Mysuru: ಮಹಿಷಾ ಪ್ರತಿಮೆ ಪುಷ್ಪಾರ್ಚನೆಗೆ ಪೊಲೀಸರ ತಡೆ: ಆಕ್ರೋಶ
Team Udayavani, Sep 30, 2024, 1:48 AM IST
ಮೈಸೂರು: ಮಹಿಷ ಮಂಡಲೋತ್ಸವ ಆಚರಣೆ ಹಮ್ಮಿಕೊಂಡಿದ್ದ ಟೌನ್‌ಹಾಲ್ ಆವರಣದಲ್ಲಿ ರವವಿವಾರ ಕೆಲಕಾಲ ಗೊಂದಲದ ವಾತಾವರಣ ಉಂಟಾಗಿತ್ತು. ಕಾರ್ಯಕ್ರಮ ನಡೆಸುತ್ತಿದ್ದವರು ತಾವು ಚಾಮುಂಡಿ ಬೆಟ್ಟಕ್ಕೆ ಹೋಗಿ ಮಹಿಷಾ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು. ಪೊಲೀಸರು ನಮ್ಮಲ್ಲಿ ಕೇವಲ ಐದು ಜನರನ್ನು ಕರೆದುಕೊಂಡು ಹೋಗಿ ಎಂದು ಕೇಳಿದರು. ನಿಷೇಧಾಜ್ಞೆ ಇರುವುದರಿಂದ ಆಗುವುದಿಲ್ಲ ಎಂದು ಪೊಲೀಸರು ಹೇಳಿದ್ದರಿಂದ ಆಕ್ರೋಶಕ್ಕೆ ಕಾರಣವಾಯಿತು.
ಬಳಿಕ ಅಲ್ಲೇ ಇದ್ದ ಅಂಬೇಡ್ಕರ್ ಪ್ರತಿಮೆ ಮುಂದೆ ನಿಂತು ಜೈಕಾರದ ಘೋಷಣೆ ಕೂಗಿದರು. ಅನಂತರ ವೇದಿಕೆ ಕಾರ್ಯಕ್ರಮ ನಡೆಯಿತು. ಇದಾದ ಬಳಿಕವೂ ಮಹಿಷ ದಸರಾ ಆಚರಣೆ ಸಮಿತಿಯವರು ಬೆಟ್ಟಕ್ಕೆ ಹೋಗಲು ಪಟ್ಟು ಹಿಡಿದರು. ಆಗ ಪೊಲೀಸರು, ಜ್ಞಾನಪ್ರಕಾಶ ಸ್ವಾಮೀಜಿ ಹಾಗೂ ಮಾಜಿ ಮೇಯರ್ ಪುರುಷೋತ್ತಮ ಅವರನ್ನು ಜೀಪಿನಲ್ಲಿ ಹತ್ತಿಸಿಕೊಂಡರು. ನೇರವಾಗಿ ಅಶೋಕಪುರಂನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ನಡೆಯುತ್ತಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನಾ ಕಾರ್ಯಕ್ರಮದ ವೇದಿಕೆ ಬಳಿಗೆ ಬಿಟ್ಟರು. ಅವರಿಬ್ಬರೂ ವೇದಿಕೆಗೆ ಹೋಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ದಸರಾ ಉದ್ಘಾಟನೆಗೆ ಅಡ್ಡಿಯ ಎಚ್ಚರಿಕೆ
ಮೈಸೂರು: ಚಾಮುಂಡಿಬೆಟ್ಟದಲ್ಲಿ ಮಹಿಷಾ ಪ್ರತಿಮೆಗೆ ಪುಷ್ಪಾರ್ಚನೆಗೆ ಜಿಲ್ಲಾಡಳಿತ ಅವಕಾಶ ಕೊಡದ ಹಿನ್ನೆಲೆಯಲ್ಲಿ ಸರಕಾರ ನಡೆಸುವ ದಸರಾ ಮಹೋತ್ಸವದ ಉದ್ಘಾಟನೆಗೆ ಅಡ್ಡಿಪಡಿಸಲಾಗುವುದು ಎಂದು ಮಾಜಿ ಮೇಯರ್ ಪುರುಷೋತ್ತಮ್ ಎಚ್ಚರಿಕೆ ನೀಡಿದರು.
ಅ. 12ರಂದು ಅಶೋಕ ಚಕ್ರವರ್ತಿಯ ಜನ್ಮ ದಿನವಿದ್ದು, ಜಂಬೂ ಸವಾರಿಯ ದಿನದಂದು ಅಶೋಕಪುರಂನಿಂದ ಪುರಭವನದವರೆಗೆ ಅಶೋಕ ಮಹಾರಾಜರ ಭಾವಚಿತ್ರವನ್ನು ಮೆರವಣಿಗೆ ಮೂಲಕ ತರುತ್ತೇವೆ. ಜಿಲ್ಲಾಡಳಿತ ಇದಕ್ಕೆ ಅವಕಾಶ ಕೊಡಬೇಕು. ಇಲ್ಲದಿದ್ದರೆ ದಸರೆಗೆ ಅಡ್ಡಿ ಪಡಿಸಲಾಗುವುದು ಎಂದರಲ್ಲದೇ, ದಸರಾವನ್ನು ನೀವು ಯಾವ ರೀತಿ ಮಾಡುತ್ತೀರಾ ನಾನು ನೋಡುತ್ತೇನೆ ಎಂದು ಸವಾಲು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.