Nagamangala Riot: ಗಲಭೆಯಲ್ಲಿ ಪಾಕ್‌ ಪರ ಘೋಷಣೆ ಕೂಗಿರುವ ಅನುಮಾನವಿದೆ: ಆರ್‌.ಅಶೋಕ್‌

ಕೋಮುದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವುದು ಸ್ಪಷ್ಟ, ಗಣೇಶೋತ್ಸವವನ್ನೇ ಟಾರ್ಗೆಟ್ ಮಾಡಿರುವಂತಿದೆ: ವಿಪಕ್ಷ ನಾಯಕ

Team Udayavani, Sep 16, 2024, 6:39 PM IST

R.Ashok

ಬೆಂಗಳೂರು: ಮಂಡ್ಯ (Mandya) ಜಿಲ್ಲೆಯ ನಾಗಮಂಗಲ (Nagamangala)ದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಪರ ಘೋಷಣೆಗಳ ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಿದ್ದು, ಈ ಕೋಮುದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ (R.Ashok) ಹೇಳಿದ್ದಾರೆ.

ಚಿಕ್ಕಮಗಳೂರಲ್ಲಿ ಬೈಕ್​​ನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದಿರುವ ಪುಂಡಾಟ, ದಾವಣಗೆರೆಯ ಗಾಂಧಿನಗರ ಹಾಗೂ ಅಹ್ಮದ್ ನಗರಗಳಲ್ಲಿ ಹಿಂದೂ ಯುವಕರು ಬಾವುಟ ಕಟ್ಟಿದ್ದಕ್ಕೆ ಮತಾಂಧ ಪುಂಡರು ಅವರ ಮೇಲೆ ಹಲ್ಲೆ ಮಾಡಿರುವುದು, ಇವನ್ನೆಲ್ಲಾ ಗಮನಿಸುತ್ತಿದ್ದರೆ ಈ ಪ್ರಚೋದನಕಾರಿ ಘಟನೆಗಳು ಗಣೇಶೋತ್ಸವವನ್ನೇ ಟಾರ್ಗೆಟ್ ಮಾಡಿರುವಂತಿದೆ’’ ಎಂದು ಎಕ್ಸ್ ಸಂದೇಶದಲ್ಲಿ ಆರ್‌. ಅಶೋಕ್ ಉಲ್ಲೇಖಿಸಿದ್ದಾರೆ.

ಮತೀಯ ಮೂಲಭೂತವಾದಿಗಳ ದೊಡ್ಡ ಜಾಲವಿದೆ: 
‘‘ಇಂತಹ ಘಟನೆಗಳು ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ಸಂದರ್ಭದಲ್ಲಿಯೂ ನಡೆದಿತ್ತು. ಹಿಂದೂಗಳ ಹಬ್ಬಗಳು, ಉತ್ಸವಗಳು, ಸಂಭ್ರಮಾಚರಣೆಗಳನ್ನೇ ಗುರಿಯಾಗಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಇಂತಹ ದುಷ್ಕೃತ್ಯಗಳ ಹಿಂದೆ ಮತೀಯ ಮೂಲಭೂತವಾದಿ ಸಂಘಟನೆಗಳ ದೊಡ್ಡ ಜಾಲವೇ ಇರುವಂತಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಅಂತಾರಾಜ್ಯ, ಅಂತಾರಾಷ್ಟ್ರೀಯ ನಂಟು ಹೊಂದಿರುವ ಇಂತಹ ವ್ಯವಸ್ಥಿತ, ಪ್ರಾಯೋಜಿತ, ಜಾಲ ಬೇಧಿಸುವುದು ಸ್ಥಳೀಯ ಪೊಲೀಸರಿಂದ ಅಸಾಧ್ಯವಾಗಿದ್ದು, ಕೂಡಲೇ ಈ ಪ್ರಕರಣಗಳನ್ನ ಎನ್​ಐಎ ತನಿಖೆಗೆ ಒಪ್ಪಿಸಬೇಕು ಎಂದು ಗೃಹ ಸಚಿವ ಜಿ. ಪರಮೇಶ್ವರ್‌ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯರ ಒತ್ತಾಯಿಸುತ್ತೇನೆ’’ ಎಂದು ಅಶೋಕ್ ಆಗ್ರಹಿಸಿದ್ದಾರೆ.

ನಾಗಮಂಗಲ ಗಲಭೆ ಸಂಬಂಧ ದಾಖಲಾಗಿರುವ ಎಫ್​ಐಆರ್​​ನಲ್ಲಿ ಕೇರಳ ಮೂಲದ ಇಬ್ಬರ ಹೆಸರಿರುವುದು ತಿಳಿದ ಬಳಿಕ ಇದನ್ನೇ ಪ್ರಮುಖ ಅಸ್ತ್ರವನ್ನಾಗಿಸಿಕೊಂಡಿರುವ ವಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.

ಪಿಎಫ್‌ಐಗೆ ಭಯ ಇಲ್ಲದಾಗಿದೆ:
ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ರಾಜಾರೋಷವಾಗಿ ಘೋಷಣೆ ಕೂಗುತ್ತಾ ಹೋಗಿದ್ದಾರೆ. ಈ ಸರ್ಕಾರ ಬಂದ ಮೇಲೆ ಪಿಎಫ್ಐನವರಿಗೆ ಭಯ ಇಲ್ಲದಂತಾಗಿದೆ. ಒಂದು ಕಡೆ ರಾಹುಲ್ ವಿದೇಶಗಳಲ್ಲಿ ಭಾರತ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಮತ್ತೆ ವಿಭಜನೆ ಹುನ್ನಾರಕ್ಕೆ ಕಾಂಗ್ರೆಸ್ ಮುಂದಾಗಿದೆ. ನಾಗಮಂಗಲ, ಮಂಗಳೂರು, ಚಿಕ್ಕಮಗಳೂರು ಘಟನೆಗಳಿಂದ ಮತ್ತೆ ವಿಭಜನೆ ಕೆಲಸಕ್ಕೆ ಮುಂದಾಗಿದೆ ಎಂದು ಅಶೋಕ್ ಟೀಕಿಸಿದ್ದಾರೆ.

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.