Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

ಇಂತಹ ಪ್ರಕರಣಗಳು ಪದೇ ಪದೇ ಮರುಕಳಿಸಲು ಕಾಂಗ್ರೆಸ್‌ ಸರಕಾರದ ಮೃದು ಧೋರಣೆ: ದ.ಕ.ಜಿಲ್ಲಾ ಬಿಜೆಪಿ

Team Udayavani, Sep 13, 2024, 1:35 AM IST

Mangaluru-BjP

ಮಂಗಳೂರು: ನಾಗಮಂಗಲ ಘಟನೆಯ ಆರೋಪಿ ಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗಳ ಒಕ್ಕೂಟ ಮಂಗಳೂರು ಇದರ ನೇತೃತ್ವದಲ್ಲಿ ಗುರುವಾರ ಕದ್ರಿ ಮಲ್ಲಿಕಟ್ಟೆ ವೃತ್ತದ ಬಳಿ ಪ್ರತಿಭಟನೆ ನಡೆಯಿತು.

ವಿಹಿಂಪ ಪ್ರಾಂತ ಸಹಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ಮಾತನಾಡಿ, ಗಣಪತಿ ವಿಸರ್ಜನೆ ವೇಳೆ ನಡೆದ ಘಟನೆ ಹಿಂದೂಗಳ ಧಾರ್ಮಿಕ ಭಾವನೆಯನ್ನು ಘಾಸಿಗೊಳಿಸಿದೆ. ನಾಗಮಂಗಲದ ಘಟನೆಯ ಹಿಂದೆ ನಿಷೇಧಿತ ಪಿಎಫ್‌ಐ ಸಂಘಟನೆಯ ಕೈವಾಡವಿರುವ ಶಂಕೆಯಿದೆ. ಆದ್ದರಿಂದ ಘಟನೆ ಬಗ್ಗೆ ಸರಿಯಾದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ವಿಹಿಂಪ ಪ್ರಾಂತ ಕಾರ್ಯಾಧ್ಯಕ್ಷ ಪ್ರೊ| ಎಂ.ಬಿ.ಪುರಾಣಿಕ್‌ ಮಾತನಾಡಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಸ್ತ ಸಮಾಜವನ್ನು ಒಗ್ಗೂಡಿಸುತ್ತದೆ. ಆದರೆ ಇಂತಹ ಕಾರ್ಯಕ್ರಮದಲ್ಲಿ ದಾಂಧಲೆ ನಡೆದಿರುವುದು ಖಂಡನೀಯ ಎಂದರು.

ವಿಹಿಂಪ ದ.ಕ. ಜಿಲ್ಲಾಧ್ಯಕ್ಷ ಎಚ್‌.ಕೆ.ಪುರುಷೋತ್ತಮ, ವಿಹಿಂಪ – ಬಜರಂಗದಳ ಮುಖಂಡರಾದ ಭುಜಂಗ ಕುಲಾಲ್‌, ಶಿವಾನಂದ ಮೆಂಡನ್‌, ಪುನೀತ್‌ ಅತ್ತಾವರ, ಮನೋಹರ ಸುವರ್ಣ, ಸಂಘನಿಕೇತನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಪಾಧ್ಯಕ್ಷ ಸತೀಶ್‌ ಪ್ರಭು, ಮಹಾನಗರ ಪಾಲಿಕೆ ಸದಸ್ಯರಾದ ಕಿರಣ್‌ ಕೋಡಿಕಲ್‌, ಶಕೀಲಾ ಕಾವ, ಸುಧಾಕರ ರಾವ್‌ ಪೇಜಾವರ ಸಹಿತ ಹಲವಾರು ಪ್ರಮುಖರು ಪಾಲ್ಗೊಂಡಿದ್ದರು.

ನಾಗಮಂಗಲ ಪ್ರಕರಣ: ದ.ಕ.ಜಿಲ್ಲಾ ಬಿಜೆಪಿ ಖಂಡನೆ
ಮಂಗಳೂರು: ನಾಗಮಂಗಲದಲ್ಲಿ ಗಣೇಶೋತ್ಸವದ ಮೆರವಣಿಗೆ ಮೇಲೆ ಅನ್ಯಮತೀಯ ಮತಾಂಧ ಶಕ್ತಿಗಳು ಕಲ್ಲು ತೂರಾಟ ಮಾಡುವುದರ ಮೂಲಕ ದುಷ್ಕೃತ್ಯ ಮೆರೆದಿದ್ದಾರೆ. ಇಂತಹ ಪ್ರಕರಣಗಳು ಪದೇಪದೇ ಮರುಕಳಿಸಲು ಕಾಂಗ್ರೆಸ್‌ ಸರಕಾರ ಕ್ರಿಮಿನಲ್‌ಗ‌ಳ ಬಗ್ಗೆ ತೋರುತ್ತಿರುವ ಮೃದು ಧೋರಣೆಯೇ ಪ್ರಮುಖ ಕಾರಣ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷ ಸತೀಶ್‌ ಕುಂಪಲ ಆರೋಪಿಸಿದ್ದಾರೆ.

ಘಟನೆಯನ್ನು ಖಂಡಿಸಿರುವ ಅವರು, ಕಟ್ಟಡಗಳ ಒಳಗಿನಿಂದ ಹಿಂದೂಗಳನ್ನು ಗುರಿಯಾಗಿಸಿ ಕಲ್ಲು ತೂರಿರುವುದು ಪೂರ್ವಯೋಜಿತ ಕೃತ್ಯ ಎಂದು ಸಾಬೀತಾಗಿದೆ. ಕಾಂಗ್ರೆಸ್‌ ಸರಕಾರ ಬಂದ ಕರ್ಮಕ್ಕೆ ಹಿಂದೂಗಳು ಯಾತನೆ ಅನುಭವಿಸುತ್ತಿದ್ದಾರೆ ಎಂದಿದ್ದಾರೆ. ಪೊಲೀಸರು ಗಲಭೆ ನಡೆಸಿದ ಕಿಡಿಗೇಡಿಗಳನ್ನು ಬಂಧಿಸುವ ಬದಲು ಸ್ಥಳೀಯ ಹಿಂದೂಗಳ ಮನೆಗಳಿಗೆ ನುಗ್ಗಿ ಅಮಾಯಕ ಯುವಕರನ್ನು ಠಾಣೆಗೆ ಕರೆದೊಯ್ಯುವ ಮೂಲಕ ಗಾಯದ ಮೇಲೆ ಬರೆ ಎಳೆದಂತೆ ಕಾಂಗ್ರೆಸ್‌ ಸರಕಾರ ನಡೆದುಕೊಳ್ಳುತ್ತಿದೆ. ತಪ್ಪಿತಸ್ಥರಿಗೆ ಕಠಿನ ಶಿಕ್ಷೆಯಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮಡಿಕೇರಿಯಲ್ಲೂ ಪ್ರತಿಭಟನೆ
ಮಡಿಕೇರಿ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿ ನಲ್ಲಿ ಗಣೇಶ ಮೂರ್ತಿಯ ಮೆರವಣಿಗೆ ಸಂದರ್ಭ ನಡೆದ ಅಹಿತಕರ ಘಟನೆಗಳನ್ನು ಖಂಡಿಸಿ ಹಿಂದೂ ಸಂಘಟನೆಗಳು ಮಡಿಕೇರಿ ಯಲ್ಲಿ ಪ್ರತಿಭಟನೆ ನಡೆಸಿದವು.

ನಗರದ ಜನರಲ್‌ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ಗಲಭೆ ನಡೆಸಿ ಮೆರವಣಿಗೆಗೆ ತಡೆಯೊಡ್ಡಿದ ತಪ್ಪಿತಸ್ಥರ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಹಿಂದೂ ಸಂಘಟನೆಗಳ ಪ್ರಮುಖರು, ಬಿಜೆಪಿ ನಾಯಕರು, ಕಾರ್ಯಕರ್ತರು ಹಾಗೂ ವಿವಿಧ ಗಣೇಶೋತ್ಸವ ಸಮಿತಿಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Payan

Movie Release: ರಾಜ್ಯಾದ್ಯಂತ “ಪಯಣ್‌’ ಸಿನೆಮಾ ಸೆ.20ರಂದು ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

PDO-Arrest

Mangaluru: ನಿವೃತ್ತ ಪಿಡಿಒ ಕೊಲೆ ಆರೋಪಿ ಬಂಧನ

Adyar: ಹೊಂಡ ಗುಂಡಿಯಿಂದ ಸಂಕಷ್ಟ, ಪಾದಚಾರಿಗಳಿಗೆ ಕೆಸರಿನ ಸಿಂಚನ

Adyar: ಹೊಂಡ ಗುಂಡಿಯಿಂದ ಸಂಕಷ್ಟ, ಪಾದಚಾರಿಗಳಿಗೆ ಕೆಸರಿನ ಸಿಂಚನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.