ನಿರ್ಜನ ಪ್ರದೇಶದಲ್ಲಿ ಕತ್ತು ಕೊಯ್ದು ಯುವಕನ ಕೊಲೆ ಯತ್ನ: ಸಹಾಯಕ್ಕೆ ಬಂದ ಹುಲ್ಲಹಳ್ಳಿ ಪಿಎಸ್ಐ
Team Udayavani, Jun 12, 2022, 4:52 PM IST
ನಂಜನಗೂಡು : ದುಷ್ಕರ್ಮಿಗಳ ತಂಡವೊಂದು ಯುವನಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾದ ಘಟನೆ ತಾಲೂಕಿನ ಹಡೆಯಾಲ ಸಮೀಪದ ಈರೆಗೌಡನ ಹುಂಡಿ ಬಳಿಯ ನಿರ್ಜನ ಪ್ರದೇಶದಲ್ಲಿ ರವಿವಾರ ನಡೆದಿದೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕನನ್ನು ದಾರಿ ಹೋಕರು ಕಂಡು ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾರೆ, ವಿಷಯ ತಿಳಿದು ಘಟನಾ ಸ್ಥಳಕ್ಕೆ ಧಾವಿಸಿದ ಹುಲ್ಲಹಳ್ಳಿ ಪಿಎಸ್ ಐ ಮಹೇಶ್ ಕುಮಾರ್ ರಕ್ತದ ಮಡುವಿನಲ್ಲಿ ಬಿದ್ದು ಸಾವು ಬದುಕಿನ ನಡುವೆ ಒದ್ದಾಡುತ್ತಿದ್ದ ಯುವನನ್ನು ಕೂಡಲೇ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಡೆಯುವ ವೇಳೆ ಯುವಕನ ಜೊತೆಗಿದ್ದು ರಕ್ಷಣೆಗೆ ಮುಂದಾಗಿದ್ದಾರೆ.
ಘಟನೆ ವಿವರ : ಗುಂಡ್ಲುಪೇಟೆಯಿಂದ ಇಬ್ಬರು ವ್ಯಕ್ತಿಗಳ ಜೊತೆ ಈ ಯುವಕನೂ ಒಂದೇ ಬೈಕ್ ನಲ್ಲಿ ಬಂದಿದ್ದಾನೆ ಎನ್ನಲಾಗಿದೆ. ಹಡೆಯಾಲ ಸಮೀಪದ ಈರೆಗೌಡನ ಹುಂಡಿ ಬಳಿಯ ನಿರ್ಜನ ಪ್ರದೇಶಕ್ಕೆ ಬಂದ ವೇಳೆ ಯುವಕನ ಕತ್ತು ಹಾಗೂ ಹಿಮ್ಮಡಿಗಳನ್ನ ಕೊಯ್ದು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ :ನೀರಾವರಿ ಯೋಜನಾ ಕಾಮಗಾರಿ ವಿಳಂಬತೆಗೆ ದಂಡ ಹಾಕಲು ನಿರ್ಧಾರ: ಕಾರಜೋಳ
ಗಂಭೀರ ಗಾಯಗೊಂಡ ಯುವಕ ಕೂಗಲಾಗದೆ, ನಡೆಯಲೂ ಆಗದೆ ತೆವಳಿಕೊಂಡೆ ನಾಗಣಾಪುರ ಮುಖ್ಯರಸ್ತೆಗೆ ಬಂದಿದ್ದಾನೆ. ಈ ವೇಳೆ ಜಮೀನಿಗೆ ತೆರಳುತ್ತಿದ್ದ ಅಲ್ಲಿನ ಸ್ಥಳೀಯರು ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕನನ್ನು ಕಂಡು ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ತಿಳಿಸಿದ್ದಾರೆ. ಈ ವೇಳೆ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪಿಎಸ್ ಐ ಮಹೇಶ್ ಕುಮಾರ್ ಗಾಯಗೊಂಡು ನರಳುತ್ತಿದ್ದ ಯುವಕನನ್ನ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನಿಸಿ ಅಲ್ಲಿ ಅತನ ಚಿಕೀತ್ಸೆಗೆ ಎಲ್ಲ ಕ್ರಮ ಕೈಗೊಂಡರು.
ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.