Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
ವರನಟ ಡಾ.ರಾಜಕುಮಾರ್ ಶಹಬ್ಬಾಸ್ ಗಿರಿ ಕೊಟ್ಟಿದ್ದೇಕೆ ಗೊತ್ತಾ?, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಂಸಾಳೆ ಕಲೆ ಪ್ರದರ್ಶನ
Team Udayavani, Nov 25, 2024, 11:37 PM IST
ಮೈಸೂರು: ಕಂಸಾಳೆ ಕಲೆಯಲ್ಲಿ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ್ದ ನಗರದ ಬಂಡಿಕೇರಿ ನಿವಾಸಿ ಕುಮಾರಸ್ವಾಮಿ (73) ಸೋಮವಾರ ನಿಧನರಾದರು.
ಮೃತರು ನಾಡಿನ ಪ್ರಖ್ಯಾತ ಜನಪದ ಕಲಾವಿದ ಕಂಸಾಳೆ ಮಹಾದೇವಯ್ಯನವರ ಪುತ್ರ. ಇವರಿಗೆ ಇಬ್ಬರು ಗಂಡು, ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಮಂಗಳವಾರ ಬೆಳಗ್ಗೆ 11 ಗಂಟೆಗೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಚಿತಾಗಾರದಲ್ಲಿ ಇವರ ಅಂತ್ಯಸಂಸ್ಕಾರ ನಡೆಯಲಿದೆ.
1951ರಲ್ಲಿ ಮೈಸೂರಿನ ಬಂಡಿಕೇರಿಯಲ್ಲಿ ಜನಿಸಿದ ಕುಮಾರ ಸ್ವಾಮಿ ಅವರು ಬಾಲ್ಯದಿಂದಲೇ ತಂದೆ ಜೊತೆ ಜನಪದ ಕಲೆ ಕಂಸಾಳೆಯನ್ನು ಮೈಗೂಡಿಸಿಕೊಂಡರು. ತಮ್ಮದೇ ತಂಡವನ್ನು ಕಟ್ಟಿಕೊಂಡು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಂಸಾಳೆ ಪ್ರದರ್ಶನ ನೀಡುವ ಮೂಲಕ ಕನ್ನಡ ನಾಡಿನ ಕಲೆಯನ್ನು ವಿಶ್ವದ ಎಲ್ಲೆಡೆ ಪಸರಿಸಿದ್ದರು. 2021ರಲ್ಲಿ ರಾಜ್ಯೋತ್ಸವ ಪ್ರಶಸ್ತಿಗೂ ಭಾಜನರಾಗಿದ್ದರು. ಇವರ ಸಾಧನೆಯನ್ನು ಮೆಚ್ಚಿ ಹಲವಾರು ಸಂಘ ಸಂಸ್ಥೆಗಳು ಪ್ರಶಸಿಗಳನ್ನು ನೀಡಿ ಗೌರವಿಸಿವೆ.
ಶಿವರಾಜ್‌ಕುಮಾರ್ ಚಿತ್ರದ ಹಾಡಿಗೆ ನೃತ್ಯ ಸಂಯೋಜನೆ:
ನಟ ಶಿವರಾಜ್ ಕುಮಾರ್ ಅಭಿನಯದ, ನಾಗಾಭರಣ ನಿರ್ದೇಶನದ ಸೂಪರ್ ಹಿಟ್ ಸಿನಿಮಾ “ಜನುಮದ ಜೋಡಿ’ಯ “ಕೋಲು ಮಂಡೆ ಜಂಗಮ..’ಹಾಡಿಗೆ ಕಂಸಾಳೆ ನೃತ್ಯ ಸಂಯೋಜನೆ ಮಾಡಿ ವರನಟ ಡಾ. ರಾಜಕುಮಾರ್ ಅವರಿಂದ ಶಹಬ್ಬಾಸ್‌ಗಿರಿ ಪಡೆದುಕೊಂಡಿದ್ದರು.
ಸಿಎಂ ಸಿದ್ದರಾಮಯ್ಯ ಸಂತಾಪ:
“ಮೈಸೂರಿನ ಹಿರಿಯ ಜಾನಪದ ಕಲಾವಿದ ಕುಮಾರಸ್ವಾಮಿಯವರ ನಿಧನದಿಂದ ದುಃಖಿತನಾಗಿದ್ದೇನೆ. ತಮ್ಮ ತಂದೆ ಕಂಸಾಳೆ ಮಹಾದೇವಯ್ಯ ಅವರಂತೆ ಕಲಾಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು, ಜಾನಪದ ಸೊಬಗನ್ನು ಕನ್ನಡಿಗರಿಗೆ ಉಣಬಡಿಸಿದ ಕುಮಾರಸ್ವಾಮಿ ಅವರ ಕಲಾಸೇವೆ ಅಜರಾಮರ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬವರ್ಗ ಮತ್ತು ಬಂಧುಮಿತ್ರರಿಗೆ ನನ್ನ ಸಂತಾಪಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ.
ಮೈಸೂರಿನ ಹಿರಿಯ ಜಾನಪದ ಕಲಾವಿದ ಕುಮಾರಸ್ವಾಮಿ ಅವರ ನಿಧನದಿಂದ ದುಃಖಿತನಾಗಿದ್ದೇನೆ. ತಮ್ಮ ತಂದೆ ಕಂಸಾಳೆ ಮಹಾದೇವಯ್ಯ ಅವರಂತೆ ಕಲಾಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು, ಜಾನಪದ ಸೊಬಗನ್ನು ಕನ್ನಡಿಗರಿಗೆ ಉಣಬಡಿಸಿದ ಕುಮಾರಸ್ವಾಮಿ ಅವರ ಕಲಾಸೇವೆ ಅಜರಾಮರ.
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬವರ್ಗ… pic.twitter.com/DRpLliaeNJ
— Siddaramaiah (@siddaramaiah) November 25, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ
Bengaluru: ಬೈಕ್ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು
Bengaluru: ಪಾದಚಾರಿ ಮಾರ್ಗದಲ್ಲಿ ಕಾರು ಚಾಲನೆ: ಕೇಸ್ ದಾಖಲು
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
Renukaswamy case: ದರ್ಶನ್ ವಿರುದ್ಧ ಸಾಕ್ಷ್ಯ “ಸೃಷಿ’: ವಕೀಲ ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.