ಕಣ್ತುಂಬಿಕೊಂಡರು.
ಶನಿವಾರ ಮಧ್ಯಾಹ್ನ 1.41 ರಿಂದ 2.10ರ ನಡುವೆಯ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಿತು. ಬಳಿಕ ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿ ಜಂಬೂ ಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದರು. ಈ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ.ಮಹಾದೇವಪ್ಪ, ಕನ್ನಡ-ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಜೊತೆಗಿದ್ದರು. ಜಂಬೂಸವಾರಿಯ ಚಾಮುಂಡೇಶ್ವರಿ ದೇವಿ ಪುಷ್ಪಾರ್ಚನೆ ವೇಳೆ ಸಂಸದ ಹಾಗೂ ರಾಜವಂಶಸ್ಥ ಯದುವೀರ ಒಡೆಯರ್ ಗೈರಾಗಿದ್ದರು.
ಚಿನ್ನದ ಅಂಬಾರಿ 5ನೇ ಬಾರಿಗೆ ಹೊತ್ತ ಕ್ಯಾಪ್ಟನ್ ಅಭಿಮನ್ಯುಗೆ ಕುಮ್ಕಿ ಆನೆಗಳಾದ ಹಿರಣ್ಯ ಮತ್ತು ಲಕ್ಷ್ಮೀ ಜೊತೆಗಿದ್ದು ಸಹಕಾರ ನೀಡಿದರೆ, ಧನಂಜಯ ನಿಶಾನೆ ಆನೆಯಾಗಿದ್ದ. ಒಟ್ಟು 9 ಆನೆಗಳು ದಸರಾ ಮೆರವಣಿಗೆಯಲ್ಲಿ ಸಾಗಿದವು. ಅರಮನೆಯಿಂದ ಆರಂಭಗೊಂಡ ಜಂಬೂಸವಾರಿ ಜಯಚಾಮರಾಜ ವೃತ್ತ, ಕೃಷ್ಣರಾಜೇಂದ್ರ ವೃತ್ತ, ಸಯ್ಯಾಜಿ ರಾವ್ ರಸ್ತೆ, ಆಯುರ್ವೇದ ಆಸ್ಪತ್ರೆ ವೃತ್ತ, ಆರ್ಎಂಸಿ ವೃತ್ತ, ಬಂಬೂಬಜಾರ್ ಮೂಲಕ ಬನ್ನಿಮಂಟಪ ತಲುಪಿತು.
ಮೈಸೂರು ದಸರಾ ಮಹೋತ್ಸವ ವಿಜಯದಶಮಿಯ ಜಂಬೂಸವಾರಿ ಮೆರವಣಿಗೆಯಲ್ಲಿ ಅರಮನೆಯಿಂದ ಬನ್ನಿಮಂಟಪದವರೆಗೆ 31 ಜಿಲ್ಲೆಗಳ ಕಲೆ, ಸಾಹಿತ್ಯ, ಸಂಸ್ಕೃತಿ ವೈಶಿಷ್ಟ್ಯ, ಆಚಾರ ವಿಚಾರ, ಭೌಗೋಳಿಕ ಹಿನ್ನೆಲೆ ಹಾಗೂ ಇಲಾಖಾವಾರು, ನಿಗಮ ಮಂಡಳಿ , ಸರ್ಕಾರದ ಯೋಜನೆಗಳು, ಸಾಧನೆಗಳ ಕುರಿತ 51 ಸ್ತಬ್ಧ ಚಿತ್ರಗಳು ಜಂಬೂಸವಾರಿಯಲ್ಲಿ ಭಾಗಿಯಾಗಿದ್ದವು. ಜನರಿಂದ ತಮಟೆ, ಡೋಲು ವಾದ್ಯಕ್ಕೆ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ.
ಮಳೆಯ ಸಿಂಚನ:
ವಿಜಯದಶಮಿಯ ಜಂಬೂಸವಾರಿ ಮೆರವಣಿಗೆ ಆರಂಭಕ್ಕಿಂತ ಮೊದಲು ಮಳೆಯ ಸಿಂಚನದಿಂದ ಮೆರವಣಿಗೆಯು ಅರ್ಧ ತಾಸು ವಿಳಂಬವಾಗಿ ಆರಂಭವಾಯಿತು. ವಿಶ್ವವಿಖ್ಯಾತ ಜಂಬೂಸವಾರಿಯನ್ನು ಕೋಟ್ಯಂತರ ಭಕ್ತರು ಕಾತರ ಕಾದು ಕಣ್ತಿಂಬಿಕೊಂಡಿದ್ದಾರೆ. ಅಂಬಾರಿಯಲ್ಲಿ ಆಸಿನವಾಗಿದ್ದ ನಾಡ ದೇವತೆ ಚಾಮುಂಡೇಶ್ವರಿಯನ್ನು ಕಂಡು ಭಕ್ತರು ಪುನೀತರಾದರು. ಇನ್ನು ಜಂಬೂಸವಾರಿ ನಡೆಯುವ ದಾರಿಯುದ್ದಕ್ಕೂ ಮುಂಜಾಗ್ರತ ಕ್ರಮವಾಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.